Site icon Vistara News

Karnataka Weather : ಸಂಜೆಯಾಗುತ್ತಿದ್ದಂತೆ ಬಹುಪಾಲು ಜಿಲ್ಲೆಗಳಲ್ಲಿ ಶುರುವಾಗುತ್ತೆ ಚಳಿ

Karnataka Weather Forecast

ಬೆಂಗಳೂರು: ರಾಜ್ಯದಲ್ಲಿ ಭಾನುವಾರವೂ ಒಣಹವೆ (Dry weather) ಮುಂದುವರಿಯಲಿದೆ. ಕೆಲವೆಡೆ ಥಂಡಿ ವಾತಾವರಣ (Karnataka Weather Forecast) ನಿರ್ಮಾಣವಾಗಲಿದ್ದು, ಹಗಲಿರುಳು ಚಳಿ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲು ಕಾಡಲಿದೆ.

ರಾಜಧಾನಿ ಬೆಂಗಳೂರಲ್ಲಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಸಂಜೆ ಹೊತ್ತು ಥಂಡಿ ಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಂಗಳೂರು ಸಹಿತ ಈ ಜಿಲ್ಲೆಗಳಲ್ಲಿ ಒಣಹವೆ

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ರಾತ್ರಿ ವೇಳೆ ಥಂಡಿ ಗಾಳಿ ಬೀಸಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿ, ದಕ್ಷಿಣ ಕನ್ನಡದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ.

ಇದನ್ನೂ ಓದಿ: Dress Code : ತುಂಡುಡುಗೆ ತಕರಾರು; ಹಂಪಿ ವಿರೂಪಾಕ್ಷ ದೇಗುಲದಲ್ಲೂ ಇನ್ಮುಂದೆ ಡ್ರೆಸ್‌ಕೋಡ್‌

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 17 ಡಿ.ಸೆ
ಹೊನ್ನಾವರ: 32 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version