Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ - Vistara News

ಮಳೆ

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Karnataka Rain : ಭಾರಿ ಮಳೆ ಎಫೆಕ್ಟ್‌ನಿಂದಾಗಿ ಸಾವು-ನೋವು ಸಂಭವಿಸುತ್ತಿದೆ. ಸದ್ಯ ಗುಡ್ಡ ಕುಸಿತ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಲ್ಲಿ ನೂರಾಕ್ಕೂ ಹೆಚ್ಚು ಅಪಾಯಕಾರಿ ಜಾಗಗಳ ಗುರುತು ಹಾಕಲಾಗಿದೆ. ಇತ್ತ ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌ ಆಗಿರುವುದರಿಂದ ರೈಲು ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

karnataka rain
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರಿ ಮಳೆಯಿಂದಾಗಿ (Karnataka Rain) ಅಂಕೋಲಾ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಇಲಾಖೆಯು ರೈಲು ವ್ಯವಸ್ಥೆ ಮಾಡಿದೆ. ಗೋವಾಕ್ಕೆ ತೆರಳುವ ಮುಖ್ಯ ಮಾರ್ಗ ಬಂದ್‌ ಆಗಿರುವ ಹಿನ್ನೆಲೆಯಲ್ಲಿ ರೈಲು ಸೇವೆ ಇರಲಿದೆ. ಮಾಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲರಹಿತ ರೈಲು ಓಡಾಡಲಿದೆ. ಜುಲೈ 20, 21, 22 ರಂದು 2 ಕೇಂದ್ರಗಳ ನಡುವೆ ಮೂರು ದಿನಗಳ ಕಾಲ ಸಂಚರಿಸಲಿದೆ. ಬೆಳಗ್ಗೆ ಮಾಡಗಾಂವ್ ಜಂಕ್ಷನ್‌ನಿಂದ 6 ಗಂಟೆಗೆ ಹೊರಡಲಿರುವ ವಿಶೇಷ ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರು ಪ್ರಯಾಣದಲ್ಲಿ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು 7 ಗಂಟೆಗೆ ಮಡಗಾಂವ್ ತಲುಪಲಿದೆ . ಕಾಣಕೋಣ, ಕಾರವಾರ, ಹರ್ವಾಡ, ಅಂಕೋಲ ಜೊತೆ ಬಹುತೇಕ ಎಲ್ಲಾ ಸ್ಟೇಷನ್ಗಳಲ್ಲೂ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಚಿಕ್ಕಮಗಳೂರಲ್ಲಿವೆ 158 ‌ಅಪಾಯಕಾರಿ ಜಾಗಗಳು

ಚಿಕ್ಕಮಗಳೂರು: ಮುಂಗಾರು ಮಳೆ ಆರ್ಭಟ (Karnataka rain) ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಕಿಂಗ್ ನ್ಯೂಸ್‌ ನೀಡಿದೆ. ಮಳೆಯಿಂದ ಅಪಾಯ ಸಂಭವಿಸಬಹುದಾದ ಜಾಗಗಳ ಗುರುತು ಮಾಡಿದೆ. ಆಗಸ್ಟ್ ತಿಂಗಳಲ್ಲಿ ಮಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಗುಡ್ಡ ಕುಸಿತ ರೀತಿಯ ಅಪಾಯಕಾರಿ ಸ್ಥಳಗಳ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸುತ್ತಮುತ್ತ ಸುಮಾರು 158 ‌ ಸ್ಥಳಗಳು ಅಪಾಯಕಾರಿಯಾಗಿವೆ. ಅದರಲ್ಲಿ ಶೃಂಗೇರಿ ತಾಲೂಕಿನಲ್ಲಿ ಬರೋಬ್ಬರಿ 87, ಎನ್‌ಆರ್‌ ಪುರ ತಾಲೂಕಿನಲ್ಲಿ 21, ಮೂಡಿಗೆರೆ ತಾಲೂಕಿನಲ್ಲಿ 17 ಡೇಂಜರ್ ಸ್ಪಾಟ್‌ಗಳಿವೆ.

ಅಪಾಯಕಾರಿ ಸ್ಥಳಗಳ ಮೇಲೆ ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ತಂಡ ತೀವ್ರ ನಿಗಾವಹಿಸಿದ್ದಾರೆ. ಅಪಾಯ ಸಂಭವಿಸಿದರೆ ಸ್ಥಳಾಂತರಿಸಲು 77 ಸುರಕ್ಷಿತ ಜಾಗಗಳನ್ನು ಸಹ ಗುರುತು ಮಾಡಲಾಗಿದೆ. ಕೊಪ್ಪ ತಾಲೂಕಿನ ಗುಡ್ಡೆ ತೋಟದ 14 ಕುಟುಂಬಗಳ ಮೇಲು ತೀವ್ರ ನಿಗಾವಹಿಸಲಾಗಿದೆ. ಭಾರಿ ಮಳೆ ಸುರಿದರೆ ಕುಟುಂಬಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲಿ ಚಿಕ್ಕಮಗಳೂರಿಗೆ ಕಂಟಕ ಕಾದಿದ್ದು, ಮೊದಲೇ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ನಿರಂತರ ಮಳೆಗೆ ಭೂ ಕುಸಿತ

ಅರಮನೆ ನಗರಿ ಮೈಸೂರಿನಲ್ಲಿ ನಿರಂತರ ಮಳೆಗೆ ಶ್ರೀರಾಂಪುರ ಜಂಕ್ಷನ್ ಸಮೀಪದ ರಿಂಗ್ ರಸ್ತೆಯಲ್ಲಿ ಭೂಮಿ ಕುಸಿದಿದೆ. ಮುಖ್ಯ ರಸ್ತೆಯಲ್ಲೇ ಭೂಮಿ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ತರಾತುರಿಯಲ್ಲಿ ದುರಸ್ತಿ ಕಾರ್ಯಕ್ಕೆ ಮುಂದಾದರು. ಜೆಸಿಬಿ ಯಂತ್ರದ ಮೂಲಕ ದುರಸ್ತಿ ಕಾರ್ಯ ನೆರವೇರಿಸಿದರು. ಇನ್ನೂ ಸಾರ್ವಜನಿಕರು ಹೊಂಡವನ್ನು ಕುತೂಹಲದಿಂದ ನೋಡುತ್ತಿರುವುದು ಕಂಡು ಬಂತು. ಭಾರಿ ಗಾತ್ರದ ವಾಹನಗಳು ಕೂಡ ಸರ್ವೀಸ್ ರಸ್ತೆಯಲ್ಲಿ ಚಲಿಸುತ್ತಿದ್ದವು.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಮಳೆಗೆ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟು ಆಕ್ರೋಶ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಮತ್ತಿಘಟ್ಟ ಗ್ರಾಮ ಪಂಚಾಯತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರಮುಖ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ಹೀಗಾಗಿ ಕೆಸರು ರಸ್ತೆಗೆ ರಾಗಿ ಸಸಿ ನೆಟ್ಟು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡಾಟಲು ಹರಸಾಹಸ ಪಡೆಯುವಂತಾಗಿದೆ. ಪರ್ಯಾಯ ರಸ್ತೆಯಿಲ್ಲದೇ ಕೆಸರು ರಸ್ತೆಯಲ್ಲೆ ಓಡಾಟ ನಡೆಸುವ ಪರಿಸ್ಥಿತಿ ಇದೆ.

ವರದಾ ನದಿಯಲ್ಲಿ ಈಶ್ವರ ದೇಗುಲ ಮುಳುಗಡೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ವರದಾ ನದಿ ತುಂಬಿ ಹರಿಯುತ್ತಿದೆ. ವರದಾ ನದಿಯಲ್ಲಿ ನೀರಿನ‌ ಹರಿವು ಹೆಚ್ಚಾಗಿದ್ದು, ಹಾವೇರಿಯ ದೇವಗಿರಿ ಬಳಿ ದೇಗುಲ ಮುಳುಗಡೆಯಾಗಿದೆ. ನದಿ ದಡದಲ್ಲಿದ್ದಈಶ್ವರ ದೇಗುಲ ಮುಳುಗುಡೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲಿ ಮಳೆಗೆ ಇತಿಹಾಸ ಪ್ರಸಿದ್ಧ ವಿಷ್ಣುಸಮುದ್ರ (ಬಿಸ್ಟಮ್ಮನ ಕೆರೆ) ಕೆರೆ ಕೋಡಿ ಬಿದ್ದಿದೆ. ಬೇಲೂರು ಪಟ್ಟಣದಲ್ಲಿರುವ ಬಿಸ್ಟಮ್ಮನ ಕೆರೆಯು ಕಳೆದ ಎರಡು ವರ್ಷಗಳ ಹಿಂದೆ ಕೋಡಿ ಬಿದ್ದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Karnataka Rain: ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ ಮುಳುಗಡೆಯಾಗಿವೆ.

VISTARANEWS.COM


on

Heavy rain in Chandragutti village and other places of Soraba taluk
Koo

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರಿದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ (Karnataka Rain) ಮುಳುಗಡೆಯಾಗಿವೆ.

ತಾಲೂಕು ಹಾಗೂ ನೆರೆಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವರದಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಚಂದ್ರಗುತ್ತಿ ಸಮೀಪದ ಪುರಾ ಗ್ರಾಮದಲ್ಲಿ ಈಗಾಗಲೇ 5 ಕುಟುಂಬದ ಸುಮಾರು 30 ಜನ ನೆರೆಯ ಭೀತಿಯಿಂದ ಸಂಬಂಧಿಗಳ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಉಳಿದಂತೆ ನೆರೆ ಎದುರಾದರೆ 11 ಮನೆಗಳಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಈ ನಿಟ್ಟಿನಲ್ಲಿ ಗ್ರಾಮದ ಸರ್ಕಾರಿ ಕಿ.ಪ್ರಾ. ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಲಾಗಿದೆ. ವರದಾ ನದಿಯ ಪ್ರವಾಹಕ್ಕೆ ಈಗಾಗಲೇ ಕಡಸೂರು, ತಟ್ಟಿಕೆರೆ, ಅಂದವಳ್ಳಿ, ಜೋಳದಗುಡ್ಡೆ, ಚನ್ನಪಟ್ಟಣ ಹಾಗೂ ಅನೇಕ ಗ್ರಾಮಗಳ ನೂರಾರು ಎಕರೆ ಜಮೀನುಗಳು ಜಲಾವೃತವಾಗಿವೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಕಳೆದ 24 ಗಂಟೆಯಲ್ಲಿ ವಾಡಿಕೆ ಮಳೆಗಿಂತ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆ ಮಳೆ 28.4 ಮಿ.ಮೀ ಆಗಿದ್ದು, 121.2 ಮಿ.ಮೀ ಮಳೆ ದಾಖಲಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆಗಳು ಕೋಡಿ ಬಿದ್ದಿವೆ. ಕಮರೂರು ಗ್ರಾಮದಲ್ಲಿ ಕೆರೆ ನೀರು ರಸ್ತೆಗೆ ಬರುತ್ತಿದ್ದು, ಸಂಚಾರಕ್ಕೆ ತೊಡಕಾಗುತ್ತಿದೆ. ಈ ಹಿಂದೆ ಸಮರ್ಪಕವಾಗಿ ಕೆರೆ ಕೋಡಿ ದುರಸ್ತಿ ಮಾಡದಿರುವುದೇ ಸಮಸ್ಯೆಗೆ ಕಾರಣ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಚಂದ್ರಗುತ್ತಿಯಿಂದ ಉತ್ತರ ಕನ್ನಡದ ಸಿದ್ದಾಪುರ ರಸ್ತೆಯ ಶಿವಪುರ ಸಮೀಪ ಭಂಗೀ ಭೂತಪ್ಪ ದೇವಸ್ಥಾನದ ಬಳಿ ಹಳ್ಳ ಉಕ್ಕಿದ್ದು, ಸುತ್ತಲಿನ ಪ್ರದೇಶ ಜಲಾವೃತವಾಗಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದೇ ಪ್ರಮಾಣದಲ್ಲಿ ಮಳೆ ಮುಂದುವರೆದರೆ ಚಂದ್ರಗುತ್ತಿ-ಸಿದ್ದಾಪುರ ರಸ್ತೆ, ನ್ಯಾರ್ಸಿ ಸಮೀಪ ಹಳ್ಳ ಉಕ್ಕಿದರೆ ಹರೀಶಿ ಸಂಪರ್ಕ ರಸ್ತೆ, ಗುಂಜನೂರು ನರ್ಸರಿ ಬಳಿ ವರದಾ ನದಿ ಉಕ್ಕಿ ನೀರು ರಸ್ತೆಗೆ ಬಂದರೆ ಸೊರಬ ಸಂಪರ್ಕ ರಸ್ತೆ ಕಡಿತವಾಗುವ ಸಾಧ್ಯತೆ ಎದುರಾಗಿದೆ.

ಇದನ್ನೂ ಓದಿ: Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯಲ್ಲಿ ಜನತೆಯ ಸುರಕ್ಷತೆ ದೃಷ್ಟಿಯಿಂದ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ನೆರೆಯಿಂದ ಸಮಸ್ಯೆ ಎದುರಾದರೆ ಅಂತಹ ಸ್ಥಳದಲ್ಲಿನ ಕುಟುಂಬಗಳನ್ನು ಸ್ಥಳಾಂತರ ಮಾಡಿ ಸ್ಥಳೀಯ ಸರ್ಕಾರಿ ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ತಾಲೂಕು ಆಡಳಿತದಿಂದ ಸಿದ್ದತೆ ನಡೆದಿದೆ ಎಂದು ಉಪ ತಹಸೀಲ್ದಾರ್‌ ಪಿ.ಲಲಿತಾ ತಿಳಿಸಿದ್ದಾರೆ.

Continue Reading

ಕರ್ನಾಟಕ

HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

VISTARANEWS.COM


on

Union Minister HD Kumaraswamy visited the place where the hill collapsed in Uttara Kannada
Koo

ಕಾರವಾರ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ದಾರುಣ ಸಾವನ್ನಪ್ಪಿದ ಸ್ಥಳಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿಗೆ ಬಂದು ರಸ್ತೆ ಮಾರ್ಗವಾಗಿ ಶಿರೂರು ಗುಡ್ಡ ಕುಸಿತ ಸ್ಥಳ ತಲುಪಿದ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳಿಂದ, ಗುಡ್ಡ ಕುಸಿತ, ಪರಿಹಾರ ಕಾರ್ಯ, ನೊಂದವರಿಗೆ ನೆರವು, ಹೆದ್ದಾರಿಯಲ್ಲಿ ಮಣ್ಣು ತೆರವು, ಗಂಗಾವಳಿ ನದಿ ಪ್ರವಾಹ ಹಾಗೂ ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಳೆಯ ನಡುವೆಯೇ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಸಚಿವರು, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಮೃತರ ಕುಟುಂಬಗಳ ಜತೆ ಸರ್ಕಾರ ನಿಲ್ಲಬೇಕು

ರಾಜ್ಯ ಸರ್ಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಾಯಿಸಿದರು.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ, ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.

ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು.

ಈ ಘಟನೆ ಪರಿಹಾರ ಕಾರ್ಯ ವಿಳಂಬವಾಗಿ ಸಾಗುತ್ತಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು.

ರಾಜ್ಯ ಸರ್ಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ, ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ. ಇಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳದ್ದು ಜವಾಬ್ದಾರಿ ಇದೆ ಎಂದು ಉತ್ತರಿಸಿದರು.

ಭಾರೀ ಮಳೆಯಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಕರಾವಳಿ ಮಲೆನಾಡು ಭಾಗದಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಸಚಿವ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

ಈ ಸಂದರ್ಭದಲ್ಲಿ ಕುಮಟಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

Shivamogga News: ಕಳೆದ ಒಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆಯಿಂದಾಗಿ ಹೊಸನಗರ ತಾಲೂಕಿನ ಹುಂಚ ಹೋಬಳಿ ಕೋಡೂರು ಬಳಿಯ ಹುಲಗಾರ-ಮೈತಳ್ಳಿ ಸಂಪರ್ಕ ರಸ್ತೆಯಲ್ಲಿನ ದರೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Landslide on Hulagaru Maithalli link road DC Gurudatta Hegde visit and inspected
Koo

ರಿಪ್ಪನ್‌ಪೇಟೆ: ಕಳೆದ ಒಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆಯಿಂದಾಗಿ ಹೊಸನಗರ ತಾಲೂಕಿನ ಹುಂಚ ಹೋಬಳಿ ಕೋಡೂರು ಬಳಿಯ ಹುಲಗಾರ-ಮೈತಳ್ಳಿ ಸಂಪರ್ಕ ರಸ್ತೆಯಲ್ಲಿನ ದರೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶನಿವಾರ ಭೇಟಿ ನೀಡಿ, ಪರಿಶೀಲನೆ (Shivamogga News) ನಡೆಸಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

35ಕ್ಕೂ ಅಧಿಕ ಮನೆ, ಕೊಟ್ಟಿಗೆಗಳಿಗೆ ಹಾನಿ

ಭಾರೀ ಮಳೆಯಿಂದ ಹೊಸನಗರ ತಾಲೂಕಿನ ವಿವಿಧೆಡೆ 35ಕ್ಕೂ ಅಧಿಕ ಮನೆಗಳಿಗೆ ಮತ್ತು ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದೆ. ಕೆಲವು ಮನೆಗಳು ಹಾಗೂ ಕೊಟ್ಟಿಗೆಗಳ ಗೋಡೆಗಳು ಕುಸಿದು ಬಿದ್ದರೆ, ಕೆಲವೊಂದು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ನಿರಂತರವಾಗಿ ಹಗಲಿರುಳು ಎನ್ನದೆ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಹಳ್ಳ-ಕೊಳ್ಳ ಮತ್ತು ಹೊಳೆಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅನೇಕ ಸಂಪರ್ಕ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಈ ಸಂದರ್ಭದಲ್ಲಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಪಂಚಾಯಿತಿ ಇಒ ನರೇಂದ್ರ, ರೆವಿನ್ಯೂ ಇನ್ಸ್‌ಪೆಕ್ಟರ್ ಆಪ್ರೋಜ್, ಗ್ರಾಮ ಲೆಕ್ಕಾಧಿಕಾರಿ ಜಾಕೀರ್‌ ಹುಸೇನ್, ಪಂಚಾಯಿತಿ ಆಭಿವೃದ್ಧಿ ಆಧಿಕಾರಿಗಳು ಮತ್ತು ಕಂದಾಯ ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಮಳೆ

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

Karnataka Rain : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗಿದೆ. ಹಾಸನದಲ್ಲಿ ಮನೆ ಗೋಡೆ ಕುಸಿದು ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಮೃತಪಟ್ಟಿವೆ.

VISTARANEWS.COM


on

By

karnataka Rain
Koo

ಹಾಸನ: ಹಾಸನದಲ್ಲಿ ಮಳೆಯಾರ್ಭಟ (Karnataka Rain) ಮುಂದುವರಿದಿದ್ದು, ಭಾರಿ ಗಾಳಿ-ಮಳೆಗೆ ವಾಸದ ಮನೆಯು ಕುಸಿದು ಬಿದ್ದಿದೆ. ಪರಿಣಾಮ ಮನೆಯ ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳು ಮೃತಪಟ್ಟಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಸತತ ಮಳೆಗೆ ಶನಿವಾರ ಮುಂಜಾನೆ ಗ್ರಾಮದ ದ್ಯಾವಮ್ಮ ಎಂಬುವವರ ಮನೆ ಏಕಾಏಕಿ ಕುಸಿದು ಬಿದ್ದಿದೆ. ಇತ್ತ ಕುಸಿದ ಗೋಡೆಗಳ ನಡುವೆ ಸಿಲುಕಿದ ಮೂರು ಜಾನುವಾರುಗಳು ಸ್ಥಳದಲ್ಲೇ ಮೃತಪಟ್ಟಿವೆ. ಸದ್ಯ ಮನೆ ಕಳೆದುಕೊಂಡು, ಜೀವನೋಪಾಯಕ್ಕೆ ಇದ್ದ ಜಾನುವಾರುಗಳನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ನೊಂದ ಕುಟುಂಬವು ಒತ್ತಾಯ ಮಾಡಿದೆ.

ಪಶು ಆಸ್ಪತ್ರೆ ಹಿಂಭಾದ ಭೂ ಕುಸಿತ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಪಶು ಆಸ್ಪತ್ರೆ ಹಿಂಭಾಗದಲ್ಲಿ ಭಾರಿ ಭೂ ಕುಸಿತ ಉಂಟಾಗಿದೆ. ಇನ್ನು ಉದ್ಘಾಟನೆಯಾಗದ ಪಶು ಆಸ್ಪತ್ರೆಯ ಗೋಡೆಯ ಮೇಲೆ ಮಣ್ಣು ಬಿದ್ದಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಭೂ ಕುಸಿತದಿಂದ ಆಸ್ಪತ್ರೆ ಕಟ್ಟಡ ಒಳಭಾಗದಲ್ಲಿ ಕೆಸರುಮಯವಾಗಿದೆ. ಇನ್ನಷ್ಟು ಭೂಮಿ ಕುಸಿತವಾಗುವ ಭೀತಿ ಇದೆ. ಇನ್ನೂ ಬಿಎಸ್‌ಎನ್‌ಎಲ್‌ ಟವರ್‌, ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆ ಇದೆ.

ಚಾರ್ಮಾಡಿಯಲ್ಲಿ ವಾಹನ ದಟ್ಟಣೆ

ಗುಡ್ಡ ಕುಸಿತದಿಂದಾಗಿ ಶಿರಾಡಿ, ಸಂಪಾಜೆ ಮಾರ್ಗ ಬಂದ್ ಆದ ಹಿನ್ನೆಲೆಯಲ್ಲಿ ಇತ್ತ ಚಾರ್ಮಾಡಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಹೆದ್ದಾರಿ ಸಾಮರ್ಥ್ಯಕ್ಕೂ ಮೀರಿ ವಾಹನಗಳು ಸಂಚಾರಿಸುತ್ತಿವೆ. ಅಪಾಯಕ್ಕೂ ಮುನ್ನ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಸಂಚಾರ ದುಸ್ತರವಾಗಿದೆ. 2019ರಲ್ಲಿ ಲ್ಯಾಂಡ್ ಸ್ಲೈಡಿಂಗ್ ಆದ ಜಾಗದಲ್ಲಿ ವಾಹನ ಸಂಚಾರ ನಿಧಾನಗತಿಗೆ NHA ಹಾಗೂ ಅರಣ್ಯ ಅಧಿಕಾರಿಗಳಿಗೆ ಚಿಕ್ಕಮಗಳೂರು ಡಿಸಿ ಎಸ್‌ಪಿ ಸೂಚನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಶಾಲಾ ಕಾಂಪೌಂಡ್‌ ಕುಸಿತ

ಶಿವಮೊಗ್ಗದಲ್ಲಿ ಮಳೆಯ ಅಬ್ಬರಕ್ಕೆ ಶಾಲಾ ಕಾಂಪೌಂಡ್ ಕುಸಿದು ಬಿದ್ದಿದೆ. ಶಿವಮೊಗ್ಗ ನಗರದ ಬುದ್ದನಗರದಲ್ಲಿ ಘಟನೆ ನಡೆದಿದೆ. ಇನ್ನೂ ಕಾಂಪೌಂಡ್ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರು ಜಖಂಗೊಂಡಿವೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ದುರಂತವೊಂದು ತಪ್ಪಿದೆ.

ಝರಿ ಫಾಲ್ಸ್‌ಗೆ ನಿಷೇಧ

ಚಿಕ್ಕಮಗಳೂರು ತಾಲೂಕಿನ ದತ್ತಪೀಠ ತಪ್ಪಲಿನಲ್ಲಿರುವ ಝರಿ ಫಾಲ್ಸ್‌ಗೆ ನಿಷೇಧ ಹೇರಲಾಗಿದೆ. ಭಾರಿ ಮಳೆ ಬೆನ್ನಲ್ಲೇ ಝರಿ ಫಾಲ್ಸ್ ರೌದ್ರಾವತಾರ ತಾಳಿದೆ. ಹೀಗಾಗಿ ಝರಿ ಫಾಲ್ಸ್ ಪ್ರವಾಸಕ್ಕೆ ಪ್ರವಾಸಿಗರು, ಸಾರ್ವಜನಿಕರಿಗೆ ನಿಷೇಧಿಸಲಾಗಿದೆ. ಫಾಲ್ಸ್‌ಗೆ ಹೋಗುವ ರಸ್ತೆಯನ್ನು ಪೊಲೀಸರು ಬಂದ್‌ ಮಾಡಿಸಿದ್ದಾರೆ.

ಇದನ್ನೂ ಓದಿ: Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ

ವಿಜಯನಗರದ ನದಿ ಪಾತ್ರದ ಜನರಿಗೆ ತುಂಗಭದ್ರಾ ಆಡಳಿತ ಮಂಡಳಿ ಎಚ್ಚರಿಕೆ ಸಂದೇಶ ರವಾನಿಸಿದೆ. ಯಾವುದೇ ಕ್ಷಣದಲ್ಲೂ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಬಹುದು. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಜತೆಗೆ ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ತೀರಕ್ಕೆ ಯಾರು ತೆರಳದಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಸೂಚನೆ ನೀಡಿದ್ದಾರೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಚನ್ನಾಗಿ ಆಗುತ್ತಿದೆ. ಆಲಮಟ್ಟಿ ಡ್ಯಾಂನಿಂದ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿ ತೀರದ 80 ಗ್ರಾಮಗಳ ಪಟ್ಟಿ ಮಾಡಲಾಗಿದೆ. ಪ್ರವಾಹಕ್ಕೆ ಒಳಗಾಗುವ 80 ಗ್ರಾಮಗಳಿಗೆ ಈಗಾಗಲೇ ನೊಡೇಲ್ ಅಧಿಕಾರಿಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಯಾರು ನದಿ ತೀರಕ್ಕೆ ತೆರಳದೇ ಅಗತ್ಯ ಎಚ್ಚರಿಕೆ ವಹಿಸಬೇಕು. ಪ್ರವಾಹ ಎದುರಾದರೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. 32 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 32 ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಳ್ಳ ದಾಟಲು ಹೋಗಿ ಎತ್ತುಗಳು ಸಾವು

ಶಿವಮೊಗ್ಗದಲ್ಲಿ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಹಳ್ಳ ದಾಟಲು ಹೋಗಿ ಎತ್ತುಗಳು ಮೃತಪಟ್ಟಿವೆ. ರಭಸವಾಗಿ ಹರಿಯುತ್ತಿದ್ದ ಹಳ್ಳ‌ ದಾಟಲು ಹೋಗಿ ಒಂದು ಎತ್ತು, ಒಂದು ಆಕಳು, ಒಂದು ಎಮ್ಮೆ ಮೃತಪಟ್ಟಿವೆ. ಬದುಕಿಗೆ ಆಸರೆಯಾಗಿದ್ದ ಎತ್ತು, ಗೋವು ಕಳೆದುಕೊಂಡ ರೈತ ಕಂಗಲಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಆಗ್ರಹಾರ ಮುಚಡಿಯಲ್ಲಿ ಘಟನೆ ನಡೆದಿದೆ.

ಇತ್ತ ಸಾಗರ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ಸಾಗರದ ಗಾಂಧಿನಗರದ 19ನೇ ವಾರ್ಡ್‌ನಲ್ಲಿ ಮೂರು ಹೆಂಚಿನ ಮನೆಗಳು ಧರೆಗುರುಳಿವೆ. ಹಬೀಬಾ , ಇನಾಯತ್ ಹಾಗೂ ನಿಸಾರ್ ಎಂಬುವರಿಗೆ ಸೇರಿದ ಮೂರು ಮನೆಗಳು ಧ್ವಂಸವಾಗಿವೆ.

ಮನೆ ಕುಸಿಯುತ್ತಿದ್ದಂತೆ ಓಡಿ ಬಂದ ಸದಸ್ಯರು

ನಿರಂತರ ಮಳೆಗೆ ತಡರಾತ್ರಿ ಮನೆಯೊಂದು ಕುಸಿದಿದೆ. ಮನೆ ಕುಸಿಯುತ್ತಿದ್ದಂತೆ ಒಳಗೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ಪಟ್ಟಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಬಸಪ್ಪ ಹಡಪದ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಡಿ ಬಿದ್ದ ಹಿರೇಕೊಳಲೆ ಕೆರೆ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟಕ್ಕೆ ಹಿರೇಕೊಳಲೆ ಐತಿಹಾಸಿಕ ಕೆರೆ ಸಂಪೂರ್ಣ ತುಂಬಿ ಕೊಡಿ ಬಿದ್ದಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಒದಗಿಸುವ ದೊಡ್ಡ ಕೆರೆ ಇದಾಗಿದೆ. ಕೆರೆ ಭರ್ತಿಯಿಂದಾಗಿ ಚಿಕ್ಕಮಗಳೂರು ನಗರದ ನಿವಾಸಿಗಳಲ್ಲಿ ಸಂತಸ ಮೂಡಿದೆ.

ದೇವಸ್ಥಾನದಕ್ಕೆ ಜಲದಿಗ್ಭಂಧನ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಾರಾಯಣಪುರ ಜಲಾಶಯದಿಂದ ಒಳಹರಿವು ಹೆಚ್ಚಿದೆ. ಪರಿಣಾಮ ರಾಯಚೂರಲ್ಲಿ ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದಲ್ಲಿರುವ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ದೇವಸ್ಥಾನದ ಚಾವಣಿ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಹೂವಿನಹೆಡಗಿ ಸೇತುವೆ ಮುಳುಗಡೆಗೂ ಕೆಲವೇ ಕೆಲವು ಅಡಿ ಬಾಕಿ ಇದೆ.

ವರದಾ ನದಿ ಸೇತುವೆ ಮೇಲೆ ಓಡಾಡುವ ಸವಾರರಿಗೆ ಎಚ್ಚರಿಕೆ

ಭಾರಿ ಮಳೆಗೆ ಅಪಾಯಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಉತ್ತರಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಭಾಗದಲ್ಲಿ ತೋಟ, ಗದ್ದೆಗಳು ಮುಳುಗಡೆಯಾಗಿದೆ. ನದಿ ಪಾತ್ರದ ನೂರಾರು ಎಕರೆ ಅಡಿಕೆ, ಬಾಳೆ ತೋಟ, ಅನಾನಸ್, ಶುಂಠಿ ಗದ್ದೆಗಳು ಜಲಾವೃತಗೊಂಡಿದೆ. ಬನವಾಸಿ-ಭಾಶಿ ನಡುವಿನ ಸಂಪರ್ಕ‌ ಸೇತುವೆ ಮುಳುಗಡೆ ಹಂತ ತಲುಪಿದೆ. ಹೀಗಾಗಿ ಬನವಾಸಿ-ಚಂದ್ರಗುತ್ತಿ ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ವರದಾ ನದಿ ಸೇತುವೆ ಮೇಲೆ ಓಡಾಡುವ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇತ್ತ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾಜಿಮನೆ ಗ್ರಾಮದಲ್ಲಿ ಭಾರೀ ಮಳೆಗೆ ಅಡಿಕೆ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದೆ. ಹಳ್ಳದ ನೀರು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು, ಬಾಳೆ ಗಿಡಗಳಿಗೆ ಹಾನಿಯಅಗಿದೆ. ತೋಟಕ್ಕೆ ಹಾಕಲಾಗಿದ್ದ ಗೊಬ್ಬರ ನೀರುಪಾಲು, 2-3 ಲಕ್ಷ ನಷ್ಟವಾಗಿದೆ. ನೀರಿನ ಹರಿವು ಹೆಚ್ಚಳದಿಂದ ಕಿರುಸೇತುವೆ ಮುಳುಗಡೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah
ಕರ್ನಾಟಕ1 min ago

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Viral video
ವೈರಲ್ ನ್ಯೂಸ್5 mins ago

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

Honor Released Honor 200 Pro 5G and Honor 200 5G Smartphones
ಬೆಂಗಳೂರು9 mins ago

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Self Harming
Latest11 mins ago

Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

Health Tips Kannada
ಆರೋಗ್ಯ13 mins ago

Health Tips Kannada: ಮಳೆಗಾಲದಲ್ಲಿ ಹಾಗಲಕಾಯಿ ತಿಂದರೆ ಪ್ರಯೋಜನಗಳು ಎಷ್ಟೊಂದು!

Movie ticket price hike
ಕರ್ನಾಟಕ27 mins ago

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

US Teacher
ವೈರಲ್ ನ್ಯೂಸ್31 mins ago

School Teacher: 14 ವರ್ಷದ ವಿದ್ಯಾರ್ಥಿಗೆ ತನ್ನ ಬೆತ್ತಲೆ ಫೋಟೊ ಕಳುಹಿಸಿದ ಶಿಕ್ಷಕಿ; ಈಗ ಜೈಲಿನ ಅತಿಥಿ

Mohammed Shami
ಕ್ರೀಡೆ39 mins ago

Mohammed Shami : ರೋಹಿತ್​ ಶರ್ಮಾಗೆ ನನ್ನ ಬೌಲಿಂಗ್​ ಎಂದರೆ ಭಯ; ಮೊಹಮ್ಮದ್ ಶಮಿ

Heavy rain in Chandragutti village and other places of Soraba taluk
ಶಿವಮೊಗ್ಗ42 mins ago

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Sexual Abuse
Latest44 mins ago

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ8 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌