Mission Divyastra : ಏನಿದು ಮಿಷನ್​ ದಿವ್ಯಾಸ್ತ್ರ, ಸೇನೆ ಸೇರಲಿರುವ ಹೊಸ ಅಸ್ತ್ರ? ಇಲ್ಲಿದೆ ಪೂರ್ಣ ಮಾಹಿತಿ - Vistara News

ಪ್ರಮುಖ ಸುದ್ದಿ

Mission Divyastra : ಏನಿದು ಮಿಷನ್​ ದಿವ್ಯಾಸ್ತ್ರ, ಸೇನೆ ಸೇರಲಿರುವ ಹೊಸ ಅಸ್ತ್ರ? ಇಲ್ಲಿದೆ ಪೂರ್ಣ ಮಾಹಿತಿ

Mission Divyastra : ಭಾರತವೀಗ ಒಂದೇ ಕ್ಷಿಪಣಿಯಲ್ಲಿ ಹಲವಾರು ಬಾಂಬ್​ಗಳನ್ನು ಇಟ್ಟು ಬೇರೆ ಬೇರೆ ಕಡೆ ಇರುವ ವೈರಿಗಳನ್ನು ನಾಶಪಡಿಸುವ ಸಾಮರ್ಥ್ಯವನ್ನು ಪಡೆದುಕೊಂಡಿದೆ.

VISTARANEWS.COM


on

Mission Divyastra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಹು ಸ್ವತಂತ್ರ ಗುರಿಯ ಮರು-ಪ್ರವೇಶ ವಾಹನಗಳ (MIRV) ಅಗ್ನಿ -5 ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯ ಮೊದಲ ಉಡಾವಣೆ ಪರೀಕ್ಷೆಯನ್ನು ಭಾರತ ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಲವಾರು ವರ್ಷಗಳಿಂದ ಸಂಶೋಧನೆ ನಡೆಸಿ ಅಭಿವೃದ್ಧಿ ಮಾಡಿದ ಎಂಐಆರ್​ಐವಿ ಭಾರತದ ಸೇನೆ ಸೇರಲಿದೆ. ಈ ಪರೀಕ್ಷೆಗೆ ಮಿಷನ್ ದಿವ್ಯಾಸ್ತ್ರ (Mission Divyastra) ಎಂದು ಹೆಸರಿಡಲಾಗಿದೆ. ಇದರೊಂದಿಗೆ ತಂತ್ರಜ್ಞಾನವನ್ನು ಹೊಂದಿರುವ ರಾಷ್ಟ್ರಗಳ ಗಣ್ಯ ಪಟ್ಟಿಗೆ ಸೇರ್ಪಡೆಗೊಂಡಿದೆ. ಭಾರತೀಯ ರಕ್ಷಣಾ ಕ್ಷೇತ್ರದ ಪಾಲಿಗೆ ಇದು ಐತಿಹಾಸಿಕ ಮೈಲಿಗಲ್ಲಾಗಿದೆ. ಯಾಕೆಂದರೆ ಭಾರತವೀಗ ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್​ ಹಾಗೂ ಬ್ರಿಟನ್​ ಸಾಲಿಗೆ ಸೇರ್ಪಡೆಗೊಂಡಿದೆ.

ಬಹು ಸ್ವತಂತ್ರ ಗುರಿಯ ಮರು-ಪ್ರವೇಶ ವಾಹನ (MIRV) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ -5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಗೆ ‘ಮಿಷನ್ ದಿವ್ಯಾಸ್ತ್ರ ಎಂದು ಹೆಸರಿಡಲಾಗಿತ್ತು. ಈ ಸಾಧನೆಗಾಗಿ ಡಿಆರ್​ಡಿಒ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ವಿಶೇಷ ಎಂದರೆ ಡಿಆರ್​ಡಿಒದ ಮಹಿಳಾ ವಿಜ್ಞಾನಿಯೊಬ್ಬರು ಈ ಮಿಷನ್​​ನ ನೇತೃತ್ವ ವಹಿಸಿದ್ದರು. ಹಲವಾರು ಮಹಿಳಾ ವಿಜ್ಞಾನಿಗಳು ಈ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

MIRV ತಂತ್ರಜ್ಞಾನ ಎಂದರೇನು?

ಡಿಆರ್​​ಡಿಒ ವಿಜ್ಞಾನಿಗಳು ಅನೇಕ ವರ್ಷಗಳಿಂದ ಮಲ್ಟಿಪಲ್ ಇಂಡಿಪೆಂಡೆಂಟ್ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ಸ್ (MIRV ) ತಂತ್ರಜ್ಞಾನದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ತಂತ್ರಜ್ಞಾನವು ಅಗ್ನಿ -5ನಂಥ ಒಂದೇ ಕ್ಷಿಪಣಿಗೆ ಅನೇಕ ಸಿಡಿತಲೆಗಳನ್ನು ಸಾಗಿಸಲು ಮತ್ತು ಸ್ವತಂತ್ರವಾಗಿ ಅನೇಕ ಗುರಿಗಳೆಡೆಗೆ ಸಾಗಲು ಅನುವು ಮಾಡಿಕೊಡುತ್ತದೆ. ಡಿಆರ್​ಡಿಒ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ದೇಶೀಯ ಏವಿಯಾನಿಕ್ಸ್ ವ್ಯವಸ್ಥೆಗಳು ಮತ್ತು ಹೆಚ್ಚಿನ ನಿಖರತೆಯ ಸಂವೇದಕ ಪ್ಯಾಕೇಜ್​​ಗಳಿಂದ ತುಂಬಿದೆ. ಈ ಮೂಲಕ ಕ್ಷಿಪಣಿಯು ಅಪೇಕ್ಷಿತ ನಿಖರತೆಯೊಳಗೆ ಗುರಿ ತಲುಪುವುದನ್ನು ಖಾತರಿಪಡಿಸುತ್ತದೆ.

ಅಗ್ನಿ-5 ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ (ICBM) ಆಗಿದ್ದು, ಇದು ಮೊದಲು ಬಾಹ್ಯಾಕಾಶಕ್ಕೆ ಹೋಗಿ ಬಳಿಕ ಭೂಮಿಯ ವಾತಾವರಣಕ್ಕೆ ಮರಳುತ್ತದೆ. ಎಂಐಆರ್​ವಿ ತಂತ್ರಜ್ಞಾನದೊಂದಿಗೆ ವಿವಿಧ ಸ್ಥಳಗಳಲ್ಲಿರುವ ಅನೇಕ ಗುರಿಗಳನ್ನು ಒಂದೇ ಕ್ಷಿಪಣಿಯಿಂದ ಹಲವಾರು ಸಿಡಿತಲೆಗಳ ಮೂಲಕ ನಾಶ ಮಾಡಬಹುದು. ಈ ಸಿಡಿತಲೆಗಳು ಪರಮಾಣು ಅಥವಾ ಪರಮಾಣು ಅಲ್ಲದಿರುವ ಅಸ್ತ್ರಗಳಾಗಿರುತ್ತವೆ. ಒಟ್ಟಿನಲ್ಲಿ ಈ ತಂತ್ರಜ್ಞಾನವು ಕ್ಷಿಪಣಿಗೆ ಹಲವಾರು ಬಾಂಬ್ ಗಳನ್ನು ಏಕಕಾಲಕ್ಕೆ ಸಾಗಿಸಲು ಅನುವು ಮಾಡಿಕೊಡುತ್ತದೆ. ಈ ಬಾಂಬ್​​ಗಳನ್ನು ನೂರಾರು ಕಿಲೋಮೀಟರ್ ದೂರದಲ್ಲಿರುವ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು . ಕೆಲವು ಎಂಐಆರ್​ವಿ ಕ್ಷಿಪಣಿಗಳು 1,500 ಕಿಲೋಮೀಟರ್ ದೂರದಲ್ಲಿರುವ ಗುರಿಗಳನ್ನು ಸಹ ಹೊಡೆದುರುಳಿಸುತ್ತವೆ.

ಯುದ್ಧದ ವೇಳೆ ಅನುಕೂಲ

ಕ್ಷಿಪಣಿಯ ಸಾಮರ್ಥ್ಯವು ಯುದ್ಧದ ಸಮಯದಲ್ಲಿ ಏಕಕಾಲಕ್ಕೆ ಹಲವಾರು ಗುರಿಗಳನ್ನು ಭೇದಿಸಲು ನೆರವು ನೀಡುತ್ತದೆ. ಅಗ್ನಿ-5 ಕ್ಷಿಪಣಿಯನ್ನು ಈ ಹಿಂದೆ ಪರೀಕ್ಷಿಸಲಾಗಿತ್ತು, ಆದರೆ ಒಂದೇ ಸಿಡಿತಲೆಯೊಂದಿಗೆ ಪರೀಕ್ಷೆ ಮಾಡಲಾಗಿತ್ತು. ಕ್ಷಿಪಣಿಯು ಬಾಹ್ಯಾಕಾಶಕ್ಕೆ ಹೋಗಿ ವಾತಾವರಣವನ್ನು ಮತ್ತೆ ಪ್ರವೇಶಿಸಿದಾಗ ಚಲನ ಶಕ್ತಿಯ ಸಹಾಯದಿಂದ ಶಬ್ದದ ಕನಿಷ್ಠ ಐದು ಪಟ್ಟು ವೇಗದೊಂದಿಗೆ ಗುರಿಯನ್ನು ತಲುಪುತ್ತಿತ್ತು. ಇದರ ಮೂಲಕ ತಂತ್ರಜ್ಞಾನದೊಂದಿಗೆ ಎದುರಾಳಿಗಳು ಬಳಸುವ ಕ್ಷಿಪಣಿ ವಿರೋಧಿ ರಕ್ಷಣಾ (AMD) ವ್ಯವಸ್ಥೆಗಳ ಪರಿಣಾಮವನ್ನು ತಗ್ಗಿಸಲು ಸಾಧ್ಯವಾಗುತ್ತದೆ.

ಅಗ್ನಿ -5 ಕ್ಷಿಪಣಿ ಕನಿಷ್ಠ 5,000 ಕಿ.ಮೀ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದೆ. ಅದು ನಗರಗಳನ್ನು ಗುರಿಯಾಗಿಸಬಲ್ಲದು. ಎಂಐಆರ್​ವಿ ತಂತ್ರಜ್ಞಾನವು ಆ ವ್ಯಾಪ್ತಿಯೊಳಗಿನ ಅನೇಕ ನಗರಗಗಳ ಮೇಲೆ ದಾಳಿ ಮಾಡಲು ನೆರವಾಗುತ್ತದೆ. ಆದರೆ, ಕ್ಷಿಪಣಿಯ ವ್ಯಾಪ್ತಿಯ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ.

ವಾಯುಪಡೆಗೆ ಎಚ್ಚರಿಕೆ

ಪರೀಕ್ಷೆಗೆ ಮುಂಚಿತವಾಗಿ ಕಳೆದ ವಾರ ನೋಟಾಮ್ ಎಚ್ಚರಿಕೆಯನ್ನು (NOTAM Alert) ನೀಡಲಾಗಿತ್ತು. ನೋಟಾಮ್ ಎಂದರೆ ವಾಯುಪಡೆಯವರಿಗೆ ನೋಟಿಸ್ ನೀಡುವುದು. ನಿರ್ದಿಷ್ಟ ಪ್ರದೇಶದಲ್ಲಿ ಯುದ್ಧ ವಿಮಾನಗಳ ಹಾರಾಟಗಳಿಗೆ ನಿಷೇಧ ವಲಯವೆಂದು ಹೇಳುವ ಎಚ್ಚರಿಕೆ. ಮಾರ್ಚ್ 11 ಮತ್ತು 16 ರ ನಡುವೆ ಯಾವುದೇ ಸಮಯದಲ್ಲಿ ನಡೆಯಬಹುದಾದ ಕ್ಷಿಪಣಿ ಪರೀಕ್ಷೆಯ ಹಿನ್ನೆಲೆಯಲ್ಲಿ ಬಂಗಾಳ ಕೊಲ್ಲಿ ಪ್ರದೇಶಕ್ಕೆ ಈ ಎಚ್ಚರಿಕೆ ನೀಡಲಾಗಿತ್ತು. ನೋಟಾಮ್ ಎಚ್ಚರಿಕೆಯಲ್ಲಿ ನಿಗದಿಪಡಿಸಲಾದ ನಿಷೇಧ ವಲಯವು ಬಂಗಾಳ ಕೊಲ್ಲಿಯ ದಕ್ಷಿಣಕ್ಕೆ 3,500 ಕಿಲೋಮೀಟರ್ ವ್ಯಾಪ್ತಿಯಲ್ಲಿದೆ.

1960ರಲ್ಲಿ ಮೊದಲ ಬಾರಿಗೆ ಬಂದ ತಾಂತ್ರಿಕತೆ

ಈ ತಂತ್ರಜ್ಞಾನವನ್ನು 1960 ರ ದಶಕದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅಮೆರಿಕ, ಬ್ರಿಟನ್​ , ರಷ್ಯಾ, ಫ್ರಾನ್ಸ್ ಮತ್ತು ಚೀನಾ ಇದನ್ನು ಹೊಂದಿದೆ. ಉದಾಹರಣೆಗೆ, ರಷ್ಯಾದ ಎಂಐಆರ್​ವಿ ಕ್ಷಿಪಣಿಯು 16 ಸಿಡಿತಲೆಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಇಸ್ರೇಲ್ ಕೂಡ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದೆ ಎಂಬ ವರದಿಗಳಿವೆ.

ಇದನ್ನೂ ಓದಿ : Citizenship Amendment Act : ಸಿಎಎ ಕಾಯ್ದೆ ಜಾರಿಯಾದ ಕ್ಷಣದಲ್ಲೇ ವೆಬ್​ಸೈಟ್​ ಕ್ರ್ಯಾಶ್​

ಈ ತಂತ್ರಜ್ಞಾನಕ್ಕೆ ದೊಡ್ಡ ಕ್ಷಿಪಣಿಗಳು, ಸಣ್ಣ ಸಿಡಿತಲೆಗಳು, ನಿಖರವಾದ ಮಾರ್ಗದರ್ಶನ ಮತ್ತು ಹಾರಾಟದ ಸಮಯದಲ್ಲಿ ಸಿಡಿತಲೆಗಳನ್ನು ಅನುಕ್ರಮವಾಗಿ ಬಿಡುಗಡೆ ಮಾಡುವ ಸಂಕೀರ್ಣ ಕಾರ್ಯವಿಧಾನದ ಅಗತ್ಯವಿರುತ್ತದೆ.

ಎಂಐಆರ್​ವಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಮೊದಲ ದೇಶ ಅಮೆರಿಕ. 1970 ರಲ್ಲಿ ಎಂಐಆರ್​ವಿ ಹೊಂದಿರುವ ಇಂಟರ್​ಕಾಂಟಿನೆಂಟಲ್​ ಬ್ಯಾಲಿಸ್ಟಿಕ್ ಕ್ಷಿಪಣಿ (ಐಸಿಬಿಎಂ) ಮತ್ತು 1971 ರಲ್ಲಿ ಎಂಐಆರ್​ವಿ ಹೊಂದಿರುವ ಜಲಾಂತರ್ಗಾಮಿ-ಉಡಾವಣಾ ಬ್ಯಾಲಿಸ್ಟಿಕ್ ಕ್ಷಿಪಣಿ (ಎಸ್ಎಸ್​ಬಿಎಂ) ಆ ರಾಷ್ಟ್ರ ನಿಯೋಜಿಸಿತ್ತು. ಸೋವಿಯತ್ ಒಕ್ಕೂಟವು ತ್ವರಿತವಾಗಿ ಇದನ್ನು ಅನುಸರಿಸಿತ್ತು. 1970 ರ ದಶಕದ ಅಂತ್ಯದ ವೇಳೆಗೆ ತಮ್ಮ ಎಂಐಆರ್​ವಿ -ಶಕ್ತಗೊಂಡ ಐಸಿಬಿಎಂ ಮತ್ತು ಎಸ್ಎಲ್​​ಬಿಎಂ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿತು.

ಪಾಕಿಸ್ತಾನದ ಪ್ರಯತ್ನ

ಪಾಕಿಸ್ತಾನವು ಎಂಐಆರ್​ವಿ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವ ಹಾದಿಯಲ್ಲಿದೆ. ಅಬಾಬೀಲ್ ಮಧ್ಯಮ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾ ಉಡಾವಣೆಯ ಮೂಲಕ ಅದನ್ನು ಸಾಧಿಸಲು ಯತ್ನಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Prajwal Revanna Case: ಬೆಂಗಳೂರಿನ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ದೇವೇಗೌಡರು ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವುದರಿಂದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ (Prajwal Revanna Case) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್‌ಐಟಿಯಿಂದ ನೋಟಿಸ್‌ ಕೂಡ ನೀಡಲಾಗಿದೆ. ಹೀಗಾಗಿ ಕುಟುಂಬದಲ್ಲಿನ ಸಮಸ್ಯೆ ಪರಿಹಾರಕ್ಕಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇದೀಗ ಜ್ಯೋತಿಷ್ಯದ ಮೊರೆ ಹೋಗಿದ್ದು, ಇದಕ್ಕಾಗಿ ಜ್ಯೋತಿಷಿ ಜತೆ ಚರ್ಚೆ ನಡೆಸಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ದೇವೇಗೌಡರು ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಗಳು ಬಂದಾಗ ದೇವೇಗೌಡರ ಕುಟುಂಬಸ್ಥರು ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಹೋಮ-ಹವನ, ವಿಶೇಷ ಪೂಜೆ ಮಾಡುತ್ತಾರೆ. ಹೀಗಾಗಿ ಸದ್ಯ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Hassan Pen Drive Case Prajwal seeks 7 days time to appear for questioning

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರು ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಸದ ಪ್ರಜ್ವಲ್‌ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ.

ಪ್ರಜ್ವಲ್‌ ಪರವಾಗಿ ವಕೀಲರಿಂದ ಪತ್ರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಗಡುವು ವಿಸ್ತರಣೆ ಮಾಡುವಂತೆ ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಜಿ. ಅವರು ಸಿಐಡಿಗೆ ಪತ್ರ ಬರೆದು ಕೋರಿದ್ದಾರೆ.

ಇದನ್ನೂ ಓದಿ | Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪತ್ರದಲ್ಲೇನಿದೆ?

ಪ್ರಜ್ವಲ್‌ ರೇವಣ್ಣ ಅವರು ಖುದ್ದಾಗಿ ಎಸ್‌ಐಟಿ ಮುಂದೆ ಹಾಜರಾಗಲು ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್‌ ಅಂಟಿಸಲಾಗಿದೆ. ಇದರ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆ‌ರ್.ಪಿ.ಸಿ. ದಿನಾಂಕ:30-04-2024ರ ತಮ್ಮ ನೋಟಿಸ್‌ನಲ್ಲಿ ತಾವು ದಿನಾಂಕ: 01-05-2024ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ವಕೀಲ ಅರುಣ್‌ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Continue Reading

ದೇಶ

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Bomb Threat: ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದರ ಬೆನ್ನಲ್ಲೇ, 16 ವರ್ಷದ ಬಾಲಕನು ತಮಾಷೆಗಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Bomb threat
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (New Delhi) ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ (NCR) ಸುಮಾರು 100 ಶಾಲೆಗಳಿಗೆ (Schools) ಇ-ಮೇಲ್‌ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ (Bomb Threat) ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಿವೆ. ಇದಾದ ಬಳಿಕ ಪೊಲೀಸರು ಇದು ಹುಸಿ ಬಾಂಬ್‌ ಕರೆ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆ ಒಡ್ಡಿದವ 16 ವರ್ಷದ ಪೋರ ಎಂದು ತಿಳಿದುಬಂದಿದೆ.

ಹೌದು, ದೆಹಲಿಯ ಪ್ರತಿಷ್ಠಿತ ಶಾಲೆಯಲ್ಲಿ ಓದುತ್ತಿರುವ 16 ವರ್ಷದ ಬಾಲಕನು, ತಮಾಷೆಗಾಗಿ ಶಾಲೆಗಳಿಗೆ ಬಾಂಬ್‌ ದಾಳಿ ಕುರಿತು ಇ-ಮೇಲ್‌ ಮಾಡಿದ್ದಾನೆ. 16 ವರ್ಷದ ಬಾಲಕನು ತಮಾಷೆಗಾಗಿ ಮೇಲ್‌ ಮಾಡಿದ್ದು, ಇದರಿಂದ ಆತ ಖುಷಿ ಅನುಭವಿಸಿದ್ದಾನೆ. ಪ್ರಾಂಕ್‌ ಮಾಡಲು ಹೋಗಿ ಇಂತಹ ಅಚಾತುರ್ಯ ಎಸಗಿದ್ದಾನೆ. ಕೊನೆಗೆ ಪೊಲೀಸರು ಆತನಿಗೆ ಬುದ್ಧಿವಾದ ಹೇಳಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದಿಷ್ಟು ಪೊಲೀಸ್‌ ಮೂಲಗಳ ಪ್ರಕಾರ, ಬಾಲಕನು ಮೇಲ್‌ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

ವಿದೇಶಿ ಸರ್ವರ್‌ಗಳ ಮೂಲಕ ಡೇಟಾವನ್ನು ರೂಟ್ ಮಾಡುವ ಮತ್ತು ದಾರಿ ತಪ್ಪಿಸುವ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಅನ್ನು ಬಳಸಿಕೊಂಡು ಇಮೇಲ್‌ನ ಮೂಲವನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸ್ವಲ್ಪ ಸಮಯ ತೆಗೆದುಕೊಂಡರು. ವಿಪಿಎನ್ ಟ್ರಾಫಿಕ್ ಅನ್ನು ಹಿಂತೆಗೆದುಕೊಂಡ ನಂತರ ಮತ್ತು ಇಮೇಲ್‌ನ ಮೂಲವನ್ನು ಕಂಡುಹಿಡಿದ ನಂತರ ಪೊಲೀಸರು ಇಂಟರ್ನೆಟ್ ಪ್ರೋಟೋಕಾಲ್ (ಐಪಿ) ವಿಳಾಸವನ್ನು- ಅನನ್ಯ ಐಡೆಂಟಿಫೈಯರ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ದಾಳಿ ಕುರಿತ ಬೆದರಿಕೆ ಇ-ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದರು. “ದೆಹಲಿ ಶಾಲೆಗಳಿಗೆ ಬಾಂಬ್‌ ದಾಳಿ ನಡೆಸುವುದಾಗಿ ರವಾನೆಯಾಗಿರುವ ಬೆದರಿಕೆಯು ಹುಸಿ ಬೆದರಿಕೆ ಎಂಬಂತೆ ಕಾಣುತ್ತಿದೆ. ಹಾಗಾಗಿ, ಯಾರೂ ಕೂಡ ಆತಂಕಕ್ಕೀಡಾಗಬಾರದು” ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

Continue Reading

ವೈರಲ್ ನ್ಯೂಸ್

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Lottery: ಅಮೆರಿಕದ ಮಹಿಳೆಗೆ ಕರೆ ಮಾಡಿ, ನಿಮಗೆ ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದು ಅಧಿಕಾರಿಗಳನ್ನು ಇನ್ನಷ್ಟು ತಬ್ಬಿಬ್ಬಾಗಿಸಿದೆ.

VISTARANEWS.COM


on

Lottery
Koo

ವಾಷಿಂಗ್ಟನ್:‌ ನಿಮಗೆ 5 ಕೋಟಿ ರೂ. ಲಾಟರಿ (Lottery) ಹೊಡೆದಿದೆ ಎಂದು ಕರೆ ಬರುತ್ತದೆ. ಲಾಟರಿ ಕುರಿತು ಮೆಸೇಜ್‌ ಕೂಡ ಬರುತ್ತದೆ. ನಂಬಿ ಅವರು ಕಳುಹಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ, ನಿಮ್ಮ ಖಾತೆಯಲ್ಲಿರುವ ಹಣ ಕಟ್‌ ಆಗುವುದು ಗ್ಯಾರಂಟಿ. ಇಂತಹ ಸ್ಕ್ಯಾಮ್‌ಗಳಿಂದಲೇ ಜನ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಅನಾಮಧೇಯ ವ್ಯಕ್ತಿಗಳ ಕರೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಹೀಗೆ, ಬರುವ ಕರೆಗಳಲ್ಲ ಸ್ಕ್ಯಾಮ್‌ (Cyber Crime) ಎಂದು ತಿಳಿದುಕೊಂಡ ಅಮೆರಿಕದ (America) ಮಹಿಳೆಯೊಬ್ಬರು 1 ಕೋಟಿ ಲಾಟರಿ ಹೊಡೆದಿದೆ ಎಂಬುದಾಗಿ ಬಂದ ಕರೆಯನ್ನು ನಿರ್ಲಕ್ಷಿಸಿದ್ದಾರೆ. ಆದರೆ, ಅವರಿಗೆ ಒಂದು ಕೋಟಿ ರೂ. ಲಾಟರಿ ಮೊತ್ತವನ್ನು ತಲುಪಿಸಲು ಅಧಿಕಾರಿಗಳು ಹೆಣಗಾಡಿದ್ದಾರೆ.

ಹೌದು, ಗ್ರೇಟರ್‌ ಮ್ಯಾಂಚೆಸ್ಟರ್‌ನ ಹೀಲ್ಡ್‌ ಗ್ರೀನ್‌ನಲ್ಲಿರುವ ಅನೆ (Anne) ಎಂಬುವರು ಲಾಟರಿ ಟಿಕೆಟ್‌ ಖರೀದಿಸಿದ್ದರು. ಬಂದರೆ ಬರಲಿ, ಹೋದರೆ ಹೋಗಲಿ ಎಂಬ ಮನಸ್ಥಿತಿಯಲ್ಲಿ ಅವರು ಟಿಕೆಟ್‌ ಖರೀದಿಸಿದ್ದರು. ಟಿಕೆಟ್‌ ಖರೀದಿಸಿ ತುಂಬ ದಿನ ಆದ ಕಾರಣ ನಿರ್ಲಕ್ಷದಿಂದ ಇದ್ದರು. ಆದರೆ, ಕೆಲ ದಿನಗಳ ಹಿಂದಷ್ಟೇ ಅನೆ ಅವರಿಗೆ ಲಾಟರಿ ಕಂಪನಿಯ ಅಧಿಕಾರಿಗಳು ಅನೆ ಅವರಿಗೆ ಕರೆ ಮಾಡಿದ್ದಾರೆ. ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಇದು ಸ್ಕ್ಯಾಮ್‌ ಎಂದ ಅನೆ, ಕಾಲ್‌ ಕಟ್‌ ಮಾಡಿದ್ದಾರೆ.

ಅನೆಗೆ ದುಡ್ಡು ಸಿಕ್ಕಿದ್ದು ಹೇಗೆ?

ಮಹಿಳೆಯು ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದರಿಂದಲೂ ಅಧಿಕಾರಿಗಳಿಗೆ ಗೊಂದಲ ಉಂಟಾಗಿದೆ. ಈಗ ಲಾಟರಿ ಮೊತ್ತವನ್ನು ಇಟ್ಟುಕೊಳ್ಳುವ ಹಾಗೂ ಇಲ್ಲ, ಕೊಡೋಣವೆಂದರೆ ಮಹಿಳೆಯು ಸಿಗುತ್ತಿಲ್ಲ. ಹಾಗಾಗಿ, ಅಧಿಕಾರಿಗಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು.

ಲಾಟರಿ ಕಂಪನಿ ಅಧಿಕಾರಿಗಳು ಅಷ್ಟಕ್ಕೇ ಸುಮ್ಮನಾಗಿಲ್ಲ. ಅನೆ ಅವರ ವಿಳಾಸವನ್ನು ಹುಡುಕಿದ್ದಾರೆ. ಗಲ್ಲಿ ಗಲ್ಲಿ ಸುತ್ತಾಡಿ ಕೊನೆಗೂ ಅನೆ ಅವರನ್ನು ಹುಡುಕಿ, ಅವರಿಗೆ ಒಂದು ಕೋಟಿ ರೂ. ಮೌಲ್ಯದ ಚೆಕ್‌ ನೀಡಿದ್ದಾರೆ. ಇದನ್ನು ಕಂಡ ಅನೆ ಹಾಗೂ ಸುತ್ತಮುತ್ತಲಿನವರಿಗೆ ಆಶ್ಚರ್ಯ ಉಂಟಾಗಿದೆ. “ನನಗೆ ಕರೆ ಮಾಡಿದರು, ಇ-ಮೇಲ್‌ ಮಾಡಿದರು. ಇದೆಲ್ಲ ಸ್ಕ್ಯಾಮ್‌ ಇರಬಹುದು ಎಂದು ಸುಮ್ಮನಾದೆ. ಆದರೆ, ಅಧಿಕಾರಿಗಳು ಮನೆಗೇ ಬಂದು ಚೆಕ್‌ ನೀಡಿದ್ದಾರೆ. ಇದರಲ್ಲಿ ಒಂದಷ್ಟು ಹಣವನ್ನು ದಾನವಾಗಿ ನೀಡುವೆ” ಎಂದು ಅನೆ ತಿಳಿಸಿದ್ದಾರೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ಹಾಸನ

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ. ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Prajwal Revanna Case What is diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ7 seconds ago

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Chaitra Achar
ಫ್ಯಾಷನ್27 mins ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Veena kashappanavar
ಕರ್ನಾಟಕ51 mins ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ1 hour ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Bomb threat
ದೇಶ1 hour ago

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Saree Fashion
ಫ್ಯಾಷನ್1 hour ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ2 hours ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್2 hours ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ2 hours ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್2 hours ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌