Site icon Vistara News

Karnataka Weather : ಬೆಂಗಳೂರಲ್ಲಿಂದು ಮೋಡ ಕವಿದ ವಾತಾವರಣ; ಉತ್ತರ ಕರ್ನಾಟಕದಲ್ಲಿ ಬಿಸಿಲ ತಾಪ

Weather report

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರವೂ ಒಣ ಹವೆ ಇರುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಲ್ಲಿ ಗರಿಷ್ಠ ತಾಪಮಾನವು 38-40 ಡಿ.ಸೆ ತಲುಪುವ ಸಾಧ್ಯತೆ ಇದೆ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು 35-36 ಡಿ.ಸೆ ವರೆಗೆ ತಲುಪಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲೂ ಬಿಸಿಲ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 2 ಡಿ.ಸೆ ಏರಿಕೆ ಆಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ:Electric bike Taxi service : ರಾಜ್ಯದಲ್ಲಿ ಆ್ಯಪ್‌ ಆಧಾರಿತ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಟಾಪ್‌

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 38 ಡಿ.ಸೆ – 24 ಡಿ.ಸೆ
ಬೆಳಗಾವಿ: 36 ಡಿ.ಸೆ – 17 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version