ನವದೆಹಲಿ: ವಿಧಾನಸಭೆ ಅಥವಾ ಸಂಸತ್ನಲ್ಲಿ ಭಾಷಣ ಮಾಡಲು ಅಥವಾ ಮತ ಚಲಾಯಿಸಲು ಲಂಚ ಪಡೆದ ಸಂಸದರು (Vote for bribe) ಮತ್ತು ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು 1998 ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಐದು ನ್ಯಾಯಾಧೀಶರ ಪೀಠವು ನೀಡಿದ ತೀರ್ಪನ್ನು ಸರ್ವಾನುಮತದಿಂದ ರದ್ದುಗೊಳಿಸಿತು. ಹಳೆ ತೀರ್ಪಿನಲ್ಲಿ ಸಂಸದರು ಮತ್ತು ಶಾಸಕರಿಗೆ ಶಾಸಕಾಂಗದಲ್ಲಿ ಭಾಷಣ ಮಾಡಲು ಅಥವಾ ಮತ ಚಲಾಯಿಸಲು ಲಂಚ ತೆಗೆದುಕೊಂಡಿದ್ದಕ್ಕಾಗಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.
SWAGATAM!
— Narendra Modi (@narendramodi) March 4, 2024
A great judgment by the Hon’ble Supreme Court which will ensure clean politics and deepen people’s faith in the system.https://t.co/GqfP3PMxqz
“ಸ್ವಾಗತಂ. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ಉತ್ತಮ ತೀರ್ಪು ನೀಡಿದೆ. ಇದು ಶುದ್ಧ ರಾಜಕೀಯಕ್ಕೆ ಖಾತರಿ ನೀಡುತ್ತದೆ. ವ್ಯವಸ್ಥೆ ಕುರಿತ ಜನರ ನಂಬಿಕೆಯನ್ನು ದೃಢಪಡಿಸುತ್ತದೆ ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಲಂಚ ಪಡೆಯುವುದನ್ನು ಸಂಸದೀಯ ಅಧಿಕಾರದಿಂದ ರಕ್ಷಿಸಲಾಗುವುದಿಲ್ಲ ಮತ್ತು 1998 ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಕೊನೆಗೂ ಇ.ಡಿ ವಿಚಾರಣೆಗೆ ಒಪ್ಪಿದ ದೆಹಲಿ ಸಿಎಂ ಕೇಜ್ರಿವಾಲ್; ಕಂಡೀಷನ್ಸ್ ಅಪ್ಲೈ!
ಸಂವಿಧಾನದ 105 ಮತ್ತು 194ನೇ ವಿಧಿಯು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಸಂಸದರು ಮತ್ತು ಶಾಸಕರ ಅಧಿಕಾರಗಳು ಮತ್ತು ಸವಲತ್ತುಗಳಿಗೆ ಸಂಬಂಧಿಸಿದ್ದಾಗಿದೆ.
ಕೋರ್ಟ್ ಕೊಟ್ಟ ತೀರ್ಪೇನು?
ನವ ದೆಹಲಿ: ಪಿ.ವಿ.ನರಸಿಂಹ ರಾವ್ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ 1998ರಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ತೀರ್ಪನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು, ಸಂಸದರು ಮತ್ತು ಶಾಸಕರು ಸಂಸತ್ತು ಅಥವಾ ವಿಧಾನಸಭೆಯಲ್ಲಿ ತಮ್ಮ ಮತಗಳು ಮತ್ತು ಭಾಷಣಕ್ಕಾಗಿ ಲಂಚ ಪಡೆದರೆ (Vote for bribe) ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮಕ್ಕೆ ಗುರಿಯಾಗುತ್ತಾರೆ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಐದು ನ್ಯಾಯಾಧೀಶರ ಪೀಠವು ನೀಡಿದ ತೀರ್ಪನ್ನು ಸರ್ವಾನುಮತದಿಂದ ರದ್ದುಗೊಳಿಸಿತು. ಇದರಲ್ಲಿ ಸಂಸದರು ಮತ್ತು ಶಾಸಕರಿಗೆ ಶಾಸಕಾಂಗದಲ್ಲಿ ಭಾಷಣ ಮಾಡಲು ಅಥವಾ ಮತ ಚಲಾಯಿಸಲು ಲಂಚ ತೆಗೆದುಕೊಂಡಿದ್ದಕ್ಕಾಗಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.
ತೀರ್ಪು ಪ್ರಕಟಿಸಿದ ಸಿಜೆಐ ಚಂದ್ರಚೂಡ್, ಲಂಚ ಪಡೆಯುವುದನ್ನು ಸಂಸದೀಯ ಹುದ್ದೆಯ ಮೂಲಕ ರಕ್ಷಿಸಲಾಗುವುದಿಲ್ಲ ಮತ್ತು 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಧಾನಸಭೆಯಲ್ಲಿ ಮತ ಅಥವಾ ಭಾಷಣಕ್ಕೆ ಸಂಬಂಧಿಸಿದಂತೆ ಲಂಚದ ಆರೋಪದ ಮೇಲೆ ಸಂಸದರು, ಶಾಸಕರು ಕಾನೂನು ಕ್ರಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಏಳು ನ್ಯಾಯಾಧೀಶರ ನ್ಯಾಯಪೀಠ ತೀರ್ಪು ನೀಡಿತು. ಜನಪ್ರತಿನಿಧಿಗಳ ಭ್ರಷ್ಟಾಚಾರ ಅಥವಾ ಲಂಚವು ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಯನ್ನು ಹಾಳುಮಾಡುತ್ತದೆ. ಲಂಚ ಸ್ವೀಕರಿಸುವುದು ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.