ತುಮಕೂರು: ಗ್ರಾಮ ಪಂಚಾಯತ್ ವಾಟರ್ ಮ್ಯಾನ್ ಒಬ್ಬರನ್ನು ಎಳೆದೊಯ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ (Tumkur News) ದೂರು ದಾಖಲಾಗಿದೆ. ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶದ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಕುಣಿಗಲ್ ಡಿವೈಎಸ್ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್ಎಚ್ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.
ಮಾರ್ಚ್ 23ರಂದು ವಾಟರ್ ಮ್ಯಾನ್ ಗಂಗಾಧರ್ ಅವರನ್ನು ವಿಚಾರಣೆ ನೆಪದಲ್ಲಿ ಕುಣಿಗಲ್ ಠಾಣೆಗೆ ಕರೆದೊಯ್ಯಲಾಗಿತ್ತು. ಅಮೃತ್ತೂರು ಹೋಬಳಿಯ ಕೆ.ಹೆಚ್ ಹಳ್ಳಿ ಗ್ರಾ.ಪಂನ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರ್ ಅವರನ್ನು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡದೇ ಕರೆದುಕೊರಮಡು ಹೋಗಲಾಗಿತ್ತು. ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ
ಗಂಗಾಧರ್ ಅವರನ್ನು ಕರೆದುಕೊಂಡು ಹೋದ ಪೊಲೀಸರು ಸಂಜೆ ವೇಳೆ ಬಿಟ್ಟಿದ್ದರು. ಈ ನಡುವೆ ಅವರಿಗೆ ಬಾಸುಂಡೆ ಬರುವಂತೆ ಬಾರಿಸಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ತಮಗಾಗಿರುವ ಅನ್ಯಾಯವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಿದೆ.
ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ
ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ.
ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.