Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು - Vistara News

ಮಳೆ

Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

Karnataka Rain News: ರಾಜ್ಯದ ವಿವಿಧ ಭಾಗಳಲ್ಲಿ ಮಳೆ ಮುಂದುವರಿದಿದ್ದು, ಅವಾಂತರವು ಹೆಚ್ಚಾಗಿದೆ. ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ಇನ್ನು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ವಿದ್ಯುತ್ ಇಲ್ಲದ ಪರಿಣಾಮ ಭಾರಿ ಅನಾಹುತವೊಂದು ತಪ್ಪಿದೆ. ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನಲೆಯಲ್ಲಿ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

VISTARANEWS.COM


on

Karnataka Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ (Karnataka Rain News). ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.

ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಈ ಹಿನ್ನಲೆಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ.

ಚಿಕ್ಕಮಗಳೂರಲ್ಲಿ ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಮಾವಿನಗುಣಿ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು ನಾಲ್ಕೈದು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಕಾರ್ಮಿಕರು, ಸಾರ್ವಜನಿಕರು ಬೇರೆಡೆಗೆ ತೆರಳಲು ಸಾಧ್ಯವಾಗದೆ ಪರದಾಡುವಂತಾಗಿದೆ. ಒಂದೇ ರಸ್ತೆಯಲ್ಲಿ ಎರಡು ಕಡೆ ಮರಗಳು ಬಿದ್ದಿದ್ದು, ತೆರವಿಗೆ ಅರಣ್ಯ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾರಿನ ಮೇಲೆ ಬಿದ್ದ ವಿದ್ಯುತ್ ತಂತಿ

ಇನ್ನು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ವಿದ್ಯುತ್ ಇಲ್ಲದ ಪರಿಣಾಮ ಭಾರಿ ಅನಾಹುತವೊಂದು ತಪ್ಪಿದೆ. ತೀವ್ರ ಮಳೆಯಿಂದ ಮುಳ್ಳಯ್ಯನಗಿರಿ ರಸ್ತೆಯ ಐದಾರು ಕಡೆ ವಿದ್ಯುತ್ ಕಂಬಗಳು ಧರೆಗುರುಳಿ ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಹಲವು ಗ್ರಾಮಗಳಲ್ಲಿ ಕತ್ತಲು ಆವರಿಸಿದೆ.

ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಬುಡಸಮೇತ ಬೃಹತ್ ಮರ ರಸ್ತೆಗುರುಳಿದ್ದು, ವಸ್ತಾರೆ-ಆಲ್ದೂರು ರೋಡ್ ಬ್ಲಾಕ್ ಆಗಿದೆ. ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್.ಪುರದ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಕಂಡು ಬಂದಿದೆ. ಸ್ಥಳಿಯರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ತೆರವು ಕಾರ್ಯ ನಡೆಯುತ್ತಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾರ್ಕಂಡೇಯ ನದಿ

ಬೆಳಗಾವಿ: ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಗೋಕಾಕ್ ತಾಲೂಕಿನ ಕುಂದರಗಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂಕಲಗಿ ಗ್ರಾಮದಲ್ಲಿರುವ ಅಡವಿಸಿದ್ದೇಶ್ವರ ಮಠ ಜಲಾವೃತಗೊಂಡಿದೆ. ಮಠಕ್ಕೆ ನೀರು ನುಗ್ಗುವ ಮುನ್ನವೇ ಎರಡು ಅಡಿ ನೀರಲ್ಲೇ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ,‌ ಅಡುಗೆ ಸಿಬ್ಬಂದಿ ಮತ್ತು ಹತ್ತಕ್ಕೂ ಅಧಿಕ ಮಕ್ಕಳು ಸುರಕ್ಷಿತವಾಗಿ ಹೊರಕ್ಕೆ ಬಂದಿದ್ದಾರೆ. ಅಂಕಲಗಿ ಗ್ರಾಮದಲ್ಲಿರುವ ಮೂಲ ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ. ಮಾರ್ಕಂಡೇಯ ನದಿಯಲ್ಲಿ 6 ಸಾವಿರ ಕ್ಯೂಸೆಕ್‌ನಷ್ಟು ಹರಿವು ಇದೆ. ಇದರಿಂದ ಕುಂದರಗಿ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ: 10ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ

ಮನೆ ಮೇಲೆ ಉರುಳಿ ಬಿದ್ದ ಮರ

ಕೊಡಗು: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನಲೆಯಲ್ಲಿ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರುನಲ್ಲಿ ಈ ಘಟನೆ ನಡೆದಿದೆ. ಪ್ರವೀಣ್ ಎಂಬವರಿಗೆ ಸೇರಿದ ವಾಸದ ಮನೆ ಹಾನಿಗೆ. ಊರಿನವರ ಸಹಾಯದಿಂದ ಮರ ತೆರವುಗೊಳಿಸಲಾಗುತ್ತಿದೆ.

ಎರಡು ಮನೆಗಳ ಮೇಲೆ ಮರ ಬಿದ್ದು ಹಾನಿ

ಉಡುಪಿ: ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮರ ಬಿದ್ದು ಎರಡು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ನಡೆದ ಘಟನೆ ನಡೆದಿದೆ. ಸೀತಾ ಪೂಜಾರಿ ಮತ್ತು ಲಚ್ಚ ಪೂಜಾರಿ ಅವರ ಮನೆಗೆ ಹಾನಿಯಾಗಿದೆ. ಒಂದು ಮನೆಯ ಮೇಲೆ ತೆಂಗಿನ ಮರ ಉರುಳಿ ಬಿದ್ದರೆ ಇನ್ನೊಂದು ಮನೆಯ ಮೇಲೆ ಎರಡು ಅಡಿಕೆ ಮರಗಳು ಬಿದ್ದು ಹಾನಿ ಸಂಭವಿಸಿದೆ. ಮನೆಯ ಪಕ್ಕದಲ್ಲಿದ್ದ ಹಲಸಿನ ಮರ ಮತ್ತು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸುಮಾರು ಒಂದು ಲಕ್ಷ ರೂ. ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

VISTARANEWS.COM


on

ಆರೆಂಜ್ ಅಲರ್ಟ್‌

ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಘುದಿಂದ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನದಿಗಳು, ಹಳ್ಳ-ಕೊಳ್ಳಗಳು ತುಂಬುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜೂನ್ 15ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಇಲಾಖೆ ನೀಡುವ ಎಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Also Read: ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

VISTARANEWS.COM


on

ಮುಂದಿನ ಐದು ದಿನ ಭಾರೀ ಮಳೆ

ಮುಂದಿನ ಐದು ದಿನ ಭಾರೀ ಮಳೆ: ಬೆಂಗಳೂರು ಮತ್ತು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

Also Read: ಮುಂದಿನ 7 ದಿನ ಭಾರೀ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಮುಂದಿನ 7 ದಿನ ಭಾರೀ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

VISTARANEWS.COM


on

ಭಾರೀ ಮಳೆ

ಭಾರೀ ಮಳೆ ಬೆಂಗಳೂರು:

ನೈಋತ್ಯ ಮುಂಗಾರು ರಾಜ್ಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 7 ದಿನ ವ್ಯಾಪಕ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, 204.5 ಮಿಲಿಮೀಟರ್‌ಗಿಂತ ಅಧಿಕ ಪ್ರಮಾಣದ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಹೆಚ್ಚಿದ್ದು, ನದಿ, ಹೊಳೆ ಮತ್ತು ಜಲಾಶಯಗಳ ಸಮೀಪ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Also Read: ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

ಭಾರೀ ಮಳೆ
Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest28 minutes ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌