Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ - Vistara News

ಮಳೆ

Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಕ್ಕೆ ಇಂದು ಕುಮಾರಸ್ವಾಮಿ, ಆರ್‌.ಅಶೋಕ್‌ ಭೇಟಿ

ಹಾಸನ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು (ಜುಲೈ 21) ಹಾಸನಕ್ಕೆ ಭೇಟಿ ನೀಡಿ ಮಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ನಂತರ‌ ಮೊದಲ ಬಾರಿಗೆ‌ ಎಚ್‌ಡಿಕೆ ತವರಿಗೆ ಆಗಮಿಸಲಿದ್ದು, ಸಕಲೇಶಪುರ‌ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಳೆಯಿಂದ ರಸ್ತೆ ಕುಸಿದಿರುವ, ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಎಲ್ಲಿಗೆಲ್ಲ ಭೇಟಿ?

ಸಕಲೇಶಪುರ ತಾಲೂಕಿನ‌ ಕೊಲ್ಲಹಳ್ಳಿ, ದೊಡ್ಡತಪ್ಲು‌ ಸೇರಿದಂತೆ ಅನೇಕ ಭಾಗಗಳಿಗೆ ಎಚ್‌ಡಿಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ‌ಹೆದ್ದಾರಿ 75ರಲ್ಲಿ ಆಗಿರೋ ಅವಾಂತರ, ಶಿರಾಡಿ ಘಾಟ್‌ನಲ್ಲಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಬಳಿಕ ಮಳೆ‌ ಅನಾಹುತದ ಸಂಕಷ್ಟದಲ್ಲಿರೋ ರೈತರ ಸಮಸ್ಯೆ ಆಲಿಸಲಿದ್ದಾರೆ. ಜಿಲ್ಲೆಗೆ ಆಗಮಿಸಲಿರು ತಮ್ಮ ನಾಯಕನ್ನು ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆರ್.ಅಶೋಕ್ ಪ್ರವಾಸ

ಹಾಸನ ಜಿಲ್ಲೆಯಲ್ಲಿ ಇಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹಾಸನ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಕಲೇಶಪುರ ತಾಲೂಕಿನ‌ ಹಲವು ಪ್ರದೇಶಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಿರುವ ಅಶೋಕ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿರೋ‌ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.

ರಸ್ತೆ ಪಕ್ಕದಲ್ಲಿಯೇ ನಿಂತ ನೂರಾರು ಲಾರಿಗಳು

ಬೆಳಗಾವಿ: ಪಶ್ಚಿಮ‌ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಶಿಥಿಲವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಲಾರಿಗಳನ್ನು ತಡೆದು ನಿಲ್ಲಿಸಲಾಗಿದೆ. ಚೋರ್ಲಾ ಮಾರ್ಗವಾಗಿ ಬೆಳಗಾವಿಗೆ ಬರುವ ವಾಹನಗಳನ್ನು ಅಧಿಕಾರಿಗಳು ತಡೆದಿದ್ದು, ಇದರಿಂದ ಕಳೆದ 24 ಗಂಟೆಗಳಿಂದ ಸರಕು ಹೊತ್ತು ನೂರಾರು ಲಾರಿಗಳು ನಿಂತಲ್ಲಿಯೇ ನಿಂತಿವೆ. ಏಕಾಏಕಿ ಭಾರಿ ವಾಹನಗಳನ್ನು ತಡೆದಿದ್ದರಿಂದ ಲಾರಿ ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಬಂದ್ ಮಾಡುವುದನ್ನು ಅಧಿಕಾರಿಗಳು ಮೊದಲೇ ಹೇಳಬೇಕಿತ್ತು. ಏಕಾಏಕಿ ಬಂದ್ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಚಾಲಕರು ಪ್ರಶ್ನಿಸಿದ್ದಾರೆ. ಲಾರಿಯಲ್ಲಿರುವ ಸರಕೆಲ್ಲ ಮಳೆಯಲ್ಲಿ ನೆನೆದು ಹೋಗುವ ಭೀತಿಯೂ ಚಾಲಕರನ್ನು ಕಾಡುತ್ತಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ತಪ್ಪಲ್ಲ ಮಳೆ ಕಾಟ; ಬೆಂಗಳೂರಿನಲ್ಲಿ ಹೇಗಿರಲಿದೆ ಮಳೆಯಾಟ

Karnataka Weather Forecast: ರಾಜ್ಯಾದ್ಯಂತ ವರುಣನ (Rain News) ಆರ್ಭಟ ಮುಂದುವರಿದಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದರೆ, ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ವೀಕೆಂಡ್‌ ಮೋಜಿಗೆ ಮಳೆರಾಯ (Rain News) ಅಡ್ಡಿಯಾಗಲಿದ್ದಾನೆ. ಕರಾವಳಿಯಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಭಾನುವಾರವು ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡು ಭಾಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯು ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಬೆಳಗಾವಿಯಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ

ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು -ಕರಾವಳಿಯಲ್ಲಿ ಮಳೆಯಾಟ

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌

40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Karnataka Rain: ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ ಮುಳುಗಡೆಯಾಗಿವೆ.

VISTARANEWS.COM


on

Heavy rain in Chandragutti village and other places of Soraba taluk
Koo

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರಿದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ (Karnataka Rain) ಮುಳುಗಡೆಯಾಗಿವೆ.

ತಾಲೂಕು ಹಾಗೂ ನೆರೆಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವರದಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಚಂದ್ರಗುತ್ತಿ ಸಮೀಪದ ಪುರಾ ಗ್ರಾಮದಲ್ಲಿ ಈಗಾಗಲೇ 5 ಕುಟುಂಬದ ಸುಮಾರು 30 ಜನ ನೆರೆಯ ಭೀತಿಯಿಂದ ಸಂಬಂಧಿಗಳ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಉಳಿದಂತೆ ನೆರೆ ಎದುರಾದರೆ 11 ಮನೆಗಳಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಈ ನಿಟ್ಟಿನಲ್ಲಿ ಗ್ರಾಮದ ಸರ್ಕಾರಿ ಕಿ.ಪ್ರಾ. ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಲಾಗಿದೆ. ವರದಾ ನದಿಯ ಪ್ರವಾಹಕ್ಕೆ ಈಗಾಗಲೇ ಕಡಸೂರು, ತಟ್ಟಿಕೆರೆ, ಅಂದವಳ್ಳಿ, ಜೋಳದಗುಡ್ಡೆ, ಚನ್ನಪಟ್ಟಣ ಹಾಗೂ ಅನೇಕ ಗ್ರಾಮಗಳ ನೂರಾರು ಎಕರೆ ಜಮೀನುಗಳು ಜಲಾವೃತವಾಗಿವೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಕಳೆದ 24 ಗಂಟೆಯಲ್ಲಿ ವಾಡಿಕೆ ಮಳೆಗಿಂತ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆ ಮಳೆ 28.4 ಮಿ.ಮೀ ಆಗಿದ್ದು, 121.2 ಮಿ.ಮೀ ಮಳೆ ದಾಖಲಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆಗಳು ಕೋಡಿ ಬಿದ್ದಿವೆ. ಕಮರೂರು ಗ್ರಾಮದಲ್ಲಿ ಕೆರೆ ನೀರು ರಸ್ತೆಗೆ ಬರುತ್ತಿದ್ದು, ಸಂಚಾರಕ್ಕೆ ತೊಡಕಾಗುತ್ತಿದೆ. ಈ ಹಿಂದೆ ಸಮರ್ಪಕವಾಗಿ ಕೆರೆ ಕೋಡಿ ದುರಸ್ತಿ ಮಾಡದಿರುವುದೇ ಸಮಸ್ಯೆಗೆ ಕಾರಣ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಚಂದ್ರಗುತ್ತಿಯಿಂದ ಉತ್ತರ ಕನ್ನಡದ ಸಿದ್ದಾಪುರ ರಸ್ತೆಯ ಶಿವಪುರ ಸಮೀಪ ಭಂಗೀ ಭೂತಪ್ಪ ದೇವಸ್ಥಾನದ ಬಳಿ ಹಳ್ಳ ಉಕ್ಕಿದ್ದು, ಸುತ್ತಲಿನ ಪ್ರದೇಶ ಜಲಾವೃತವಾಗಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದೇ ಪ್ರಮಾಣದಲ್ಲಿ ಮಳೆ ಮುಂದುವರೆದರೆ ಚಂದ್ರಗುತ್ತಿ-ಸಿದ್ದಾಪುರ ರಸ್ತೆ, ನ್ಯಾರ್ಸಿ ಸಮೀಪ ಹಳ್ಳ ಉಕ್ಕಿದರೆ ಹರೀಶಿ ಸಂಪರ್ಕ ರಸ್ತೆ, ಗುಂಜನೂರು ನರ್ಸರಿ ಬಳಿ ವರದಾ ನದಿ ಉಕ್ಕಿ ನೀರು ರಸ್ತೆಗೆ ಬಂದರೆ ಸೊರಬ ಸಂಪರ್ಕ ರಸ್ತೆ ಕಡಿತವಾಗುವ ಸಾಧ್ಯತೆ ಎದುರಾಗಿದೆ.

ಇದನ್ನೂ ಓದಿ: Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯಲ್ಲಿ ಜನತೆಯ ಸುರಕ್ಷತೆ ದೃಷ್ಟಿಯಿಂದ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ನೆರೆಯಿಂದ ಸಮಸ್ಯೆ ಎದುರಾದರೆ ಅಂತಹ ಸ್ಥಳದಲ್ಲಿನ ಕುಟುಂಬಗಳನ್ನು ಸ್ಥಳಾಂತರ ಮಾಡಿ ಸ್ಥಳೀಯ ಸರ್ಕಾರಿ ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ತಾಲೂಕು ಆಡಳಿತದಿಂದ ಸಿದ್ದತೆ ನಡೆದಿದೆ ಎಂದು ಉಪ ತಹಸೀಲ್ದಾರ್‌ ಪಿ.ಲಲಿತಾ ತಿಳಿಸಿದ್ದಾರೆ.

Continue Reading

ಕರ್ನಾಟಕ

HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

VISTARANEWS.COM


on

Union Minister HD Kumaraswamy visited the place where the hill collapsed in Uttara Kannada
Koo

ಕಾರವಾರ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ದಾರುಣ ಸಾವನ್ನಪ್ಪಿದ ಸ್ಥಳಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿಗೆ ಬಂದು ರಸ್ತೆ ಮಾರ್ಗವಾಗಿ ಶಿರೂರು ಗುಡ್ಡ ಕುಸಿತ ಸ್ಥಳ ತಲುಪಿದ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳಿಂದ, ಗುಡ್ಡ ಕುಸಿತ, ಪರಿಹಾರ ಕಾರ್ಯ, ನೊಂದವರಿಗೆ ನೆರವು, ಹೆದ್ದಾರಿಯಲ್ಲಿ ಮಣ್ಣು ತೆರವು, ಗಂಗಾವಳಿ ನದಿ ಪ್ರವಾಹ ಹಾಗೂ ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಳೆಯ ನಡುವೆಯೇ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಸಚಿವರು, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಮೃತರ ಕುಟುಂಬಗಳ ಜತೆ ಸರ್ಕಾರ ನಿಲ್ಲಬೇಕು

ರಾಜ್ಯ ಸರ್ಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಾಯಿಸಿದರು.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ, ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.

ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು.

ಈ ಘಟನೆ ಪರಿಹಾರ ಕಾರ್ಯ ವಿಳಂಬವಾಗಿ ಸಾಗುತ್ತಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು.

ರಾಜ್ಯ ಸರ್ಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ, ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ. ಇಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳದ್ದು ಜವಾಬ್ದಾರಿ ಇದೆ ಎಂದು ಉತ್ತರಿಸಿದರು.

ಭಾರೀ ಮಳೆಯಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಕರಾವಳಿ ಮಲೆನಾಡು ಭಾಗದಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಸಚಿವ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

ಈ ಸಂದರ್ಭದಲ್ಲಿ ಕುಮಟಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

Shivamogga News: ಕಳೆದ ಒಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆಯಿಂದಾಗಿ ಹೊಸನಗರ ತಾಲೂಕಿನ ಹುಂಚ ಹೋಬಳಿ ಕೋಡೂರು ಬಳಿಯ ಹುಲಗಾರ-ಮೈತಳ್ಳಿ ಸಂಪರ್ಕ ರಸ್ತೆಯಲ್ಲಿನ ದರೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Landslide on Hulagaru Maithalli link road DC Gurudatta Hegde visit and inspected
Koo

ರಿಪ್ಪನ್‌ಪೇಟೆ: ಕಳೆದ ಒಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆಯಿಂದಾಗಿ ಹೊಸನಗರ ತಾಲೂಕಿನ ಹುಂಚ ಹೋಬಳಿ ಕೋಡೂರು ಬಳಿಯ ಹುಲಗಾರ-ಮೈತಳ್ಳಿ ಸಂಪರ್ಕ ರಸ್ತೆಯಲ್ಲಿನ ದರೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶನಿವಾರ ಭೇಟಿ ನೀಡಿ, ಪರಿಶೀಲನೆ (Shivamogga News) ನಡೆಸಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

35ಕ್ಕೂ ಅಧಿಕ ಮನೆ, ಕೊಟ್ಟಿಗೆಗಳಿಗೆ ಹಾನಿ

ಭಾರೀ ಮಳೆಯಿಂದ ಹೊಸನಗರ ತಾಲೂಕಿನ ವಿವಿಧೆಡೆ 35ಕ್ಕೂ ಅಧಿಕ ಮನೆಗಳಿಗೆ ಮತ್ತು ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದೆ. ಕೆಲವು ಮನೆಗಳು ಹಾಗೂ ಕೊಟ್ಟಿಗೆಗಳ ಗೋಡೆಗಳು ಕುಸಿದು ಬಿದ್ದರೆ, ಕೆಲವೊಂದು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ನಿರಂತರವಾಗಿ ಹಗಲಿರುಳು ಎನ್ನದೆ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಹಳ್ಳ-ಕೊಳ್ಳ ಮತ್ತು ಹೊಳೆಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅನೇಕ ಸಂಪರ್ಕ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಈ ಸಂದರ್ಭದಲ್ಲಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಪಂಚಾಯಿತಿ ಇಒ ನರೇಂದ್ರ, ರೆವಿನ್ಯೂ ಇನ್ಸ್‌ಪೆಕ್ಟರ್ ಆಪ್ರೋಜ್, ಗ್ರಾಮ ಲೆಕ್ಕಾಧಿಕಾರಿ ಜಾಕೀರ್‌ ಹುಸೇನ್, ಪಂಚಾಯಿತಿ ಆಭಿವೃದ್ಧಿ ಆಧಿಕಾರಿಗಳು ಮತ್ತು ಕಂದಾಯ ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading
Advertisement
Kalki 2898 AD makers served legal notice Kalki Dham Peethadheeshwar Acharya Pramod Krishnam
ಟಾಲಿವುಡ್3 mins ago

Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ!

ದೇಶ8 mins ago

Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ರಾಜಮಾರ್ಗ ಅಂಕಣ
ಕ್ರೀಡೆ43 mins ago

ರಾಜಮಾರ್ಗ ಅಂಕಣ: ರಾಹುಲ್ ದ್ರಾವಿಡ್ ಎಂಬ ಮಹಾಗುರುವಿಗೆ ಸಲಾಂ; ಭಾರತರತ್ನ ನೀಡಲು ಇದು ಸಕಾಲ

Road Accident
ಕ್ರೈಂ44 mins ago

Road Accident: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

Road Rage Case
ದೇಶ51 mins ago

Road Rage Case: ನಡು ರಸ್ತೆಯಲ್ಲೇ ಮಹಿಳೆಯ ಕೂದಲು ಎಳೆದು ಮೂಗಿಗೆ ಪಂಚ್‌; ವೈರಲಾಗ್ತಿದೆ ಈ ವಿಡಿಯೋ

Pawan Kalyan Go To Singapore Anna Lezhneva graduation ceremony
ಕಾಲಿವುಡ್54 mins ago

Pawan Kalyan: ಸಿಂಗಾಪುರದಲ್ಲಿ ಪವನ್ ಕಲ್ಯಾಣ್ ಮೂರನೇ ಪತ್ನಿ ಪಡೆದ ಪದವಿ ಯಾವುದು?

Women's Asia Cup
ಕ್ರೀಡೆ1 hour ago

Women’s Asia Cup: ಏಷ್ಯಾಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್

Road Accident
ಕ್ರೈಂ1 hour ago

Road Accident: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಜೀಪು; ಬಸ್‌ ನಿಲ್ಲಿಸದ ಕೋಪಕ್ಕೆ ಕಲ್ಲು ತೂರಿದವ ಪೊಲೀಸ್‌ ಅತಿಥಿ

Nipah Virus
ದೇಶ2 hours ago

Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ

Payal Malik declares she’s ready to divorce Armaan Malik
ಬಿಗ್ ಬಾಸ್2 hours ago

Payal Malik: ಇನ್ನೊಬ್ಬಳ ಜತೆ ಹಾಯಾಗಿರಲಿ ಎಂದು ಪತಿಗೆ ವಿಚ್ಛೇದನ ಕೊಡೋಕೆ ಮುಂದಾದ ಪಾಯಲ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ23 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌