ಬೆಂಗಳೂರು: ಮೈಸೂರು ನಗರಾಭಿವೃದ್ಧಿಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪದ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ಬಗ್ಗೆ ತನಿಖೆ ನಡೆಸಲು ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ (Karnataka Governer) ಅನುಮತಿ ನೀಡಿದ್ದಾರೆ. ತಕ್ಷಣವೇ ಸಿದ್ದರಾಮಯ್ಯ ಅವರು ಈ ತನಿಖೆಗೆ ಕೋರ್ಟ್ನಿಂದ ತಡೆ ತರದಂತೆ ದೂರುದಾರ ಪ್ರದೀಪ್ ಅವರು ಕೇವಿಯಟ್ ಅರ್ಜಿ ಹಾಕಿದ್ದಾರೆ. ತನಿಖೆ ನಡೆಸಲು ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ರಾಜ್ಯಪಾಲರ ಅನುಮತಿ ಕೇಳಿದ್ದರು. ಅವರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ (Thawar Chand Gehlot), ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲ ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್‌ಗೆ ಕೇವಿಯಟ್ ಕೂಡ ಸಲ್ಲಿಸಿದ್ದಾರೆ. ಹಾಗಾದರೆ ಮುಡಾ ಪ್ರಕರಣ ಎಂದರೇನು? ಸಿದ್ದರಾಮಯ್ಯ ಅವರಿಗೆ ಅದು ಉರುಳಾಗಿದ್ದು ಯಾಕೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್ಗಳನ್ನು ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಈ ಸೈಟು ಹಂಚಿಕೆಯಾಗಿದೆ ಎಂಬ ಕಾರಣಕ್ಕೆ ವಿವಾದ ಉಂಟಾಯಿತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಅಕ್ರಮ ಮಂಜೂರಾಗಿದೆ ಎಂದು ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಡಲಾಗಿದೆ ಎಂಬುದೇ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ಆರೋಪವಾಗಿದೆ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದಕ್ಕೆ ಪರ್ಯಾಯವಾಗಿದೆ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ. ಈ ಮೂಲಕ ಸಿಎಂ ತಮ್ಮ ಪ್ರಭಾವ ಬಳಸಿ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಪರ್ಯಾಯವಾಗಿ ನೀಡಲು ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ ಎಂಬುದು ಆರ್ಟಿಐ ಕಾರ್ಯಕರ್ತರ ಪ್ರಶ್ನೆಯಾಗಿದೆ. ಇದು ಲಾಭದ ಉದ್ದೇಶ. ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು ಸಿಎಂ ಪತ್ನಿ ಆರ್ಥಿಕ ಲಾಭ ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.
ಲಾಭ ಮಾಡಿಕೊಟ್ಟಿರುವುದು ಹೇಗೆ ? : ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಗಿರುವ ಪ್ರದೇಶ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ ಲೇಔಟ್ನಲ್ಲಿ 38 ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಇದು ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ. 1998ರಲ್ಲಿ ಸ್ವಾಧೀನಕ್ಕೆ ಒಳಪಟ್ಟ ಭೂಮಿಗೆ ಪರ್ಯಾಯವಾಗಿ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್ಟಿಐ ಕಾರ್ಯಕರ್ತರ ಆರೋಪವಾಗಿದೆ.
ಸಿಎಂ ಪತ್ನಿಗೆ ದೇವನೂರು ಬಡಾವಣೆಯಲ್ಲಿ ಸೈಟ್ ಕೊಡಲ ಸಾವಿರಾರು ಸೈಟ್ಗಳು ಇದ್ದವು. ಆದಾಗ್ಯೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಟಿ. ಜೆ. ಅಬ್ರಾಹಂ ಜುಲೈ 26ರಂದು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೋಟಿಸ್ ಕೊಟ್ಟಿದ್ದರ. ಸಿಎಂ ಪತ್ನಿಗೆ 1998ರ ಜಾಗಕ್ಕೆ 2021ರಲ್ಲಿ ಪರಿಹಾರ ಸಿಕ್ಕಿರುವುದು, ಬೇರೆ ಕಡೆ ಭೂಮಿ ಕೊಟ್ಟಿರುವುದು, 50-50 ಅನುಪಾತ ದುರ್ಬಳಕೆ ಮಾಡಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ನೋಟಿಸ್ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಸ್ ಅವರಿಗೆ ರವಾನೆ ಮಾಡಲಾಗಿದೆ. ಜತೆಗೆ ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ.
ಇದೀಗ ಸಿಎಂ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯನವರ ಕಾನೂನು ಪರಿಣಿತರ ತಂಡ. ರಾಜಕೀಯ ದುರುದ್ದೇಶದಿಂದ ಈ ಅನುಮತಿ ನೀಡಲಾಗಿದೆ ಎನ್ನುವುದರ ಜೊತೆಗೆ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಲು ಸಜ್ಜಾಗಿದೆ.