Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ - Vistara News

ಮಳೆ

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain : ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮನೆ ಕುಸಿತ, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಡ್ಡ ಕುಸಿತಕ್ಕೆ ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ ಆಗಿದ್ದರಿಂದ ಇತ್ತ ಯಕ್ಷಗಾನ ಕಲಾವಿದನ ಮನೆಗೆ ಹಾನಿಯಾಗಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಾರವಾರ/ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ (Karnataka Rain) ಪ್ರಕರಣ ಹೆಚ್ಚಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಆಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರಿ ಮಳೆಗೆ ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್‌ ಶೆಟ್ಟಿ ಅವರ ಮನೆ ಕುಸಿದು ಬಿದ್ದಿದೆ. ನಂದನ ಶೆಟ್ಟಿ‌ ಮಂದಾರ್ತಿ ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದಾರೆ. ಮನೆ ಕುಸಿಯುವಾಗ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಕಂಗಲಾಗಿರುವ ಕಲಾವಿದನ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

karnataka Rain

ಕೊಡಗಿನಲ್ಲಿ ಇಲ್ಲೆಲ್ಲ ನಿಷೇಧ

ಮಹಾರಾಷ್ಟ್ರ ಫಾಲ್ಸ್ ದುರಂತದ ಬೆನ್ನೆಲ್ಲೆ ಪ್ರವಾಸಿ ತಾಣಗಳ ಬಗ್ಗೆ ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಪ್ರವಾಸಿಗರು ಜಲಪಾತಗಳು, ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ನೀರಿನಲ್ಲಿ ಇಳಿದು ಕ್ರೀಡೆ, ಫೋಟೋ ತೆಗೆಯುವ ದುಸ್ಸಾಹಕ್ಕೆ ಕಡಿವಾಣ ಹಾಕಲಾಗಿದೆ. ಮಳೆಗಾಲದಲ್ಲಿ ಹೆಚ್ಚುತ್ತಿರುವ ಜಲ ಸಂಬಂಧಿ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ನದಿಗಳಲ್ಲಿ ನಡೆಯುವ ರ‍್ಯಾಫ್ಟಿಂಗ್ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.

ಮನೆ ಮೇಲೆ ಬಿದ್ದ ರಸ್ತೆ ಬದಿಯ ತಡೆಗೋಡೆ; ಜೀಪ್ ಸಂಪೂರ್ಣ ಜಖಂ

ಚಿಕ್ಕಮಗಳೂರಿನಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮನೆಯ ಮೇಲೆ ರಸ್ತೆ ಬದಿಯ ತಡೆಗೋಡೆ ಬಿದ್ದು,
ಮನೆಯಂಗಳದಲ್ಲಿ ನಿಲ್ಲಿಸಿದ್ದ ಜೀಪ್ ಸಂಪೂರ್ಣ ಜಖಂಗೊಂಡಿದೆ. ಕಳಸ ತಾಲೂಕಿನ ಕಚ್ಚಿ ಗಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಂಗನಾಥ್ ಎಂಬುವರ ಮನೆಗೆ ಹಾನಿಯಾಗಿದ್ದು, ಧರೆ ಇನ್ನಷ್ಟು ಕುಸಿಯುವ ಆತಂಕ ಹೆಚ್ಚಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಈ ತಾಣಗಳಿಗೆ ಹೋಗಬೇಡಿ

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest17 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest18 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest21 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest22 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌