Virat kohli : ಒಂದೇ ಬಾರಿಗೆ 110 ಕೋಟಿ ರೂಪಾಯಿ ಕಳೆದುಕೊಳ್ಳಲಿದ್ದಾರೆ ವಿರಾಟ್​ ಕೊಹ್ಲಿ - Vistara News

ಪ್ರಮುಖ ಸುದ್ದಿ

Virat kohli : ಒಂದೇ ಬಾರಿಗೆ 110 ಕೋಟಿ ರೂಪಾಯಿ ಕಳೆದುಕೊಳ್ಳಲಿದ್ದಾರೆ ವಿರಾಟ್​ ಕೊಹ್ಲಿ

Virat Kohli: ಕ್ರೀಡಾ ಉತ್ಪನ್ನಗಳ ತಯಾರಿಕಾ ಕಂಪನಿಯೊಂದರ ಒಪ್ಪಂದವನ್ನು ವಿರಾಟ್​ ಕೊಹ್ಲಿ ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ವರದಿಯಾಗಿದೆ.

VISTARANEWS.COM


on

Virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್​ ಬ್ಯಾಟರ್​ ವಿರಾಟ್ ಕೊಹ್ಲಿ (Virat kohli) ಪ್ರಸ್ತುತ ವೈಯಕ್ತಿಕ ಕಾರಣಗಳಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಿದ್ದಾರೆ. ಹೀಗಾಗಿ ಅವರು ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದರು. ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಇನ್ನೂ ಘೋಷಿಸಲಾಗಿಲ್ಲ. ಆದಾಗ್ಯೂ ಕೊನೆಯ ಮೂರು ಟೆಸ್ಟ್​ ಪಂದ್ಯಗಳಿಗೆ ಅವರ ಲಭ್ಯತೆಯ ಬಗ್ಗೆ ತೀವ್ರ ಊಹಾಪೋಹಗಳಿವೆ. ಏತನ್ಮಧ್ಯೆ ವಿರಾಟ್ ಕೊಹ್ಲಿ ಆದಾಯ ಮತ್ತು ಕ್ರಿಕೆಟ್ ಹೊರತುಪಡಿಸಿದ ಆದಾಯದ ವಿಚಾರದಲ್ಲಿ ಹೊಸ ಸುದ್ದಿಯೊಂದು ಬಂದಿದೆ.

ಮೂಲವೊಂದರ ಪ್ರಕಾರ ವಿರಾಟ್ ಕೊಹ್ಲಿ, ಜನಪ್ರಿಯ ಕ್ರೀಡಾ ಆಕ್ಸೆಸರೀಸ್ ಬ್ರಾಂಡ್​ ಪೂಮಾ ಇಂಡಿಯಾದೊಂದಿಗಿನ ದೀರ್ಘಕಾಲದ ಪಾಲುದಾರಿಕೆ ಕೊನೆಗೊಳಿಸುವ ಸಾಧ್ಯತೆಯಿದೆ. ಬ್ರಾಂಡ್ ನೊಂದಿಗೆ ಎಂಟು ವರ್ಷಗಳ ಒಡನಾಟದ ನಂತರ ಅವರು ನಿರ್ಗಮಿಸುವುದು ಅನೇಕರಿಗೆ ಆಶ್ಚರ್ಯದ ವಿಚಾರ. ಯಾಕೆಂದರೆ 2017 ರಲ್ಲಿ 110 ಕೋಟಿ ರೂ.ಗಳ ಒಪ್ಪಂದದೊಂದಿಗೆ ವಿರಾಟ್ ಕೊಹ್ಲಿಯ ಬ್ರಾಂಡ್ ನೊಂದಿಗಿನ ಸಂಬಂಧ ಪ್ರಾರಂಭವಾಗಿತತ್ತು. ಇದು ಭಾರತೀಯ ಕ್ರೀಡೆಗಳಲ್ಲಿ ಹೆಚ್ಚು ಚರ್ಚೆಗ ಒಳಗಾದ ದೊಡ್ಡ ಮೊತ್ತದ ಒಪ್ಪಂದವಾಗಿತ್ತು. ಅದನ್ನೂ ಈಗ ಕೊನೆಗೊಳಿಸುವ ಮೂಲಕ ಅವರು 110 ಕೋಟಿ ರೂಪಾಯಿ ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಮತ್ತೆ ಅದು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : Jasprit Bumrah: ನಂ.1 ಸ್ಥಾನ ಅಲಂಕರಿಸಿ ಹಲವು ದಾಖಲೆ ಬರೆದ ಜಸ್​ಪ್ರೀತ್​ ಬುಮ್ರಾ

ಕ್ರೀಡಾ ಪಾದರಕ್ಷೆಗಳ ತಯಾರಿಕೆಯ ಬ್ರಾಂಡ್ ಆಗಿರುವ ಅಗಿಲಿಟಾಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್​​ನ ಅಂಬಾಸಿಡರ್ ಆಗಿ ವಿರಾಟ್ ಕೊಹ್ಲಿ ಹೊಸ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಅಧಿಕೃತ ಹೇಳಿಕೆಗಳನ್ನು ಪೂಮಾ ಮತ್ತು ಅಗಿಲಿಟಾಸ್ ಸ್ಪೋರ್ಟ್ಸ್ ಎರಡೂ ಪ್ರಕಟಿಸಿಲ್ಲ ಎಂದು ವರದಿ ಹೇಳಿದೆ.

ಆಯ್ಕೆಗಾರರಿಗೆ ಸಮಸ್ಯೆ

ಏತನ್ಮಧ್ಯೆ, ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ಗೆ ತಂಡ ಘೋಷಿಸುವಲ್ಲಿ ಆಯ್ಕೆದಾರರಿಗೆ ಎದುರಾಗಿರುವ ಅಡಚಣೆಗಳಲ್ಲಿ ಒಂದು ವಿರಾಟ್ ಕೊಹ್ಲಿ ಲಭ್ಯತೆಯ ಬಗ್ಗೆ ಸ್ಪಷ್ಟತೆಯ ಕೊರತೆ. ಎಬಿ ಡಿವಿಲಿಯರ್ಸ್ ಪ್ರಕಾರ ಅವರ ಮತ್ತು ಪತ್ನಿ ಅನುಷ್ಕಾ ಶರ್ಮಾ ಅವರ ಎರಡನೇ ಮಗುವಿನ ಜನ್ಮ ನೀಡಿದ ಕಾರಣ ಕೌಟುಂಬಿಕ ಕಾಳಜಿಗಾಗಿ ಭಾರತದ ಮಾಜಿ ನಾಯಕ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ಕೋಚ್ ಬ್ರೆಂಡನ್ ಮೆಕಲಮ್ ಅವರನ್ನು ಕೊಹ್ಲಿ ಬಗ್ಗೆ ಕೇಳಿದಾಗ. ಸ್ಟಾರ್ ಆಟಗಾರ ಪಂದ್ಯಕ್ಕೆ ಬರಲು ಸಜ್ಜಾಗಿದ್ದಾರೆ ಎಂದು ಹೇಳಿದ್ದರು.

ವಿರಾಟ್ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಅವರ ಆಗಮನ ಆ ತಂಡದ ಬಲವನ್ನು ಸುಧಾರಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಭಾರತೀಯ ಕ್ರಿಕೆಟ್​ನಲ್ಲಿ ಆಳದಲ್ಲಿ ಹಲವಾರು ಪ್ರತಿಭೆಗಳಿವೆ. ಆದ್ದರಿಂದ ನಾವು ಎದುರಾಳಿ ತಂಡದ ಪ್ರತಿಯೊಬ್ಬ ಆಟಗಾರನನ್ನು ಗೌರವಿಸುತ್ತೇವೆ,” ಎಂದು ಮೆಕಲಮ್ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’ (Akshaya Tritiya 2024). ಹಿಂದುಗಳ ಪವಿತ್ರ ದಿನಗಳಲ್ಲಿ (Akshaya Tritiya 2024) ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತʼಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ.

VISTARANEWS.COM


on

Akshaya Tritiya 2024
Koo
Prof. Vidwan Navinashastri Ra. Puranika (writers, Sanskrit lecturers, culture thinkers and astrologers)

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)
ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ (Akshaya Tritiya 2024) ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ.ಹಿಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ಜಯಂತಿ, ಉತ್ಸವಗಳು, ಆರಾಧನೆ ಇತ್ಯಾದಿ ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ನಮ್ಮ ಈ ಪುಣ್ಯ ಭೂಮಿ ಭಾರತದಲ್ಲಿ ಎಲ್ಲಾ ಜನರು ಅತ್ಯಂತ ಪ್ರೀತಿಯಿಂದ, ಸಂತೋಷದಿಂದ ಬೆಸೆದುಕೊಂಡು ಇರಲು ಮುಖ್ಯ ಕಾರಣವೇನೆಂದರೆ, ನಮ್ಮ ಪೂರ್ವಜರು ಹಾಕಿಕೊಟ್ಟಂತಹ ಸಂಸ್ಕೃತಿ, ಪರಂಪರೆ ಹಾಗೂ ಕಾಲಕಾಲಕ್ಕೆ ಆಚರಿಸುವ ಹಬ್ಬ – ಹರಿದಿನಗಳು.
ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಾಗೂ ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ. ಹಬ್ಬಗಳೇ ನಮ್ಮ ಭಾರತದ ಉಸಿರು ಎಂದರೂ ತಪ್ಪಾಗಲಿಕ್ಕಿಲ್ಲ.
ಸನಾತನ ವೈದಿಕ ಹಿಂದೂ ಧರ್ಮದಲ್ಲಿ ಸಾಕಷ್ಟು ಹಬ್ಬ-ಹರಿದಿನಗಳು ಉತ್ಸವಗಳು ಆಚರಣೆಯಲ್ಲಿವೆ.
ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’. ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತ” ಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ದಿವಸ ಸಾಮಾನ್ಯವಾಗಿ ಯಾವುದೇ ಒಳ್ಳೆ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣಗಳಲ್ಲಿ ಉಲ್ಲೇಖವಿದೆ.

Akshaya Tritium

ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತ

ಪಂಚಾಂಗದಲ್ಲಿ ಅಕ್ಷಯ ತೃತೀಯದಂದು ಸೂರ್ಯ ಮತ್ತು ಚಂದ್ರರು ಏಕಕಾಲದಲ್ಲಿ ತಮ್ಮ ತಮ್ಮ ಶಕ್ತಿಯುತಸ್ಥಾನ – ಉಚ್ಚರಾಶಿಯಲ್ಲಿ (ಸೂರ್ಯ-ಮೇಷರಾಶಿಯಲ್ಲಿ ಮತ್ತು ಚಂದ್ರ – ವೃಷಭರಾಶಿಯಲ್ಲಿ) ಇರುವದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ಸೂರ್ಯನು ಆತ್ಮ ಮತ್ತು ದೇಹ ಪ್ರತಿಬಿಂಬಿಸಿದರೆ, ಚಂದ್ರನು ಮನಸ್ಸು ಮತ್ತು ಬುದ್ದಿ ಮೇಲೆ ಪ್ರಭಾವ ಬೀರುತ್ತಾನೆ. ಈ ರೀತಿಯಾಗಿ ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಎಂದು ಹೇಳುವರು. ಅಕ್ಷಯ ತೃತೀಯವು ಇಡೀ ವರ್ಷದಲ್ಲಿ ಬರುವ ಒಂದು ಅತ್ಯಂತ ಶುಭದಿನವಾಗಿದೆ.ಹಾಗಾಗಿ‌ ಮನೆಯಲ್ಲಿ ಪೂಜೆ ಹೋಮ ಹವನಾದಿಗಳನ್ನು ಮಾಡುವುದಾದರೆ ಅಥವಾ ಚಿನ್ನ ಖರೀದಿ ಮಾಡುವುದಾದರೆ ಇದು ಸೂಕ್ತವಾದ ದಿನ.ಇದರಿಂದ ಮತ್ತಷ್ಟು ನಮ್ಮಲ್ಲಿ ಸುಖ ಸಮೃದ್ದಿ ಸಂಪತ್ತು ಹೇರಳವಾಗುತ್ತದೆ.ಅಲ್ಲದೇ ಈ ದಿನದಂದು ವಿಷ್ಣು, ಲಕ್ಷ್ಮಿ ಹಾಗೂ ಕುಬೇರನನ್ನು ಜನರು ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಹಿಂದೂ ಪುರಾಣದ ಪ್ರಕಾರ ತ್ರೇತಾಯುಗವು ಆರಂಭವಾದದ್ದು ಈ ಅಕ್ಷಯ ತೃತೀಯದ ಶುಭದಿನದಂದೇ ಎನ್ನುವ ಉಲ್ಲೇಖವಿದೆ.

ಅಕ್ಷಯ ತೃತೀಯಕ್ಕೆ ಪುರಾಣದ ನಂಟು

ವೈಶಾಖ ಮಾಸಕ್ಕೆ ಸೂರ್ಯ ಅಭಿಮಾನಿ ದೇವತೆ. ಸೂರ್ಯನು ಬೆಳಕು ಮತ್ತು ಶಕ್ತಿಯ ಉಗಮ ಸ್ಥಾನ. ಸೂರ್ಯ ಜಗದ ಕಣ್ಣು. ಸೂರ್ಯ ಜಗವನ್ನು ಬೆಳಗುವವನು ಹೌದು. ಅವನ ಆಂತರ್ಯದಲ್ಲಿರುವುದೇ ಪ್ರಬಲವಾದ ಅಗ್ನಿ. ಅಗ್ನಿಯ ಮೊದಲ ಮಗನೇ ಹಿರಣ್ಯ (ಬಂಗಾರ). ಸೂರ್ಯ-ಅಗ್ನಿ-ಬಂಗಾರದ ಸಂಬಂಧ ಹೀಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ವೈಶ್ವಾನರಾಗ್ನಿಯ ರೂಪದಲ್ಲಿ ನಾನು ಎಲ್ಲರ ಹೃದಯದಲ್ಲಿರುತ್ತೇನೆ ಎಂದು. ವಿಸ್ತರಿಸಿ ಅರ್ಥೈಸುವುದಾದರೆ ನಾವು ಬಂಗಾರವನ್ನು ಧರಿಸಿಕೊಂಡಾಗ ನಮ್ಮ ಹೃದಯವಾಸಿಯಾದ ಅಗ್ನಿಯನ್ನು ಅವನ ಮಗ ಹಿರಣ್ಯ (ಬಂಗಾರ)ನಿಂದಲೇ ಅಲಂಕರಿಸದಂತಾಗುವುದು.
ಅಕ್ಷಯವೆಂದರೆ ಕ್ಷಯವಿಲ್ಲದ್ದು, ಕಡಿಮೆ ಇಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನವಿಲ್ಲದ್ದು. ಇದು ಸಮದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತತೆಯ ಪ್ರತೀಕ.ಧರ್ಮವು ಕರ್ತವ್ಯವನ್ನು, ಆಧ್ಯಾತ್ಮಿಕತೆಯನ್ನು ಅರ್ಥವು ಸಂಪತ್ತನ್ನು, ಕಾಮವು ಭೌತಿಕ ಸಂತೋಷವನ್ನು ಸೂಚಿಸುವ ಆಕಾಂಕ್ಷೆಗಳನ್ನು ಸಂಕೇತಿಸಿದರೆ, ಮೋಕ್ಷ ಈ ಭವಬಂಧನದಿಂದ ಮುಕ್ತವಾಗಿ ಏಕತ್ವದಲ್ಲಿ ಲೀನವಾಗುವುದರ ಸಂಕೇತವಾಗಿದೆ. ಈ ನಾಲ್ಕು ಪುರುಷಾರ್ಥಗಳ ಪೈಕಿ ಯಾವುದಾದರೊಂದರ ಆರಂಭ ಮಾಡುವುದಿದ್ದರೂ ಅದಕ್ಕೆ ಎಲ್ಲ ರೀತಿಯಿಂದಲೂ ಅನುಕೂಲಕರವಾದ ಶುಭ ದಿನವೇ ಈ ಅಕ್ಷಯ ತೃತೀಯ.

ಅಕ್ಷಯ ತೃತೀಯ ಮಹತ್ವ ಏನು?

ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಪ್ರಿಯವಾದ ಹೇಮ (ಚಿನ್ನ) ರಜತಾದಿ ಒಡವೆಗಳನ್ನು ಖರೀದಿಸಿ ಅರ್ಪಿಸಿ ಕೃತಾರ್ಥರಾಗುವರು ಭಾರತೀಯ ಆಸ್ತಿಕರು. ವಿಷ್ಣು ಸಹಸ್ರನಾಮದಲ್ಲಿ ಹೇಳಿದಂತೆ ವಿಷ್ಣು ಸುವರ್ಣ ವರ್ಣದವನು. ಮಾತ್ರವಲ್ಲ, ಅಷ್ಟಶ್ವರ್ಯಗಳ ಅಧಿಪತಿ ಕುಬೇರ. ಈ ಒಂದು ದಿನ ಸ್ವತಃ ಐಶ್ವರ್ಯ ದೇವತೆ ಲಕ್ಷ್ಮಿಯನ್ನು ಪೂಜಿಸುತ್ತಾನೆ ಎಂದು ಲಕ್ಷ್ಮೀತಂತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ದೈವಭಕ್ತರಿಗೆ ಇದೊಂದೇ ದಿನ ಕುಬೇರ ಲಕ್ಷ್ಮೀ ಪೂಜೆ ಮಾಡಲು ಅವಕಾಶ. ವಿಶೇಷವಾಗಿ ತುಪ್ಪದ ದೀಪ ಹಚ್ಚಿ ಪೂಜಿಸಲಾಗುತ್ತದೆ.

Akshaya Tritium photo

ಪುರಾಣ ಪುಣ್ಯ ಕಥೆಗಳಲ್ಲಿ ಅಕ್ಷಯ ತೃತೀಯದ ವಿಶೇಷತೆ

ಈ ದಿನ ಹಲವು ಮಹತ್ಕಾರ್ಯಗಳು ಶುರುವಾದ ದಿನ ಕೃತಯುಗ (ಸತ್ಯ ಯುಗ) ಶುರುವಾದ ದಿನ ಎಂದು ಹೇಳಲಾಗುತ್ತದೆ. ವೇದವ್ಯಾಸರು ಗಣಪತಿ ಆಶೀರ್ವಾದ ಪಡೆದು ಮಹಾಭಾರತ ಬರೆಯಲು ಪ್ರಾರಂಭಿಸಿದ ದಿನ. ಗಂಗಾ ಮಾತೆ ಕೈಲಾಸದಿಂದ ಭೂಮಿಗೆ ಇಳಿದ ದಿನ ಎಂದು ಹೇಳಲಾಗುತ್ತದೆ. ಈ ದಿನ ಹಲವು ಮಹಾತ್ಮರು ಹುಟ್ಟಿದ ದಿನ ಜಗಜ್ಯೋತಿ ಬಸವಣ್ಣ ಹುಟ್ಟಿದ ದಿನ. ಬಲರಾಮ ಜಯಂತಿ ಅನ್ನೂ ಇಂದು ಆಚರಿಸಲಾಗುತ್ತದೆ. ವಿಷ್ಣು ಪರಶುರಾಮನಾಗಿ ಅವತಾರವೆತ್ತಿದ ದಿನ. ಇನ್ನೂ ಹಲವು ಮಹತ್ ಘಟನೆಗಳು ಈ ದಿನ ನಡೆದಿವೆ ಎಂದು ಪುರಾಣಗಳು ಹೇಳುತ್ತವೆ. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ ದಿನ. ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು ಈ ಅಕ್ಷಯ ತೃತೀಯದ ದಿನವೇ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದ ದಿನ.
ಈ ದಿನ ವಿಷ್ಣು ಮತ್ತು ಲಕ್ಷ್ಮಿ ಗಂಗಾಸ್ನಾನ ಮಾಡಿ, ಗಂಗೆಯನ್ನು ಪುಜಿಸಿದ್ದರೆಂದು. ಅಂದಿನಿಂದ ಗಂಗಾ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆ ಎಂಬ ರೂಢಿ ಬಂದಿತು ಎಂದು ಹೇಳಲಾಗುತ್ತದೆ. ಕೃಷ್ಣನು ಕುಚೇಲನನ್ನು ಸತ್ಕರಿಸಿದ ಪುಣ್ಯ ದಿನ. ಈ ಎಲ್ಲ ವಿಶೇಷತೆಗಳು ನಡೆದದ್ದು ಈ ಅಕ್ಷಯ ತೃತೀಯ ದಿನದಂದೇ ಎಂದು ಪುರಾಣಗಳ ಕಥೆಗಳು ಹೇಳುತ್ತವೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಜ್ಯೋತಿಷ ಶಾಸ್ತ್ರದ ಮೂಲಕ ಅಕ್ಷಯ ತೃತೀಯ

ಅಕ್ಷಯ ತೃತೀಯ ಯಾವ ನಕ್ಷತ್ರದಲ್ಲಿ ಬಂದರೆ ಹೆಚ್ಚು ಶ್ರೇಷ್ಠ?
ಈ ಹಬ್ಬ ‘ತೃತೀಯ ತಿಥಿ’ (ತದಿಗೆಯ ದಿನ) ಯಲ್ಲಿ ಮತ್ತು ‘ವೃಷಭ ರಾಶಿ’ಯ ದಿನ ಆಚರಣೆ ಮಾಡುತ್ತಾರೆ. ಆದರೆ ಈ ವೃಷಭ ರಾಶಿ ಮತ್ತು ತೃತೀಯ ತಿಥಿ ಎರಡೂ ಜೊತೆಯಲ್ಲಿ ಬರುವಾಗ ಅಂದು ಮೂರು ನಕ್ಷತ್ರಗಳಲ್ಲಿ (ಕೃತಿಕಾ, ರೋಹಿಣಿ, ಮೃಗಶಿರ) ಯಾವುದಾದರೊಂದು ಬರುವ ಸಾಧ್ಯತೆ ಇದೆ. ಅಕ್ಷಯ ತೃತೀಯ, ಶುಕ್ಲ ಪಕ್ಷದ ಮೂರನೇ ದಿನ / ತೃತೀಯ ತಿಥಿ ಯಲ್ಲಿ ಬರುತ್ತದೆ.

7 ಗ್ರಹಗಳು 360 ಡಿಗ್ರಿ ವೃತ್ತದ ಯಾವ ಯಾವ ಡಿಗ್ರಿ ಯಲ್ಲಿ ಉಚ್ಚರಾಗಿರುತ್ತಾರೆ.
ಸೂರ್ಯ: ಮೇಷದ 19ನೇ ಡಿಗ್ರಿ (ಅಂದರೆ 18°00′ – 18°59′); (ಪೂರ್ಣ ವೃತ್ತದ 19ನೆ ಡಿಗ್ರಿ)
ಚಂದ್ರ: ವೃಷಭರಾಶಿಯ 3ನೇ ಡಿಗ್ರಿ; (ಪೂರ್ಣ ವೃತ್ತದ 33ನೆ ಡಿಗ್ರಿ);
ಗುರು: ಕಟಕ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 105ನೆ ಡಿಗ್ರಿ);
ಬುಧ: ಕನ್ಯಾ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 165ನೆ ಡಿಗ್ರಿ);
ಶನಿ: ತುಲಾ ರಾಶಿಯ 21ನೆ ಡಿಗ್ರಿ; (ಪೂರ್ಣ ವೃತ್ತದ 201ನೆ ಡಿಗ್ರಿ);
ಮಂಗಳ: ಮಕರ ರಾಶಿಯ 28ನೆ ಡಿಗ್ರಿ; (ಪೂರ್ಣ ವೃತ್ತದ 298ನೆ ಡಿಗ್ರಿ);
ಶುಕ್ರ: ಕುಂಭ ರಾಶಿಯ 27ನೆ ಡಿಗ್ರಿ; (ಪೂರ್ಣ ವೃತ್ತದ 327ನೆ ಡಿಗ್ರಿ);

ಡಿಗ್ರಿ ಲೆಕ್ಕಾಚಾರ

ಒಂದು ಪೂರ್ಣ ವೃತ್ತ = 360 ಡಿಗ್ರಿ. ಈ 360 ಡಿಗ್ರಿ ವೃತ್ತವನ್ನ 12 (ರಾಶಿಗಳು) ಭಾಗಗಳಾಗಿ ಮಾಡಿದಾಗ ಒಂದೊಂದು ರಾಶಿಗೆ 30 ಡಿಗ್ರಿ ಆಗುತ್ತದೆ. ಈ 360 ಡಿಗ್ರಿ ವೃತ್ತವನ್ನ 27 ನಕ್ಷತ್ರಗಳಿಗೆ ಹಂಚಿದರೆ ಒಂದೊಂದು ನಕ್ಷತ್ರಕ್ಕೆ 13° 20′ ಬರುತ್ತದೆ. 27 ನಕ್ಷತ್ರಗಳನ್ನ 12 ರಾಶಿಗಳಿಗೆ ಹಂಚಿದರೆ ಒಂದೊಂದು ರಾಶಿಗೆ ಎರಡೂವರೆ ನಕ್ಷತ್ರಗಳು ಬರುತ್ತವೆ. ಒಂದು ನಕ್ಷತ್ರದಲ್ಲಿ ನಾಲ್ಕು ಪಾದಗಳಿರುತ್ತವೆ ಹಾಗಾಗಿ ಒಂದೊಂದು ಪಾದ 3° 20′ ಜಾಗವನ್ನಾಕ್ರಮಿಸುತ್ತದೆ.
ಒಂದು ರಾಶಿಗೆ ಎರಡೂವರೆ ನಕ್ಷತ್ರಗಳಾದ್ದರಿಂದ ಮತ್ತು ಒಂದು ನಕ್ಷತ್ರಕ್ಕೆ 4 ಪಾದಗಳಾದ್ದರಿಂದ ಒಂದು ರಾಶಿಗೆ 9 ಪಾದಗಳು. ಇದು 13° 20′ ಆಗುತ್ತದೆ. ಉದಾಹರಣೆ: ಮೇಷರಾಶಿಯಲ್ಲಿನ 10 ಪಾದ (ಎರಡೂವರೆ ನಕ್ಷತ್ರ) ಗಳು = 4 ಅಶ್ವಿನಿ + 4 ಭರಣಿ + 2 ಕೃತ್ತಿಕಾ = 4×3° 20′ + 4×3° 20’+ 1×3° 20′ = 30ಡಿಗ್ರಿ

ಉದಾಹರಣೆಯಲ್ಲಿ ಹೇಳಿದಂತೆ

  • ಅಶ್ವಿನಿ ಭರಣಿ ಕೃತ್ತಿಕಾ ಪಾದಂ ಮೇಷಃ। ಎಂಬುದು ಹೀಗೆ ಏಲ್ಲಾ ನಕ್ಷತ್ರ ಹಾಗೂ ದ್ವಾದಶ ರಾಶಿಗಳಿಗೂ ಸಹ ಈ ರೀತಿಯಾದ ಶ್ಲೋಕಗಳು ಇವೆ.
  • ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರ, ಭರಣಿ ನಕ್ಷತ್ರ ಮತ್ತು ಕೃತ್ತಿಕಾದ ಮೊದಲ ಪಾದ ಬರುತ್ತವೆ. ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರದ ಮೂರು ಮತ್ತು ನಾಲ್ಕನೇ ಪಾದಗಳು ಮತ್ತು ರೋಹಿಣಿ, ಮೃಗಶಿರ ನಕ್ಷತ್ರಗಳು ಬರುತ್ತವೆ. ನಾವು ಮಾತಿನಲ್ಲಿ ಸೂರ್ಯ ಮೇಷರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ, ಇನ್ನೂ ಆಳಕ್ಕಿಳಿದು ನೋಡಿದರೆ ಈ ಸೂರ್ಯ ಮೇಷ ರಾಶಿಯ ಭರಣಿ ನಕ್ಷತ್ರ (13° 20′ ರಿಂದ 26° 40′) ದಲ್ಲಿ ಮಾತ್ರ ನಿಜವಾಗಿ ಉಚ್ಚ (19 ಡಿಗ್ರಿ – ಭರಣಿ 3 ನೆ ಪಾದ) ನಾಗಿರುತ್ತಾನೆ ಅಂತ ತಿಳಿಯುತ್ತದೆ.
  • ಸರಳೀಕರಿಸಿ ನಾವು ಚಂದ್ರನು ವೃಷಭರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ ಸಹ, ಸರಿಯಾಗಿ ಲೆಕ್ಕ ಹಾಕಿದರೆ ಈ ಚಂದ್ರ ವೃಷಭ ರಾಶಿಯ ಕೃತಿಕಾ ನಕ್ಷತ್ರದ 3 ನೇ ಪಾದದಲ್ಲಿ ತನ್ನ ನಿಜ ಉಚ್ಚ ಸ್ಥಾನದಲ್ಲಿರುತ್ತಾನೆ.
  • ಇನ್ನೊಂದು ಪುರಾಣ ಕತೆಯ ಮೂಲಕ ಯೋಚನೆ ಮಾಡೋದಾದರೆ, ಚಂದ್ರನಿಗೆ 27 ಜನ ( ಇವೇ 27 ನಕ್ಷತ್ರಗಳು) ಹೆಂಡತಿಯರು ಅನ್ನುತ್ತಾರೆ. ಚಂದ್ರ ತನ್ನ ಪ್ರತಿ ಹೆಂಡತಿಯ ಜೊತೆ ಒಂದೊಂದು ದಿನ ಇರುತ್ತಾನೆ ಎನ್ನುವ ಕತೆ ಇದು. ಈ 27 ಹೆಂಡತಿಯರಲ್ಲಿ ರೋಹಿಣಿ ಚಂದ್ರನಿಗೆ ಪ್ರಿಯವಾದ ಹೆಂಡತಿ ಅಂತೆ. ಹಾಗಾಗಿ ಕೆಲ ಕತೆಗಳು ರೋಹಿಣಿ ನಕ್ಷತ್ರದ ದಿನ ಬಂದರೆ (ಅಂದರೆ ಚಂದ್ರ ರೋಹಿಣಿ ನಕ್ಷತ್ರದಲ್ಲಿದ್ದಾಗ) ಅಕ್ಷಯ ತೃತೀಯ ಹೆಚ್ಚು ಶ್ರೇಷ್ಠ ಅನ್ನುವ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಮಾಡುವ ಕೆಲಸಕ್ಕೆ ಶುಭ ಫಲ

ಅಕ್ಷಯ ತೃತೀಯ ದಿನದಂದು ಈ ಶುಭ ಮುಹೂರ್ತದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಶುಭ ಫಲವನ್ನು ಪಡೆದುಕೊಳ್ಳುವಿರಿ. ಅಕ್ಷಯ ತೃತೀಯದಂದು ರೂಪುಗೊಳ್ಳುವ ಈ ಶುಭ ಸಂಯೋಗವು ನಿಮ್ಮ ಜೀವನದಲ್ಲಿ ಶುಭವನ್ನೇ ತರುತ್ತದೆ. ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಮಾಡಿದರೆ ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ. ನಮ್ಮ ಹೆಣ್ಣುಮಕ್ಕಳು ಒಡವೆಯನ್ನು ಖರೀದಿಸಲು ತುಂಬಾ ಇಷ್ಟ ಪಡುತ್ತಾರೆ. ಏಕೆಂದರೆ ಅದು ಕೂಡ ಅಪತ್ಕಾಲಕ್ಕೆ ನೆರವಾಗುವ ಆಸ್ತಿಯಲ್ಲವೇ.!? ಹಾಗೇ ಹೆಣ್ಣಿನ ಸೌಂದರ್ಯದ ಮತ್ತು ಹೆಮ್ಮೆಯ ಪ್ರತೀಕ ಈ ಒಡವೆ. ಅಲ್ಲದೇ ಈ ನಂಬಿಕೆ ತಲಾಂತರಗಳಿಂದ ಇಷ್ಟು ಗಟ್ಟಿಯಾಗಿ ಜನರು ನಂಬಿಕೊಂಡು ಬಂದಿದ್ದಾರೆಂದರೆ ಏನು ಅರ್ಥ? ಆ ದಿನದ ಮಹಿಮೆಯಿಂದ ನಂಬಿದವರ ಜೀವನದಲ್ಲಿ ಒಳ್ಳೆಯದು ಆಗಿದೆ ಎಂದೇ ಅರ್ಥ, ಅಲ್ಲವೇ? ನಮ್ಮ ಭಾರತೀಯ ಪಂಚಾಂಗ ಸುಮ್ಮನೆ ಬಂದಿಲ್ಲ ಅದು ಒಂದು ವಿಜ್ಞಾನ ಎನ್ನುವುದಕ್ಕೆ ಇದು ಕೂಡ ಒಂದು ಸಾಕ್ಷಿ. ಈ ರೀತಿಯಾದ ವೈಜ್ಞಾನಿಕ ಸಂತ್ಯಾಂಶವುಳ್ಳ ಅಕ್ಷಯ ತೃತೀಯ ನಾಡಿನ ಜನತೆಗೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಉಜ್ವಲತೆಯನ್ನು, ಎಲ್ಲ ಜೀವಿಗಳಿಗೂ ಹಚ್ಚ ಹಸುರಾದ ಸುಖ ಶಾಂತಿಯನ್ನು ನೀಡುವಂತಹ ಪುಣ್ಯಮಯವಾದ ಮಹಾನ್ ಪರ್ವವಾಗಲಿ ಎಂದು ಪ್ರಾರ್ಥಿಸುತ್ತಾ ಈ ರೀತಿಯಾಗಿ ನಾವೇಲ್ಲರೂ
ಅಕ್ಷಯ ತೃತೀಯ ದಿನದ ನಿಜ ಅರ್ಥವನ್ನು ತಿಳಿದು ಆಚರಿಸೋಣ ಸಂಭ್ರಮಿಸೋಣ.
ಲೋಕಾಃ ಸಮಸ್ತಾಃ ಸುಖಿನೋ ಭವಂತು.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Prajwal Revanna case: ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು

ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ನಿನ್ನೆಯೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

SSLC Result 2024: ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು.

VISTARANEWS.COM


on

karnataka SSLC result 2024
Koo

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶ ನೋಡಿ ಸಂತೋಷಪಡುವುದಕ್ಕೂ, ಗಾಬರಿಯಾಗುವುದಕ್ಕೂ ಕಾರಣಗಳಿವೆ.

ಮೊದಲನೆಯದಾಗಿ, ಕಳಪೆ ಫಲಿತಾಂಶ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್ ಆಗಿದ್ದಾರೆ. ಅಂದರೆ ಶೇಕಡಾ 10.49%ರಷ್ಟು ಫಲಿತಾಂಶ ಕುಸಿತವಾಗಿದೆ. ಆದರೆ ಇದು ಕೂಡ ನಿಜವಾದ ಕುಸಿತವಲ್ಲ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟಿದೆ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಇಷ್ಟಾಗಿಯೂ ಫಲಿತಾಂಶ ಮಾತ್ರ ಕಡಿಮೆಯೇ.

ಕೃಪಾಂಕಗಳ ಹಿಂದೊಂದು ಕತೆಯಿದೆ. ಹಲವು ಕಡೆ ಸಾಮೂಹಿಕ ನಕಲು ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರ ಪರಿಣಾಮವೇ ಈ ಫಲಿತಾಂಶ. ಇದರಿಂದ ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಇದರಿಂದ ಗಾಬರಿ ಬಿದ್ದ ಇಲಾಖೆ, ವಿದ್ಯಾರ್ಥಿಗಳ ಹಾಗೂ ಒಟ್ಟಾರೆ ಶೈಕ್ಷಣಿಕ ಆವರಣದ ನೈತಿಕ ಸ್ಥೈರ್ಯ ಕುಸಿಯದಿರಲಿ ಎಂಬ ದೃಷ್ಟಿಯಿಂದ ಭಾರಿ ಪ್ರಮಾಣದ ಕೃಪಾಂಕ ನೀಡಿದೆ. ಇದೇನೂ ಒಳ್ಳೆಯ ಸುದ್ದಿಯಲ್ಲ. ನಕಲು ನಡೆಯುತ್ತಿದ್ದುದರಿಂದ ಉತ್ತಮ ಫಲಿತಾಂಶ ದೊರೆಯುತ್ತಿತ್ತು ಎಂಬುದನ್ನು ಇಲಾಖೆ ಒಪ್ಪಿಕೊಂಡ ಹಾಗಾಗಿದೆ. ವೆಬ್ ಕಾಸ್ಟಿಂಗ್ ಪರಿಣಾಮ ನಕಲು ನಿಂತುದು ಒಳ್ಳೆಯ ಸಂಗತಿಯೇ. ಆದರೆ ಇದು ಪಾರದರ್ಶಕ ಪರೀಕ್ಷೆಯಲ್ಲಿ ತನ್ಮೂಲಕ ಉತ್ತಮ ಫಲಿತಾಂಶದಲ್ಲಿ ಕೊನೆಯಾಗಬೇಕಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ. ಪರೀಕ್ಷೆಯ ಮೇಲೆ ನಿಗಾ ಇಡಲು ದುಡ್ಡು ಖರ್ಚು ಮಾಡಿದರೆ ಸಾಲದು, ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೂ ಹಾಗೆಯೇ ವೆಚ್ಚ ಮಾಡಿದರೆ ಉತ್ತಮ ಫಲಿತಾಂಶ ಬಂದೀತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ, 625ರಲ್ಲಿ ಅಷ್ಟೂ ಅಂಕಗಳನ್ನೂ ಬಾಚಿಕೊಂಡಿರುವ ಅಂಕಿತಾ ಕೊನ್ನೂರ್‌ ಹಳ್ಳಿಯೊಂದರ ರೈತರ ಮಗಳು. ಇದು ಗ್ರಾಮೀಣ ಪ್ರತಿಭೆಯ ದಿಗ್ವಿಜಯ ಎನ್ನಬಹುದು. ಈಕೆಗೆ ಐಎಎಸ್‌ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ. ಪಠ್ಯದ ಜೊತೆಗೆ ಲೈಬ್ರರಿ ಹಾಗೂ ಯುಟ್ಯೂಬ್ ಮಾಹಿತಿಯನ್ನೂ ಸೂಕ್ತವಾಗಿ ಬಳಸಿಕೊಂಡು ಈಕೆ ಟಾಪರ್ ಆಗಿದ್ದಾಳೆ. ಎಲ್ಲ ಮಕ್ಕಳಿಗೂ ಮಾದರಿಯಾಗಿರುವ ಈಕೆಯ ಅಭಿನಂದನೆಗಳು ಸಲ್ಲುತ್ತವೆ. ನಮ್ಮ ಹಳ್ಳಿಯ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ದೊರೆತರೆ ದೊಡ್ಡ ಸಾಧನೆ ಮಾಡಬಲ್ಲರು ಎಂಬುದನ್ನು ನಾವು ಅರ್ಥ ಮಾಡಿಕೊಂಡರೆ ಸಾಕು.

ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು. ವಿಷಯವಾರು ಪರೀಕ್ಷೆಯನ್ನೂ ಬರೆಯಬಹುದು. ಎರಡು ಅಥವಾ ಮೂರು ಪರೀಕ್ಷೆಗಳಿಗೂ ಕುಳಿತುಕೊಳ್ಳಬಹುದು. ಯಾವುದೇ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಗರಿಷ್ಠ ಅಂಕಗಳನ್ನು ಪರಿಗಣಿಸಲಾಗುತ್ತದೆ. ಇದು ಪರೀಕ್ಷಾ ವಿಧಾನದಲ್ಲಿ ಕ್ರಾಂತಿಕರ ಬದಲಾವಣೆ. ಈ ಬಾರಿ ಅನುತ್ತೀರ್ಣರಾದವರಿಗೆ ಹೇಗೂ ಪೂರಕ ಪರೀಕ್ಷೆ ಇದ್ದೇ ಇದೆ. ಆದ್ದರಿಂದ, ಇದೇ ನಿಜವಾಗಿಯೂ ಫಲಿತಾಂಶ ಹೆಚ್ಚಿಸುವ ವೈಜ್ಞಾನಿಕ ವಿಧಾನವಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Continue Reading

ಭವಿಷ್ಯ

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಶುಕ್ರವಾರ ರಾತ್ರಿ 11:13ಕ್ಕೆ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು. ಶುಭ ಸುದ್ದಿ ಸಿಗಲಿದೆ. ಮಿಥುನ ರಾಶಿಯವರು ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 26:49 ವಾರ: ಶುಕ್ರವಾರ
ನಕ್ಷತ್ರ: ರೋಹಿಣಿ 10:45 ಯೋಗ: ಅತಿಗಂಡ 12:05
ಕರಣ: ತೈತುಲ 15:28 ಅಮೃತಕಾಲ: ಬೆಳಗ್ಗೆ 07:44 ರಿಂದ 09:15
ದಿನದ ವಿಶೇಷ: ಬಸವ ಜಯಂತಿ, ಅಕ್ಷಯ ತೃತೀಯ

ಸೂರ್ಯೋದಯ : 05:56   ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು. ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

Horoscope Today

ವೃಷಭ:ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ:ಆರೋಗ್ಯ ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ:ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ . ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಹೆಚ್ಚಾಗಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ:ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಇರಲಿದೆ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸ-ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯವನ್ನು ಕೋರಿಕೆ ಬರಲಿದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Akshaya Tritiya 2024
ಧಾರ್ಮಿಕ6 mins ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ14 mins ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ27 mins ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ30 mins ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ48 mins ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Digestion Tips
ಆರೋಗ್ಯ1 hour ago

Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

Karnataka Weather Forecast
ಮಳೆ2 hours ago

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Which Sweetener Is Better
ಆರೋಗ್ಯ2 hours ago

Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

Basavanna jayanti
ಧಾರ್ಮಿಕ3 hours ago

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Akshaya Tritiya 2024
ಪ್ರಮುಖ ಸುದ್ದಿ3 hours ago

Akshaya Tritiya 2024: ಸಕಲ ಸಮೃದ್ಧಿಗಳು ಕ್ಷಯಿಸದಂತೆ ಕಾಪಾಡುವ ಅಕ್ಷಯ ತೃತೀಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ10 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ11 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ12 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ19 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌