Site icon Vistara News

Virat kohli : ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ವಿಶೇಷ ದಾಖಲೆ ಬರೆದ​ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

Virat Kohli

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2024 ರ (IPL 2024) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ವಿರಾಟ್ ಕೊಹ್ಲಿ (Virat kohli) ತಮ್ಮ 100 ನೇ ಟಿ 20 ಪಂದ್ಯವನ್ನು ಆಡಿದರು. ಒಂದೇ ಸ್ಥಳದಲ್ಲಿ 100 ಟಿ 20 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ 69 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

ಈ ಅಪ್ರತಿಮ ಕ್ರೀಡಾಂಗಣವು 2008 ರಿಂದ ಅವರ ಐಪಿಎಲ್ ತವರು ಮೈದಾನವಾಗಿದೆ. 2008 ಐಪಿಎಲ್​ನ ಉದ್ಘಾಟನಾ ಋತುವಾಗಿದೆ. ಐಪಿಎಲ್ ಇತಿಹಾಸದಲ್ಲಿ 2008 ರಿಂದ ಒಂದೇ ಫ್ರಾಂಚೈಸಿಗಾಗಿ ಆಡುತ್ತಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಎಂಎಸ್ ಧೋನಿ ಮೊದಲ ಐಪಿಎಲ್ ಋತುವಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದರೆ. ಚೆನ್ನೈ ಮೂಲದ ತಂಡವನ್ನು ಎರಡು ವರ್ಷ ಅಮಾನತುಗೊಳಿಸಿದಾಗ ಅವರು ರೈಸಿಂಗ್ ಪುಣೆ ಸೂಪರ್ಜೈಂಟ್ಸ್​ ಪರ ಎರಡು ಋತುಗಳಲ್ಲಿ ಆಡಬೇಕಾಯಿತು.

ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ 3276 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ಪಂದ್ಯಗಳನ್ನು ಆಡಿದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿದ್ದಾರೆ.

ಕೊಹ್ಲಿಗೆ ಮಿಶ್ರ ಫಲ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಪ್ರಸಕ್ತ ಋತುವಿನಲ್ಲಿ ವಿರಾಟ್ ಕೊಹ್ಲಿ ತಮ್ಮ ಅಭಿಯಾನವನ್ನು ಅದ್ಭುತವಾಗಿ ಪ್ರಾರಂಭಿಸಿದ್ದಾರೆ. ಬಲಗೈ ಬ್ಯಾಟರ್​ ಮೊದಲ ಪಂದ್ಯದಲ್ಲಿ ಬ್ಯಾಟ್​ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಆದರೆ ಬೇಗನೆ ಪುಟಿದೆದ್ದರು.

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ 20 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು. ಆದಾಗ್ಯೂ, ಅವರು ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡುವ ಮೂಲಕ ಪುಟಿದೇಳಿದರು.

ಫಾಫ್ ಡು ಪ್ಲೆಸಿಸ್, ಕ್ಯಾಮರೂನ್ ಗ್ರೀನ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಅವರಂತಹ ಇತರ ದೊಡ್ಡ ಆಟಗಾರರು ವಿಫಲವಾದ ನಂತರ ಭಾರತದ ಮಾಜಿ ನಾಯಕ 49 ಎಸೆತಗಳಲ್ಲಿ 77 ರನ್ ಗಳಿಸಿ ಆರ್​ಸಿಬಿಯ ಜವಾಬ್ದಾರಿ ತೆಗೆದುಕೊಂಡಿದ್ದರು. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅವರು 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದ್ದರು.

Exit mobile version