ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕಳೆದ ವರ್ಷದ ಅಕ್ಟೋಬರ್ 7ರಂದು ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಬೀಡುಬಿಟ್ಟಿರುವ ಹಮಾಸ್ ಉಗ್ರರು (Israel Hamas War) ದಾಳಿ ನಡೆಸಿದಕ್ಕೆ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್ ಈಗ ಇಸ್ಮಾಯಿಲ್ ಹನಿಯೆಹ್‌ನನ್ನು ಹತ್ಯೆ ಮಾಡಿಸಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಟೆಹ್ರಾನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಸ್ಮಾಯಿಲ್ ಹನಿಯೆಹ್ ಸಾವಿಗೀಡಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್ ಪೆಜೆಸ್ಕಿಯಾನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್ ಹನಿಯೆಹ್ ಕೂಡ ಭಾಗವಹಿಸಿದ್ದ. ಹಮಾಸ್ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್ ಹನಿಯೆಹ್ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್ ದಾಳಿ, ಇರಾನ್ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ. ಈ ವಿಡಿಯೊವನ್ನು ಈಗ ಇರಾನ್ ಮಾಧ್ಯಮಗಳು ಹಂಚಿಕೊಂಡಿವೆ.
A few hours before being assassinated, Hamas leader Ismail Haniyah visited a theme park exhibition of the “Axis of Resistance” landmarks, along with the leader of Palestinian Islamic Jihad Ziad al-Nakhaleh, a video released by Iranian media shows. pic.twitter.com/Jk7rqTARbD
— Iran International English (@IranIntl_En) July 31, 2024
2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್ ಉಗ್ರರ ಜತೆಗೆ ಹಮಾಸ್ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.
ಕಾರ್ಯಾಚರಣೆ ನಡೆದಿದ್ದು ಹೇಗೆ?
ಇರಾನ್ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್ ಪೆಜೆಸ್ಕಿಯಾನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್ ಹನಿಯೆಹ್ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್ ಹನಿಯೆಹ್ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್ ಹನಿಯೆಹ್ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್ ಮುಗಿಸಿದ್ದೇಕೆ?