Site icon Vistara News

Karnataka Weather : ನಾಳೆವರೆಗೂ ರಾಜ್ಯಾದ್ಯಂತ ಒಣಹವೆ; ನಾಡಿದ್ದು ಭರ್ಜರಿ ಮಳೆ

Karnataka Weather Forecast

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಒಣ ಹವೆ (Dry Weather) ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ. ಏ.6 ರಿಂದ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ.

ರಾಜ್ಯದಲ್ಲಿ ಬುಧವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.4 ಡಿ.ಸೆ ದಾಖಲಾಗಿತ್ತು.

ಇಲ್ಲೆಲ್ಲ ತಾಪಮಾನ ಏರಿಕೆ

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲಿ ಏ.04 ರಿಂದ 06 ರವರೆಗೆ ಬಿಸಿ ಗಾಳಿ ಬೀಸಲಿದೆ. ಮುಂದಿನ 3 ದಿನಗಳಲ್ಲಿ ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಬಿಸಿಲ ಧಗೆ ಇರಲಿದೆ. ಜತೆಗೆ ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರಗಿಯಲ್ಲಿ ರಾತ್ರಿ ಸಮಯ ಬೆಚ್ಚನೆಯ ವಾತಾವರಣ ಇರಲಿದೆ.

ಏಪ್ರಿಲ್ 8ರವರೆಗೆ ಗರಿಷ್ಠ ತಾಪಮಾನವು ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕ್ರಮೇಣ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಬೆಳಗ್ಗೆ ಭಾಗಶಃ ಮೋಡವಿರಲಿದ್ದು, ಮಧ್ಯಾಹ್ನ/ಸಂಜೆಯ ಹೊತ್ತಿಗೆ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಇದನ್ನೂ ಓದಿ: Borewell Tragedy: ಕೊಳವೆಬಾವಿ ದುರಂತ; ಬ್ರೇನ್ ಸ್ಕ್ಯಾನಿಂಗ್‌ಗಾಗಿ ಸಾತ್ವಿಕ್‌ ಜಿಲ್ಲಾಸ್ಪತ್ರೆಗೆ ರವಾನೆ; ನಿರ್ಲಕ್ಷ್ಯಕ್ಕೆ ಸಿಎಂ ಬೇಸರ

ರಾಜ್ಯಾದ್ಯಂತ ತಂಪೆರೆಯಲಿರುವ ವರುಣ

ಏಪ್ರಿಲ್‌ 06- ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್‌ 07- ದಕ್ಷಿಣ ಕನ್ನಡ, ಉಡುಪಿ, ಬೀದರ್, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್‌ 08- ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್‌ 09- ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್‌ 10- ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version