ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದರ ಅಧಿಕೃತ ಪ್ರಕಟಣೆ ಶನಿವಾರ ಬಿಡುಗಡೆಗೊಂಡಿದೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ ರೇಜು ಎಂ. ಟಿ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಈ ಪ್ರಕಟಣೆಯಲ್ಲಿ ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿದೆ.
2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.
7ನೇ ವೇತನ ಆಯೋಗದ ಪರಿಷ್ಕೃತ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ (ಇಂಗ್ಲಿಷ್)
https://finance.karnataka.gov.in/storage/pdf-files/FD21SRP2024-Dtd-17-08-2024(Eng).pdf7ನೇ ವೇತನ ಆಯೋಗದ ಪರಿಷ್ಕೃತ ವೇತನದ ಪಟ್ಟಿಯನ್ನು ಇಲ್ಲಿ ವೀಕ್ಷಿಸಿ (ಕನ್ನಡ)
https://finance.karnataka.gov.in/storage/pdf-files/FD21SRP2024-Dtd-17-08-2024(Kan).pdfಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಈ ವೇತನ ನಿಗದಿ ಮಾಡಲಾಗಿದೆ
ದಿನಾಂಕ: 01.07.2022ರಲ್ಲಿದ್ದಂತೆ ಮೂಲ ವೇತನ.
ದಿನಾಂಕ: 01.07.2022ರಲ್ಲಿದ್ದಂತಹ ಬೆಲೆ ಸೂಚ್ಯಂಕ ಹಂತ 361.704 ಕ್ಕೆ ಸಂವಾದಿಯಾಗಿ ಲಭ್ಯವಿದ್ದ 312 ತುಟ್ಟಿ ಭತ್ಯೆ.
ದಿನಾಂಕ: 01.07.2022 ರಲ್ಲಿ ಲಭ್ಯವಿದ್ದ ಮೂಲ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.
ಮೇಲಿನ ಎಲ್ಲ ಹಂತಗಳನ್ನು ಒಟ್ಟುಗೂಡಿಸಿ ಲೆಕ್ಕ ಹಾಕಿದಾಗ ಬರುವ ಮೊತ್ತದ ನಂತರದ ಹಂತದಲ್ಲಿ ವೇತನ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿಗದಿಪಡಿಸಲಾಗಿದೆ.
ಆಗಸ್ಟ್ 1ರಿಂದ ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನ
1.ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ 8,500 ರೂ. ಮತ್ತು 75,300 ರಿಂದ 13,500 ಮತ್ತು 1,20,600ಗಳಿಗೆ ಮತ್ತು ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ 8,500 ಮತ್ತು 45,180 ರಿಂದ 13,500 ಮತ್ತು 80,400 ಪರಿಷ್ಕರಿಸಲಾಗಿದೆ. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
2.ದಿನಾಂಕ: 01.07.2022ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಸರ್ಕಾರಿ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಈ ಕೆಳಗಿನಂತೆ ನಿಗದಿಪಡಿಸಿದೆ.
ಅ) ದಿನಾಂಕ: 01.07 2022 ರಂದು ಇದ್ದ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನ:
ಅ) ದಿನಾಂಕ: 01.07.2022 ರಂದು ಲಭ್ಯವಿದ್ದ 31% ರಷ್ಟು ತುಟ್ಟಿ ಭತ್ಯೆ,
ಇ) ದಿನಾಂಕ: 01.07.2022 ರಂದು ಇದ್ದ ನಿವೃತ್ತಿ ವೇತನ/ಕುಟುಂಬ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.
3.ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಈ ಮೇಲಿನ (ಅ) + (ಅ) + (ಇ) ರ ಒಟ್ಟಾರೆ ಮೊತ್ತವು ಮಾಸಿಕ 13,500 ಗಳ ಕನಿಷ್ಠ ಪಿಂಚಣಿಗೆ ಕಡಿಮೆ ಇಲ್ಲದಂತೆ ಮತ್ತು ನಿವೃತ್ತಿ ವೇತನವು ಗರಿಷ್ಠ ಮಾಸಿಕ 1,20,600 ರೂ. ಮಿತಿಗೆ ಹಾಗೂ ಕುಟುಂಬ ನಿವೃತ್ತಿ ವೇತನದ ಗರಿಷ್ಠ ಮೊತ್ತವು ಮಾಸಿಕ 80,400 ರೂ. ಮಿತಿಗೆ ಒಳಪಟ್ಟಿರುತ್ತದೆ. ಈ ಪರಿಷ್ಕೃತ ಪಿಂಚಣಿಯ ಆರ್ಥಿಕ ಲಾಭವು ದಿನಾಂಕ: 01.08.20224 ರಿಂದ ಪ್ರಾಪ್ತವಾಗತಕ್ಕದ್ದು.
4.ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಸಂಬಂಧಿತ ಭತ್ಯೆಗಳಾದ ಮನೆ ಬಾಡಿಗೆ ಭತ್ಯೆ. ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆಗಳ ಪರಿಷ್ಕರಣೆಯ ಶಿಫಾರಸ್ಸು ಮತ್ತು ಪರಿಷ್ಕೃತ ವೇತನ ಹಾಗೂ ಪರಿಷ್ಕೃತ ಪಿಂಚಣಿಯಲ್ಲಿ ತುಟ್ಟಿ ಭತ್ಯೆ ಲೆಕ್ಕಾಚಾರ ಮಾಡಲು ಶಿಫಾರಸ್ಸು ಮಾಡಲಾದ ಪರಿಷ್ಕೃತ ಸೂತ್ರಕ್ಕೆ ಸಂಬಂಧಿಸಿದ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಮುಂದುವರೆಯುತ್ತದೆ.
5.ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳದ ಪರಿಷ್ಕರಣೆಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ.