Site icon Vistara News

West Bengal: ಬಂಗಾಳದಲ್ಲಿ ಎಲೆಕ್ಷನ್‌ ಹಿಂಸಾಚಾರ; ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಟಿಎಂಸಿ ಕಾರ್ಯಕರ್ತರು, Video ಇದೆ

West Bengal

West Bengal BJP Candidate Forced To Run As Protesters Throw Stones

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಇರಲಿ, ಮತ ಎಣಿಕೆ ದಿನವೇ ಇರಲಿ, ಹಿಂಸಾಚಾರ ನಡೆದೇ ನಡೆಯುತ್ತವೆ. ಮತಯಂತ್ರಗಳನ್ನು ಧ್ವಂಸಗೊಳಿಸುವುದು, ಎದುರಾಳಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಯುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯ (Lok Sabha Election 2024) ಆರನೇ ಹಂತದ ಮತದಾನದ ವೇಳೆ ಟಿಎಂಸಿ ಪಕ್ಷದ ದುಷ್ಕರ್ಮಿಗಳು ಬಿಜೆಪಿ ಅಭ್ಯರ್ಥಿಯ (BJP Candidate) ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತಾಯಿತು.

ಹೌದು, ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದೆಲ್ಲ ಟಿಎಂಸಿ ಕೃತ್ಯ ಎಂದು ದೂರಿದೆ.

ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು ಕಲ್ಲುತೂರಾಟದ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರತಿಯೊಂದು ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ ಭಾರಿ ಹಿಂಸಾಚಾರ ಸಂಭವಿಸಿದೆ. ಮತಗಟ್ಟೆಗಳ ಬಳಿ ಜನ ಶಾಂತಿಯಿಂದ ಮತದಾನ ಮಾಡಲೂ ಆಗದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆದಿತ್ತು. ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ತನಿಖೆಗೂ ಆದೇಶಿಸಿತ್ತು.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Exit mobile version