Karnataka Weather : ಬೆಂಗಳೂರಲ್ಲಿ ಸೂರ್ಯ ಮರೆಯಾದರೂ ಏರಲಿದೆ ತಾಪಮಾನ - Vistara News

ಮಳೆ

Karnataka Weather : ಬೆಂಗಳೂರಲ್ಲಿ ಸೂರ್ಯ ಮರೆಯಾದರೂ ಏರಲಿದೆ ತಾಪಮಾನ

Karnataka Weather : ಬೆಂಗಳೂರು ಸೇರಿ ಹಲವೆಡೆ ತಾಪಮಾನ ಏರಿಕೆ ಆಗುತ್ತಿದ್ದು, ಶುಷ್ಕ ವಾತಾವರಣವೇ (Dry weather) ಮೇಲುಗೈ ಸಾಧಿಸುತ್ತಿದೆ.

VISTARANEWS.COM


on

Belagavi Airport recorded the lowest minimum temperature and Dry weather likely to prevail
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ (Karnataka Weather) ಇದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ರಾಜ್ಯಾದ್ಯಂತ ಬುಧವಾರ ಶುಷ್ಕ ವಾತಾವರಣ ಮುಂದುವರಿದಿತ್ತು. ಅತೀ ಕಡಿಮೆ ಕನಿಷ್ಠ ಉಷ್ಣಾಂಶ 12.6 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಬೆಳಗಾವಿ, ಚಿಕ್ಕಮಗಳೂರು, ಗದಗ, ಹಾಸನ ಹಾಗೂ ಶಿವಮೊಗ್ಗದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ನಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿತ್ತು.

ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿರುವ ವರದಿ ಆಗಿದೆ.

ಇದನ್ನೂ ಓದಿ: Road Accident : ಮರಕ್ಕೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ

ದೇಹ ಉಬ್ಬರಿಸಿ ಉರಿಯೂತವೇ? ಈ ಆಹಾರಗಳೇ ನಿಮಗೆ ಆಪದ್ಭಾಂಧವ!

ಕೆಲವೊಮ್ಮೆ ದೇಹ ಕೊಂಚ ಉಬ್ಬಿದಂತೆ, ನೀರು ತುಂಬಿದಂತೆ ಅನಿಸುವುದುಂಟು. ಹೆಚ್ಚು ಹೊತ್ತು ಒಂದೇ ಜಾಗದಲ್ಲಿ ಕೂತರೆ, ಕಾರಿನಲ್ಲಿ ಗಂಟೆಗಟ್ಟಲೆ ಪ್ರಯಾಣಿಸಿದರೆ ಪಾದದಲ್ಲಿ ನೀರು ತುಂಬಿಕೊಂಡತೆ ಅನಿಸುವುದಿಲ್ಲವೇ? ಹಾಗೆ, ದೇಹದಲ್ಲಿ ಕೆಲವೊಮ್ಮೆ ಅನವಶ್ಯಕ ನೀರು ತುಂಬಿಕೊಳ್ಳುವುದುಂಟು. ಅಗತ್ಯಕ್ಕಿಂತ ಹೆಚ್ಚಿನ ನೀರಿನ ಸೇವನೆ, ಹಾಗೂ ಕೆಲವು ಅಂತಹ ಆಹಾರಗಳಿಂದ ಈ ಸಮಸ್ಯೆ ಉಂಟಾಗಬಹುದು. ಹಾಗಾದರೆ, ಈ ನೀರನ್ನು ಹೊರಗೆ ಕಳುಹಿಸುವುದು ಹೇಗೆ? ದೇಹ ಮತ್ತೆ ಯಥಾಸ್ಥಿತಿಗೆ ಬರುವುದು ಹೇಗೆ ಎಂಬ ಯೋಚನೆಯೇ? ಹಾಗಿದ್ದರೆ ಇಲ್ಲಿವೆ ಕೆಲವು ಆಹಾರಗಳು. ಇವುಗಳ ಸೇವನೆಯಿಂದ ನಿಮ್ಮ ದೇಹದಲ್ಲಿ ನೀರು ತುಂಬಿಕೊಳ್ಳುವಂಥ ಉರಿಯೂತಗಳು (Inflammation) ಹತೋಟಿಗೆ ಬರಬಹುದು.

Turmeric Powder and Fresh Root on Grunge Background

ಅರಿಶಿನ

ಅರಿಶಿನದಲ್ಲಿ ಕರ್‌ಕ್ಯುಮಿನ್‌ ಎಂಬ ವಸ್ತುವಿದ್ದು ಇದರಲ್ಲಿ ಆಂಟಿ ಇನ್‌ಫ್ಲಮೇಟರಿ ಗುಣಗಳನ್ನು ಹೊಂದಿದೆ. ಇದು ಉರಿಯೂತದಂತಹ ಲಕ್ಷಣಗಳನ್ನು ಕಡಿಮೆ ಮಾಡುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಅರಿಶಿನವನ್ನು ನಿತ್ಯವೂ ನಮ್ಮ ಆಹಾರದ ಜೊತೆಗೆ ಮಸಾಲೆಗಳ ಜೊತೆಗೆ ಸೇವಿಸುವುದು ಅತ್ಯಂತ ಒಳ್ಳೆಯದು. ಅಥವಾ ಪ್ರತ್ಯೇಕವಾಗಿ ಅರಿಶಿನವನ್ನು ಸೇವಿಸುವ ಮೂಲಕವೂ ಇದರ ಉಪಯೋಗವನ್ನು ಪಡೆಯಹುದು.

ಶುಂಠಿ

ಶುಂಠಿಯಲ್ಲಿ ಜಿಂಜರಾಲ್‌ ಎಂಬ ವಸ್ತುವಿದ್ದು ಇದರಲ್ಲಿ ಆಂಟಿ ಇನ್‌ಫ್ಲಮೇಟರಿ ಗುಣಗಳಿವೆ. ಅಷ್ಟೇ ಅಲ್ಲ ಇದು ಆಂಟಿ ಆಕ್ಸಿಡೆಂಟ್‌ ಕೂಡಾ. ಹೀಗಾಗಿ ಇದು ದೇಹದಲ್ಲಿ ಎಲ್ಲೇ ಉರಿಯೂತವಿದ್ದರೂ ಅದನ್ನು ಸುಗಮಗೊಳಿಸಿ ದೇಹ ಸಮತೋಲನದಲ್ಲಿರುವಂತೆ ನೋಡಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಶುಂಠಿ ಚಹಾ ಮಾಡಿ ಕುಡಿಯುವ ಮೂಲಕ ಹೆಚ್ಚು ಪ್ರಯೋಜನವನ್ನು ಪಡೆಯಬಹುದು.

Mackerel fish on ice

ಮೀನು

ಸಾಲ್ಮನ್‌, ಮಕರೇಲ್‌, ಸಾರ್ಡಿ ಮೊದಲಾದ ಒಮೆಗಾ ೩ ಫ್ಯಾಟಿ ಆಸಿಡ್‌ಗಳಿಂದ ಸಂಪದ್ಭರಿತವಾದ ಮೀನುಗಳು ದೇಹದ ಉರಿಯೂತಕ್ಕೆ ಬೆಸ್ಟ್‌. ಇವುಗಳಲ್ಲಿ ಆಂಟಿ ಇನ್‌ಫ್ಲಮೇಟರಿ ಗುಣಗಳಿದ್ದು, ಇವು ದೇಹದಲ್ಲಿ ಹೆಚ್ಚಿನ ನೀರಿನ ಪ್ರಮಾಣವಿದ್ದರೆ ಅವನ್ನು ದೇಹದಿಂದ ಹೊರಕ್ಕೆ ಕಳುಹಿಸುವಲ್ಲಿ ನೆರವಾಗುತ್ತದೆ. ಆದರೆ, ಇಂತಹ ಮೀನುಗಳನ್ನು ವಾರಕ್ಕೆ ಹೆಚ್ಚೆಂದರೆ ಎರಡು ಬಾರಿ ತಿನ್ನಬಹುದು.

Selection of leafy green vegetables in wicker basket.

ಹಸಿರು ತರಕಾರಿಗಳು

ಬಸಳೆ, ಪಾಲಕ್‌ ಸೇರಿದಂತೆ ಹಸಿರು ಬಣ್ಣದ ಸೊಪ್ಪು ತರಕಾರಿಗಳು ಮುಖ್ಯವಾಗಿ ಹೆಚ್ಚು ಆಂಟಿ ಆಕ್ಸಿಡೆಂಟ್‌, ಖನಿಜಾಂಶ ಹಾಗೂ ವಿಟಮಿನ್‌ಗಳನ್ನು ಹೊಂದಿರುವುದರಿಂದ ಇದರ ಸೇವನೆ ಅತ್ಯಂತ ಒಳ್ಳೆಯದು. ಇದು ಯಾವುದೇ ಹೆಚ್ಚಿನ ಪ್ರಮಾಣದ ನೀರನ್ನು ದೇಹದಲ್ಲಿ ಇರಗೊಡುವುದಿಲ್ಲ. ದೇಹದಲ್ಲಿನ ಕಶ್ಮಲಗಳನ್ನೂ ಹೊರಹಾಕುತ್ತವೆ.

Olive Oil

ಆಲಿವ್‌ ಆಯಿಲ್

ಎಕ್ಸ್‌ಟ್ರಾ ವರ್ಜಿನ್‌ ಆಲಿವ್‌ ಆಯಿಲ್‌ ಅನ್ನು ನೀವು ಬಳಕೆ ಮಾಡುವ ಅಭ್ಯಾಸ ಇಲ್ಲದಿದ್ದರೆ, ಕೆಲವು ಅಡುಗೆಗಳಿಗಾದರೂ ಬಳಸಿ ನೋಡಿ. ಆಲಿವ್‌ ಆಯಿಲ್‌ನಲ್ಲಿ ಆಂಟಿ ಇನ್‌ಫ್ಲಮೇಟರಿ ಗುಣಗಳಿವೆ. ಸಲಾಡ್‌ಗಳಿಗೆ ಡ್ರೆಸ್ಸಿಂಗ್‌ ಮಾಡಲು ಸೇರಿದಂತೆ, ಹಲವು ಸಂದರ್ಭಗಳಲ್ಲಿ ಇದು ಅತ್ಯುತ್ತಮ ರೀತಿಯಲ್ಲಿ ಬಳಕೆಗೆ ಬರುತ್ತದೆ.

Berries Fruits To Lower Cholesterol

ಬೆರ್ರಿ

ಬ್ಲೂಬೆರ್ರಿ, ಸ್ಟ್ರಾಬೆರ್ರಿ, ಬ್ಲ್ಯಾಕ್‌ಬೆರ್ರಿ ಇತ್ಯಾದಿ ಬೆರ್ರಿ ಜಾತಿಗೆ ಸೇರಿದ ಹಣ್ಣುಗಳೂ ಕೂಡಾ ಸಾಕಷ್ಟು ಆಂಟಿ ಆಕ್ಸಿಡೆಂಟ್‌ಗಳ್ನು ಹೊಂದಿವೆ. ಅಷ್ಟೇ ಅಲ್ಲ, ಇವುಗಳಲ್ಲಿ ಆಂಥೋಸಯನಿನ್‌ಗಳೂ ಇರುವುದರಿಂದ ಇವು ಉರಿಯೂತಕ್ಕೆ ಬಹಳ ಒಳ್ಳೆಯದು.

Tomato Vitamin C Foods

ಟೊಮೆಟೋ

ಟೊಮೆಟೋ ಹಣ್ಣಿನಲ್ಲಿನಲೈಕೋಪೀನ್‌ ಎಂಬ ವಸ್ತು ಅತ್ಯಂತ ಶ್ರೀಮಂತವಾಗಿದೆ. ಇದೊಂದು ಅತ್ಯಂತ ಶಕ್ತಿಯುತವಾದ ಆಂಟಿ ಆಕ್ಸಿಡೆಂಟ್‌ ಆಗಿದ್ದು, ಇದು ಆಂಟಿ ಇನ್‌ಫ್ಲಮೇಟರಿ ಗುಣಗಳಿಂದ ಕೂಡಿದೆ. ಹಾಗಾಗಿ ಆಗಾಗ ಟೊಮೇಟೋ ಸೇವನೆ ಒಳ್ಳೆಯದು. ಸ್ವಲ್ಪವೇ ಸ್ವಲ್ಪ ಆಲಿವ್‌ ಎಣ್ಣೆಯನ್ನು ಟೊಮೇಟೋ ಜೊತೆ ಸೇರಿಸಿ ಸೇವಿಸಿದರೆ, ಲೈಕೋಪೀನ್‌ ಹೀರಿಕೊಳ್ಳಲು ನೆರವಾಗುತ್ತದೆ.

Various Edible Nuts and Seeds

ಬೀಜಗಳು

ಬಾದಾಮಿ, ವಾಲ್ನಟ್‌, ಫ್ಲಾಕ್‌ಸೀಡ್‌ ಮತ್ತಿತರ ಬೀಜಗಳ ಸೇವನೆಯೂ ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು. ಇವುಗಳ ನಿತ್ಯ ಸೇವನೆಯಿಂದ ದೇಹ ಆಂಟಿ ಇನ್‌ಫ್ಲಮೇಟರಿ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಇಂತಹ ಸಂದರ್ಭ ಬರದು. ದೇಹ ಆರೋಗ್ಯವಾಗಿ ಸಮತೋಲನ ಕಾಯ್ದುಕೊಳ್ಳುತ್ತದೆ.

Green Tea Weight Loss Drink

ಗ್ರೀನ್‌ ಟೀ

ಗ್ರೀನ್‌ಟೀಯಲ್ಲಿ ಆಂಟಿ ಆಕ್ಸಿಡೆಂಟ್‌ಗಳೂ, ಆಂಟಿ ಇನ್‌ಫ್ಲಮೇಟರಿ ಗುಣಗಳೂ ಹೆಚ್ಚಿರುವುದರಿಂದ ಉರಿಯೂತದಂತ ಸಮಸ್ಯೆಗಳು ಬರದಂತೆ ತಡೆಯುತ್ತದೆ. ಇದರ ಮಿತವಾದ ನಿಯಮಿತ ಸೇವನೆ ಒಳ್ಳೆಯದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

Rain News: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ಅವಘಡ ನಡೆದಿದೆ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಭಾರಿ ಮಳೆಯಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು.
Koo

ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಯುವತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ನಡೆದಿದೆ. ಮುಧೋಳ ಸುತ್ತಮುತ್ತ ಶುಕ್ರವಾರ ಗುಡುಗು-ಮಿಂಚು ಸಮೇತ ಭಾರಿ ಮಳೆ (Rain News) ಸುರಿದಿದ್ದು, ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಯುವತಿ ಕೊನೆಯುಸಿರೆಳೆದಿದ್ದಾಳೆ.

ಮಲ್ಲಾಪುರ ಗ್ರಾಮದ ಭಾಗ್ಯಶ್ರೀ (16) ಸಿಡಿಲಿಗೆ ಬಲಿಯಾದ ಬಾಲಕಿ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದ್ದು, ಸ್ಥಳಕ್ಕೆ ಲೋಕಾಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಪುರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

Rain News Bhagyashree

ಆಸ್ಪತ್ರೆಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ, ಮೃತ ಭಾಗ್ಯಶ್ರೀ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಶಹಾಪುರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯಿತು. ವರುಣನ ಆಗಮನದಿಂದ ರೈತಾಪಿ ವರ್ಗದ ಜನರ ಮೊಗದಲ್ಲಿ‌ ಮಂದಹಾಸ ಮೂಡಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಿತು.

ಚನ್ನರಾಯಪಟ್ಟಣದಲ್ಲಿ ರಸ್ತೆಗಳು ಜಲಾವೃತ, ತಹಸೀಲ್ದಾರ್ ಕಚೇರಿಗೆ ನುಗ್ಗಿದ ನೀರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಸೇರಿ ವಿವಿಧೆಡೆ ವರುಣ ಆರ್ಭಟಿಸಿದ್ದಾನೆ. ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚನ್ನರಾಯಪಟ್ಟಣದಲ್ಲಿ ಸತತ ಒಂದು ಗಂಟೆ ಸುರಿದ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದವು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ಈ ವೇಳೆ ಕೆಲ ಅಂಗಡಿ ಮಳಿಗೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ಇನ್ನು ಹೊಳೆನರಸೀಪುರ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ ತಹಸೀಲ್ದಾರ್ ಕಚೇರಿಗೆ ಮಳೆ ನೀರು ನುಗ್ಗಿದ್ದರಿಂದ ರೆಕಾರ್ಡ್ ರೂಂನಿಂದ ನೀರು ಹೊರ ಹಾಕಲು ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ | Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ. ಬಿಡುವು ನೀಡದೆ ಸುರಿದ ಮಳೆಯಿಂದ
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು. ಇದರಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ವಾಹನ ಸವಾರರ ಪರದಾಡಿದರು. ಮತ್ತೊಂದೆಡೆ ಮಳೆ ನೀರಿನಿಂದ ಕೃಷಿ ಜಮೀನುಗಳು ಆವೃತವಾಗಿವೆ. ಬೇಗೂರು, ಬೆಳಚಲವಾಡಿ, ತೆರಕಣಾಂಬಿ ಸುತ್ತಮುತ್ತ ಭರ್ಜರಿ ಮಳೆ ಸುರಿದಿದೆ.

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ20 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ34 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ38 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್41 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ55 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ55 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ1 hour ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ1 hour ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ2 hours ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ18 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌