ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.
ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.
ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.
ಜಿಲ್ಲೆ | ಗರಿಷ್ಠ ತಾಪಮಾನ | ದಿನ ಹಾಗೂ ವರ್ಷ |
ಬೆಂಗಳೂರು | 37.3 ಡಿ.ಸೆ | 29th 1996 |
ಕಲಬುರಗಿ | 43 | 31st 1996 |
ಬಾಗಲಕೋಟೆ | 41.6 | 31st 1996 |
ರಾಯಚೂರು | 44.6 | 27th 1992 |
ಬಳ್ಳಾರಿ | 43 | 30th 1996 |
ಕೊಪ್ಪಳ | 40.2 | 24th 2019 |
ವಿಜಯಪುರ | 41.9 | 29, 30th 1996 |
ಇನ್ನೂ 5 ದಿನಗಳು ಸುಡುವ ಕೆಂಡ
ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.
ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..
ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.
ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?
ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.
ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.
ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!
ಈ ಕೆಲಸವನ್ನು ಮಾಡಬಾರದು
-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು
ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ
ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ