ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Karnataka Weather Forecast) ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ (Rain News) ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಮೂಲಕ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 7 ಸೆಂ.ಮೀ ಮಳೆಯಾಗಿದೆ. ಜಗಲಬೆಟ್, ಲೋಂಡಾದಲ್ಲಿ 6, ಕದ್ರಾ 5 ಸೆಂ.ಮೀ ಮಳೆಯಾಗಿದೆ.
ಯಲ್ಲಾಪುರ, ಸಿದ್ದಾಪುರ, ಬೆಳಗಾವಿ ಪಿಟಿಒ, ಕಮ್ಮರಡಿ 3 ಸೆಂ.ಮೀ, ಮಂಕಿ, ಗೇರ್ಸೊಪ್ಪ, ಕಾರವಾರ ವೀಕ್ಷಣಾಲಯ, ಬನವಾಸಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಗೋಕರ್ಣ, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್ , ಬೆಳಗಾವಿ ವಿಮಾನ ನಿಲ್ದಾಣ ವೀಕ್ಷಣಾಲಯ, ಸೋಮವಾರಪೇಟೆ, ಶೃಂಗೇರಿ ಎಚ್‌ಎಂಎಸ್, ಲಿಂಗನಮಕ್ಕಿ ಎಚ್‌ಎಂಎಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.
ಮುಂದುವರಿಯಲಿದೆ ಮಳೆ ಅಬ್ಬರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಲ್ಲಿ ಹಗುರ ಮಳೆ
ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.
ಇದನ್ನೂ ಓದಿ: Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ
ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹಂಚಿನಾಳ, ಯರಗೋಡಿ, ಕಡದರಗಡ್ಡಿ, ಯಳಗುಂದಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ನಡುಗಡ್ಡೆಯಲ್ಲಿ ವಾಸಿಸುವ ಜನರಿಗೆ ಸಂಪೂರ್ಣ ಜಲದಿಗ್ಭಂಧನ ಹಾಕಲಾಗಿದೆ. ರೈತರ ಪಂಪ್ ಸೆಟ್, ಪೈಪ್‌ಗಳು ಮುಳುಗಡೆಯಾಗಿದೆ.
ಇದೇ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡು ಕುರಿಗಾಹಿಗಳು ಪೇಚಿಗೆ ಸಿಲುಕಿದರು. ಮುಳುಗಡೆಯಾದ ಶೀಲಹಳ್ಳಿ ಸೇತುವೆ ಬಳಿಯ ಗುಡ್ಡದಲ್ಲಿ ಕುರಿಗಳನ್ನು ಮೇಯಲುಬಿಟ್ಟು,ಮೂವರು ಕುರಿಗಾಹಿಗಳು ಬೆಟ್ಟ ಇಳಿದಿದ್ದರು. ಈ ವೇಳೆ ಧುಮ್ಮಿಕ್ಕಿ ಹರಿಯಿತ್ತಿರುವ ನದಿ ನೋಡಿ ಬೆಚ್ಚಿ ಬಿದ್ದರು. ಕೆಲಹೊತ್ತು ಹೇಗೆ ಸುರಕ್ಷಿತವಾಗಿ ಸ್ಥಳ ತಲುಪ ಬೇಕೆಂದು ಗೊತ್ತಾಗದೇ ಕಂಗಾಲಾಗಿದ್ದರು. ಸುಮಾರು ಒಂದು ಗಂಟೆ ಬೆಟ್ಟದಲ್ಲೇ ಅತ್ತಿತ್ತ ಓಡಾಡಿ, ಬಳಿಕ ಮತ್ತೊಂದು ದಡದಲ್ಲಿ ವ್ಯಕ್ತಿಯೊಬ್ಬ ಸೂಚಿಸಿದ ದಿಕ್ಕಿನತ್ತ ಹೊರಟು ಹೋದರು.
ಇತ್ತ ತುಂಗಭದ್ರಾ ಡ್ಯಾಂನಿಂದ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ರಾಯಚೂರಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ರಾಯರ ಜಪದ ಕಟ್ಟೆಗೆ ಮುಳುಗಿದೆ. ಜಪದ ಕಟ್ಟೆ ಬಳಿ ತೆರಳದಂತೆ ಆಡಳಿತ ಮಂಡಳಿ ಬ್ಯಾರಿಕೇಡ್ ಅಳವಡಿಸಿ-ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ. ರಾಯಚೂರಿನ ಕೃಷ್ಣಾ ತೀರದ ಮತ್ತೊಂದು ದೇವಸ್ಥಾನ ಜಲಾವೃತಗೊಂಡಿದೆ. ಕೊಪ್ಪರದಲ್ಲಿರೊ ಲಕ್ಷ್ಮೀ ನರಸಿಂಹ ದೇವಸ್ಥಾನ ಮುಳುಗುಡೆಯಾಗಿದೆ. ದೇವಸ್ಥಾನ ಜಲಾವೃತ ಹಿನ್ನೆಲೆ ಅರ್ಚಕರು ನೀರಲ್ಲೇ ನಡೆದುಕೊಂಡು ಹೋಗಿ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ