ಬೆಂಗಳೂರು: ರಾಜ್ಯಾದ್ಯಂತ ಕೆಲ ದಿನಗಳಿಂದ ತಾಪಮಾನ ಏರಿಳಿತ ಉಂಟಾಗುತ್ತಿದ್ದು, ಒಮ್ಮೊಮ್ಮೆ ಚಳಿ ಚಳಿ ವಾತಾವರಣ ಇದ್ದರೆ ಮತ್ತೊಮ್ಮೆ ಕನಿಷ್ಠ ತಾಪಮಾನ ಏರಿಕೆ ಆಗಿ (Karnataka Weather Forecast) ಸೆಕೆಯಾಗುತ್ತಿದೆ. ರಾತ್ರಿ ಕಳೆದು ಬೆಳಗಾಗೋದ್ರೊಳಗೆ ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದ್ದು, ಥಂಡಿ ಗಾಳಿಗೆ ಚಳಿಯಾಗುತ್ತಿದೆ.
ನ.14-15ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನ. 14ರಂದು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ.
ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಸಮುದ್ರ ಮಟ್ಟದಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ.
ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 29-19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Self Harm: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -18ಡಿ.ಸೆ
ಮಂಗಳೂರು: 32 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 30 ಡಿ.ಸೆ – 19 ಡಿ.ಸೆ
ಕಾರವಾರ: 34 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.