ಬೆಂಗಳೂರು: ಸೆ.22ರಂದು ರಾಜ್ಯಾದ್ಯಂತ ಹಗುರ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.
ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ಸಾಧಾರಾಣ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಜತೆಗೆ ಬಿರುಗಾಳಿಯ ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಸೆ.20ರಂದು ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿ, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಗೋಕರ್ಣದಲ್ಲಿ 5 ಸೆಂ.ಮೀ, ಕಾರವಾರ, ಅಂಕೋಲ ,ಕುಮಟ, ತಿಪಟೂರಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕೂಟ, ಲೋಕಾಪುರ, ತುಮಕೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೆಳಿಕೇರಿ, ಹೊನಾವರ, ಶಿರಾಳಿ, ಬೆಳ್ತಂಗಡಿ, ಬೆಂಗಳೂರು ನಗರ, ಹುಣಸೂರು, ದಾವಣಗೆರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ