ಬೆಂಗಳೂರು: ಶುಷ್ಕ ವಾತಾವರಣದ (Dry Weather) ನಡುವೆಯೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ಶುಕ್ರವಾರದಂದು ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಮತ್ತು ಮಲೆನಾಡಿನ ಹಾಸನದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 23 ಡಿ.ಸೆ ಇರಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿ ಗಾಳಿ (Heat Wave) ಬೀಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Namma Metro : ನಮ್ಮ ಮೆಟ್ರೋ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ; ಜೆ.ಪಿ. ನಗರದಿಂದ ಹೆಬ್ಬಾಳಕ್ಕೆ ನೇರ ಸಂಪರ್ಕ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 35 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 38 ಡಿ.ಸೆ – 27 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ