Site icon Vistara News

Karnataka Weather : ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ; ಕರಾವಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ (Rain News) ಸಾಧ್ಯತೆ ಇದೆ.

ನ.3ರಿಂದ 9ರವರೆಗೆ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿ ಇರಲಿದೆ. ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ತೇವಾಂಶ ಇದ್ದು, ವೇಗ ಹೆಚ್ಚಾಗಿರಲಿದೆ. ಹೀಗಾಗಿ ದಕ್ಷಿಣ ಒಳನಾಡು, ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಜತೆಗೆ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Road Accident : ಭೀಕರ ರಸ್ತೆ ಅಪಘಾತ: ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಯಲಹಂಕ, ಎಚ್‌ಎಎಲ್‌, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಮಾನ್ವಿ ಹಾಗೂ ಸಾಲಿಗ್ರಾಮದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 16.6 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಅಕ್ಟೋಬರ್‌ ತಿಂಗಳಲ್ಲಿ ಇಡೀ ರಾಜ್ಯದಲ್ಲಿ ಮಳೆ ಕೊರತೆ ಶೇ. 62 ರಷ್ಟು ಇತ್ತು. ಕರಾವಳಿಯಲ್ಲಿ ಶೇ. 32, ದಕ್ಷಿಣ ಒಳನಾಡಿನಲ್ಲಿ ಶೇ. 53 ಹಾಗೂ ಉತ್ತರ ಒಳನಾಡಲ್ಲಿ ಶೇ. 90ರಷ್ಟು, ಬೆಂಗಳೂರಲ್ಲಿ ಶೇ. 48 ಮಳೆ ಕೊರತೆ ದಾಖಲಾಗಿದೆ. ಆದರೆ ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version