ಬೆಂಗಳೂರು: ರಾಜ್ಯದಲ್ಲಿ ಬುಧವಾರ ಅತೀ ಕಡಿಮೆ ಕನಿಷ್ಠ ಉಷ್ಣಾಂಶವು 11.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಜತೆಗೆ ರಾಜ್ಯಾದ್ಯಂತ ಒಣಹವೆ ಇತ್ತು. ಮುಂದಿನ 24 ಗಂಟೆಯಲ್ಲಿ ಒಣ ಹವೆ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರಲ್ಲಿ ಬೆಳಗಿನ ಜಾವ ಮುಂಜು ಮುಸುಕುವ ಸಾಧ್ಯತೆ ಇದೆ. ನಂತರ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶ 31 ಹಾಗೂ ಕನಿಷ್ಠ ಉಷ್ಣಾಂಶ 18 ಡಿ.ಸೆ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಗಮನಾರ್ಹವಾಗಿ 2ರಿಂದ 4 ಡಿ.ಸೆ ಇಳಿಕೆ ಕಂಡಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 4 ಡಿ.ಸೆ ಏರಿಕೆ ಆಗಿದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3- 5 ಡಿ.ಸೆ ದಾಖಲಾಗಿದೆ. ಒಳನಾಡನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ಡಿ.ಸೆ ಏರಿಕೆ ಆಗಿದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶ ಕಡಿಮೆ ದಾಖಲಾಗಿದೆ.
ಇದನ್ನೂ ಓದಿ: Suspicious Death : ಮಹಿಳೆಯ ಚಿನ್ನಾಭರಣ ದೋಚಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ಕೊಂದ್ರಾ ಹಂತಕರು!
ಮಂಜು ಕವಿದ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು
ಹಾಸನ: ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ (Road Accident) ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಹಾಸನ (Hassan News) ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ನಡೆದಿದೆ.
ಹೋಟೆಲ್ ಒಂದರ ಪೂಜೆಗೆಂದು ಹೊರಟಿದ್ದ ಪ್ರದೀಪ್ (30), ಗುರು (25) ಸ್ಥಳದಲ್ಲೇ ಸಾವಿಗೀಡಾದವರು. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಟಿಂಬರ್ ತುಂಬಿದ್ದ ಲಾರಿ ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿತ್ತು. ಗುರುವಾರ ಮುಂಜಾನೆ ವಾತಾವರಣದಲ್ಲಿ ಸಂಪೂರ್ಣವಾಗಿ ಮಂಜು ಆವರಿಸಿದ್ದ ಪರಿಣಾಮ ರಸ್ತೆಯಲ್ಲಿ ಸಾಗುವವರಿಗೆ ಮುಂದಿನ ವಾಹನಗಳು ಕಾಣದಂತಹ ಪರಿಸ್ಥಿತಿ ಇತ್ತು. ಹೀಗಾಗಿ ಕಾರಿನಲ್ಲಿದ್ದವರಿಗೆ ಲಾರಿ ನಿಂತಿದ್ದುದು ಗೊತ್ತಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿಬಿದ್ದಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ