ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಸೂರ್ಯನ ಶಾಖಕ್ಕೆ ಬಿಸಿ ವಾತಾವರಣವು ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ.
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಎಚ್ಚರಿಕೆಯನ್ನು ನೀಡಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ತಾಪಮಾನ ಏರಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ.
ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು
ವೇಗವಾಗಿ ಬೀಸಲಿದೆ ಗಾಳಿ
ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ