Site icon Vistara News

Karnataka Weather : 4 ದಿನ ಹೀಟ್‌ವೇವ್‌ ಸ್ಟ್ರೋಕ್‌; ಹವಾಮಾನ ತಜ್ಞರ ವಾರ್ನಿಂಗ್‌

Karnataka Weather Forecast

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನಗಳು ತಾಪಮಾನ ಏರಿಕೆ ಜತೆಗೆ ಬಿಸಿಲಿನ ಗಾಳಿ (Heat Waves) ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಈ ಸಮಯದಲ್ಲಿ ಸಾರ್ವಜನಿಕರು ಯಾವ ರೀತಿಯ ಸುರಕ್ಷತೆ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಕರ್ನಾಟಕಕ್ಕೆ ಮುಂದಿನ 7 ದಿನಗಳ ಕಾಲ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ತಜ್ಞರು ನೀಡಿದ್ದಾರೆ. ಏಪ್ರಿಲ್‌ 2 ರಿಂದ 5ನೇ ತಾರೀಖಿನವರೆಗೆ ರಾಜ್ಯದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಲಘು ಮಳೆ ಸೂಚನೆ

ಏಪ್ರಿಲ್‌ 6 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ ಸೇರಿ ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದೆಡೆ ಒಣ ಹವೆ ಹೆಚ್ಚಾಗಿರಲಿದೆ.

ಏಪ್ರಿಲ್‌ 7ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಮಂಡ್ಯ ಮತ್ತು ಮೈಸೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಏಪ್ರಿಲ್‌ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ ಹಾಗೂ ಕೊಪ್ಪಳ, ರಾಯಚೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಾಸನ, ಶಿವಮೊಗ್ಗ, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಲಘು ಮಳೆ ಸಂಭವವಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.

ತಾಪಮಾನದ ಎಚ್ಚರಿಕೆ

ಏಪ್ರಿಲ್‌ 2ರಿಂದ 6ರವರೆಗೆ ಬಿಸಿಗಾಳಿ ಬೀಸಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ.

ಇದನ್ನೂ ಓದಿ: Fraud Case : ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯಿಂದ 4 ಕೋಟಿ ರೂ. ಪೀಕಿದ ವಂಚಕರು

ಹವಾಮಾನ ತಜ್ಞರ ಹೆಲ್ತ್‌ ಟಿಪ್ಸ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version