ಬೆಂಗಳೂರು: ದಿನ ಕಳೆದಂತೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮುಂದುವರಿದಿದ್ದು, ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡಲ್ಲಿ ಕನಿಷ್ಠ ತಾಪಮಾನ ಏರಿಕೆ
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಕಡೆಗಳಲ್ಲಿ ಬಿಸಿಲ ಧಗೆ ಹೆಚ್ಚಿರಲಿದೆ.
ಬೆಂಗಳೂರಲ್ಲಿ ಸೂರ್ಯ ಕಣ್ಮರೆ
ಬೆಂಗಳೂರಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಇದರಿಂದ ಸಂಜೆ ವೇಳೆ ಗಾಳಿ ರಭಸ ಜೋರಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Murder Case : ವೃದ್ಧೆ ದೇಹ ತುಂಡು ತುಂಡಾಗಿ ಕತ್ತರಿಸಿದ್ದು ನಾನೇ! ಹಿಂದಿನ ಕಾರಣ ಬಾಯಿಬಿಡದ ಹಂತಕ
ಕರಾವಳಿ- ದಕ್ಷಿಣ ಒಳನಾಡಲ್ಲಿ ತಾಪಮಾನ ಇಳಿಕೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿ.ಸೆ ಇಳಿಕೆ ಆಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇದೇ ಸ್ಥಿತಿ ಮುಂದುವರಿಯಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ – 19 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 24 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ