Karnataka Weather : ಬೆಂಗಳೂರಿಗರಿಗೆ ಇನ್ನೊಂದು ವಾರ ಚಳಿ ಏಟು; ಮುಂದುವರಿಯಲಿದೆ ಶುಷ್ಕ ವಾತಾವರಣ - Vistara News

ಮಳೆ

Karnataka Weather : ಬೆಂಗಳೂರಿಗರಿಗೆ ಇನ್ನೊಂದು ವಾರ ಚಳಿ ಏಟು; ಮುಂದುವರಿಯಲಿದೆ ಶುಷ್ಕ ವಾತಾವರಣ

Karnataka Weather Forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣಹವೆ (Dry Weather) ಮುಂದುವರಿಯಲಿದೆ.

VISTARANEWS.COM


on

Karnataka Weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರವೂ ಒಣಹವೆ (Dry Weather) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಹಗಲಿರುಳು ಥಂಡಿ ವಾತಾವರಣ ಇದ್ದರೆ, ಮಧ್ಯಾಹ್ನದಂದು ಸೂರ್ಯನ ಪ್ರಖರತೆ ಜೋರಾಗಿಲಿದೆ. ಬೆಂಗಳೂರು ಸೇರಿ ಕೆಲವು ಮಲೆನಾಡಿನ ಭಾಗಗಳಲ್ಲಿ ಮಂಜು ಮುಸುಕುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಆಕಾಶವು ನಿರ್ಮಲವಾಗಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರಲಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ಚಳಿಯ ಏಟು ಜೋರಾಗಿರಲಿದೆ.

weight loss

ವಿಜಯಪುರದಲ್ಲಿ ಕಡಿಮೆ ಕನಿಷ್ಠ ಉಷ್ಣಾಂಶ ದಾಖಲು

ರಾಜ್ಯದಲ್ಲಿ ಶನಿವಾರದಂದು ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಿತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಡಿಮೆ ಕನಿಷ್ಠ ಉಷ್ಣಾಂಶವು ವಿಜಯಪುರದಲ್ಲಿ 14.5 ಡಿ.ಸೆ ದಾಖಲಾಗಿತ್ತು. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 3.1 ಡಿ.ಸೆ ನಿಂದ 5.0 ಡಿ.ಸೆ ಹೆಚ್ಚಳಗೊಂಡಿತ್ತು. ಕರಾವಳಿ, ದಕ್ಷಿಣ ಒಳನಾಡಿನ ಬಹುತೆೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ತಾಪಮಾನದಲ್ಲಿ ಏರಿತ ಉಂಟಾಗಿತ್ತು.

ಇದನ್ನೂ ಓದಿ: Benefits Of Ginger: ಶುಂಠಿ ಘಾಟು, ಘಮಕ್ಕೆ ಮಾತ್ರವಲ್ಲ; ಔಷಧಕ್ಕೂ ಬೇಕು!

ಚಳಿಗಾಲದಲ್ಲಿ ಮೊಸರು ಬಳಸಬಹುದೇ?

ಮೊಸರು ಯಾರಿಗಿಷ್ಟವಿಲ್ಲ? ಅದರಲ್ಲೂ ಚಾಕುವಿನಲ್ಲಿ ಕತ್ತರಿಸಿ ಹಾಕುವಷ್ಟು ಗಟ್ಟಿ ಮೊಸರಿದ್ದರೆ, ಜೊತೆಗೆ ಅನ್ನವೋ ರೊಟ್ಟಿಯೊ ನಾಲ್ಕು ತುತ್ತು ಹೆಚ್ಚೇ ಹೋಗುತ್ತದೆ ಒಳಗೆ. ಸಿಹಿ ಮೊಸರು, ಕೆನೆ ಮೊಸರು, ಗಟ್ಟಿ ಮೊಸರು, ಕಡೆದ ಮಜ್ಜಿಗೆ, ಮಸಾಲೆ ಮಜ್ಜಿಗೆ… ಇಂಥವನ್ನು ಇಷ್ಟಪಡುವವರ ಸಂಖ್ಯೆಯನ್ನು ಲೆಕ್ಕ ಇಡಲಾಗದು. ಆದರೆ ಚಳಿಗಾಲದಲ್ಲಿ ಮೊಸರು (Curd in winter) ತಿನ್ನಬಹುದೇ?

curd For Hair Loss

ಈ ಪ್ರಶ್ನೆ ಹಿಂದಿನಿಂದಲೂ ಜನರನ್ನು ಕಾಡಿದ್ದಿದೆ. ಚಳಿಗಾಲದಲ್ಲಿ ಮೊಸರು ತಿಂದರೆ ಶೀತ, ಕೆಮ್ಮು, ಕಫದಂಥ ಸಮಸ್ಯೆಗಳು ಗಂಟಿಕ್ಕಿಕೊಳ್ಳುತ್ತವೆ ಎಂಬುದು ಹಲವರ ವಾದ, ಕೆಲವರ ಅನುಭವ. ಆಯುರ್ವೇದದಲ್ಲೂ ಚಳಿಗಾಲದಲ್ಲಿ, ಅದರಲ್ಲೂ ರಾತ್ರಿಯ ಹೊತ್ತು ಮೊಸರು ಸೇವನೆಯನ್ನು ಒಪ್ಪುವುದಿಲ್ಲ. ಹಾಗಾದರೆ ಚಳಿಗಾಲದಲ್ಲಿ ಮೊಸರು ತಿನ್ನಬೇಕೆ ಅಥವಾ ಬೇಡವೇ? ತಿಂದರೇನಾಗುತ್ತದೆ? ತಿನ್ನದಿದ್ದರೆ ಆಗುವ ತೊಂದರೆಯೇನು?
ಚಳಿಗಾಲದಲ್ಲಿ ಕಾಡುವ ಶೀತ-ಕೆಮ್ಮು-ಕಫದಂಥ ಸಮಸ್ಯೆಗಳು ನಿಮಗಿಲ್ಲ ಎಂದಾದರೆ, ಯಾವುದೇ ಕಾಲದಲ್ಲೂ ಮೊಸರು-ಮಜ್ಜಿಗೆ ಸೇವಿಸುವುದಕ್ಕೆ ತೊಂದರೆಯಿಲ್ಲ ಎನ್ನುತ್ತಾರೆ ಆಹಾರ ತಜ್ಞರು. ಪ್ರೊಬಯಾಟಿಕ್‌ ಅಂಶವನ್ನು ಸಾಂದ್ರವಾಗಿ ಹೊಂದಿರುವ ಮೊಸರು-ಮಜ್ಜಿಗೆ ನಮ್ಮ ಆರೋಗ್ಯಕ್ಕೆ ಬೇಕು. ಜೊತೆಗೆ, ಕ್ಯಾಲ್ಶಿಯಂ, ಫಾಸ್ಫರಸ್‌, ಪೊಟಾಶಿಯಂ, ವಿಟಮಿನ್‌ ಬಿ೧೨ ಮತ್ತಿತರ ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ಇದನ್ನು ಹಲವು ಬಗೆಗಳಲ್ಲಿ ಸೇವಿಸಲು ಸಾಧ್ಯವಿದೆ. ಅಂದರೆ ನಂನಮ್ಮ ಆರೋಗ್ಯಕ್ಕೆ ಸೂಕ್ತ ಎನಿಸುವ ರೀತಿಯಲ್ಲಿ ಇದರ ಸೇವನೆಗೆ ಅವಕಾಶವಿದೆ.

homemade curd in a clay pot Stomach Bloating Relief

ಲಾಭಗಳೇನು?

ಮೊಸರು ಎಂದಾಕ್ಷಣ ಅದನ್ನು ತಣ್ಣಗೇ ತಿನ್ನಬೇಕೆಂಬ ನಿಯಮವಿಲ್ಲ. ಬೆಚ್ಚಗೆ ಮಾಡಿ ಅಥವಾ ಬಿಸಿಯಾದ ಅಡುಗೆಗಳ ಮೂಲಕ ತಿನ್ನುವವರೂ ಇದ್ದಾರೆ. ಎಲ್ಲಕ್ಕಿಂತ ಮುಖ್ಯವಾದ ಲಾಭವೆಂದರೆ ನಮ್ಮ ಜೀರ್ಣಾಂಗಗಳ ಆರೋಗ್ಯ ಕಾಪಿಡುವಂಥ ಪ್ರೊಬಯಾಟಿಕ್‌ ಕಿಣ್ವಗಳು ಇದರಲ್ಲಿ ಹೇರಳವಾಗಿ ಇರುವುದು. ಇದರಿಂದ ಚಳಿಗಾಲದಲ್ಲೂ ಹೊಟ್ಟೆಯುರಿ, ಆಸಿಡಿಟಿ, ಹುಳಿತೇಗು, ಅಜೀರ್ಣ ಮುಂತಾದ ತೊಂದರೆಗಳಿಲ್ಲದಂತೆ ನೆಮ್ಮದಿಯಾಗಿರಬಹುದು.

ಪೋಷಕಸತ್ವಗಳು

ಕ್ಯಾಲ್ಶಿಯಂ, ವಿಟಮಿನ್‌ ಬಿ12, ಪ್ರೊಟೀನ್‌ ಮತ್ತಿತರ ಮಹತ್ವದ ಪೋಷಕಾಂಶಗಳನ್ನು ಮೊಸರು ಹೊಂದಿದೆ. ಇದರಿಂದ ಮೂಳೆಗಳು ಗಟ್ಟಿಯಾಗಿ, ಸ್ನಾಯುಗಳು ಆರೋಗ್ಯಪೂರ್ಣವಾಗಿ, ಜೀರ್ಣಾಂಗಗಳ ಕ್ಷಮತೆ ಹೆಚ್ಚಿ, ದೇಹದ ಒಟ್ಟಾರೆ ಸ್ವಾಸ್ಥ್ಯ ಹೆಚ್ಚುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಸೋಂಕುಗಳು ಹೆಚ್ಚುವ ದಿನವಾದ್ದರಿಂದ, ರೋಗ ನಿರೋಧಕ ಶಕ್ತಿ ಮತ್ತು ದೇಹಾರೋಗ್ಯ ವರ್ಧನೆಗೆ ಇದು ನೆರವಾಗುತ್ತದೆ.

curd

ಉಷ್ಣತೆ ಹೆಚ್ಚುತ್ತದೆ

ಮೊಸರನ್ನು ಫ್ರಿಜ್‌ನಲ್ಲಿಟ್ಟು ತಣ್ಣಗೆ ಮಾಡಿಯೇ ತಿನ್ನಬೇಕೆಂಬ ನಿಯಮವಿಲ್ಲ. ಅದರಲ್ಲೂ ಚಳಿಗಾಲದಲ್ಲಿ ಮೊಸರು ಅಷ್ಟೇನು ಬೇಗ ಹುಳಿಯಾಗುವುದೂ ಇಲ್ಲ. ಹಾಗಾಗಿ ವಾತಾವರಣದ ಉಷ್ಣತೆಯಲ್ಲೇ ಅದನ್ನು ಬಳಸಬಹುದು. ಜೊತೆಗೆ, ಪಾರಂಪರಿಕ ಆರೋಗ್ಯಕ್ರಮದಲ್ಲಿ ಮೊಸರು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ ಎಂದೇ ಹೇಳಲಾಗಿದೆ. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವುದಕ್ಕೆ ಮೊಸರು ನೆರವಾಗಬಹುದು.

ಹಲವು ಬಗೆಯಲ್ಲಿ ಬಳಕೆ

ಮೊಸರು ಭಾರತೀಯ ಅಡುಗೆ ಮನೆಗಳಲ್ಲಿ ಮಾತ್ರವಲ್ಲ, ಖಂಡಾಂತರಗಳ ಪಾಕ ಪದ್ಧತಿಗಳಲ್ಲಿ ಬಳಕೆಯಲ್ಲಿದೆ. ಟಾಪಿಂಗ್‌, ಡಿಪ್‌, ಸ್ಪ್ರೆಡ್‌ ಮುಂತಾದವುಗಳಿಗೆ ಇವು ವ್ಯಾಪಕವಾಗಿ ಬಳಸಲ್ಪಡುತ್ತದೆ. ನಮ್ಮ ದೇಶದಲ್ಲಿ ರಾಜ್ಯ ಯಾವುದೇ ಆದರೂ ಒಂದಿಲ್ಲೊಂದು ಬಗೆಯಲ್ಲಿ ಮೊಸರು-ಮಜ್ಜಿಗೆ ಬಳಸುವ ಅಡುಗೆಗಳು ಇದ್ದೇಇರುತ್ತವೆ.

weight loss

ತೂಕ ಇಳಿಕೆಗೆ ನೆರವು

ಮೊಸರು ತಿಂದರೆ ದಪ್ಪ ಆಗುತ್ತೇವೆಂದು ನಂಬಿದವರು ಬಹಳಷ್ಟು ಮಂದಿಯಿದ್ದಾರೆ. ಆದರೆ ಮಿತವಾಗಿ ಮೊಸರು ತಿನ್ನುವುದರಿಂದ ದೇಹದ ಜೀರ್ಣಕ್ರಿಯೆ ಮತ್ತು ಚಯಾಪಚಯ ಸುಧಾರಿಸುತ್ತದೆ. ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವ ನೀಡಿ, ಕಳ್ಳ ಹಸಿವನ್ನೂ ಇದು ನಿಯಂತ್ರಿಸುತ್ತದೆ. ಹಾಗೂ ಮೊಸರಿನಿಂದ ತೂಕ ಹೆಚ್ಚುವ ಅನುಭವವಾದರೆ ಲೋಫ್ಯಾಟ್‌ ಹಾಲಿನ ಮೊಸರು ಬಳಸಬಹುದು ಅಥವಾ ಕಡೆದು ಬೆಣ್ಣೆ ತೆಗೆದು ಮಜ್ಜಿಗೆಯನ್ನಂತೂ ಧಾರಾಳವಾಗಿ ಬಳಸಬಹುದು.
ಮೊಸರು ಸೇವಿಸಿದಾಗೆಲ್ಲ ಹೊಟ್ಟೆ ಹಾಳಾಗುತ್ತಿದೆ ಎನಿಸಿದರೆ ಮೊಸರಿನ ಅರ್ಜಿಯಿದೆಯೇ ಎಂಬುದನ್ನು ವೈದ್ಯರಲ್ಲಿ ತಪಾಸಣೆ ಮಾಡಿಸಿ. ಕೆಲವರಿಗೆ ಕೆಮ್ಮು-ಕಫ ಬಿಗಿಯುವಂಥ ಸಮಸ್ಯೆಗಳು ಚಳಿಗಾಲದಲ್ಲಿ ಕಾಣಬಹುದು. ಆಗ ರಾತ್ರಿ ಮೊಸರು ವರ್ಜಿಸಬಹುದು. ಅಸ್ತಮಾ ಇದ್ದವರಿಗೂ ಇದು ಸಮಸ್ಯೆ ತರಬಹುದು. ಅಂಥವರು ಬಿಸಿ ಅಡುಗೆಗಳಲ್ಲಿ ಮೊಸರು ಬಳಸಬಹುದೇ ಎಂಬುದನ್ನು ಪ್ರಯತ್ನಿಸಿ ನೋಡಿ. ಉಳಿದಂತೆ, ಮೊಸರು-ಮಜ್ಜಿಗೆಗಳ ಸೇವನೆಯನ್ನು ಚಳಿಗಾಲದಲ್ಲಿ ಮುಂದುವರಿಸುವುದಕ್ಕೆ ಸಮಸ್ಯೆ ಇರಲಾರದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಹೈರಾಣಗಿದ್ದರು.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಗುರುವಾರ ಮಧ್ಯಾಹ್ನದ ಹೊತ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ದಿಢೀರ್‌ ಶುರುವಾದ ಮಳೆಯಿಂದಾಗಿ ಬೈಕ್‌ ಸವಾರರು, ಸಾರ್ವಜನಿಕರು ಪರದಾಡಿದರು. ಮೆಜೆಸ್ಟಿಕ್‌, ಚಿಕ್ಕಪೇಟೆ, ಉಪ್ಪಾರ್‌ಪೇಟೆ, ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್ ಸೇರಿದಂತೆ ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇನ್ನೆರಡು ದಿನಗಳು ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain
Karnataka Rain

ರಾಜಧಾನಿ ಬೆಂಗಳೂರಲ್ಲಿ‌ ಬೆಳಗಿನ ಸಮಯ ಮೋಡ ಕವಿದ ವಾತಾವರಣ ಇತ್ತು, ನಂತರ ಬಿಸಿಲು ಆವರಿಸಿತ್ತು. ನೋಡನೋಡುತ್ತಿದ್ದಂತೆ ಮಧ್ಯಾಹ್ನ ಆಗುತ್ತಿದ್ದಂತೆ ಕಗ್ಗತ್ತಲು ಆವರಿಸಿ, ಮಧ್ಯಾಹ್ನ 2ರ ಸುಮಾರಿಗೆ ಶುರುವಾದ ಮಳೆಯು (Rain News) ಅರ್ಧ ಗಂಟೆಗೂ ಹೆಚ್ಚು ಸಮಯ (Bengaluru Rain) ಅಬ್ಬರಿಸಿದೆ. ಮಳೆ ಹಿನ್ನೆಲೆ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಹೈರಾಣಾದರು.

Karnataka Rain
Karnataka Rain

ವೈಟ್ ಫೀಲ್ಡ್ ಸುತ್ತ ಮುತ್ತ ಭಾರಿ ಮಳೆಯಿಂದಾಗಿ ರಸ್ತೆಯಲ್ಲಿಯೇ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವರ್ತೂರು, ತುಬರಹಳ್ಳಿ ಕಡೆ ನಿಧಾನಗತಿಯ ಸಂಚಾರ ಇದ್ದು, ಭಾರೀ ಮಳೆಗೆ ಸಿಲುಕಿ ವಾಹನ ಸವಾರರು ಪರದಾಡಿದರು.

ತಿಪಟೂರಿನಲ್ಲಿ ಭಾರಿ ಮಳೆ, ಜನ-ಜೀವನ ಅಸ್ತವ್ಯಸ್ತ

ತುಮಕೂರಿನ ತಿಪಟೂರಿನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ತಿಪಟೂರು ನಗರದ ಗಾಂಧಿನಗರ ಹಾಗೂ ಅರಸು ನಗರ ಕಾಲೋನಿಗಳ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗಿತ್ತು. ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ನಗರಸಭೆ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದರು. ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಹೀಗಾಗಿ ಮನೆಗಳಿಗೆ ನೀರು ನುಗ್ಗಿದೆ ಎಂದು ಆಕ್ರೋಶ ಹೊರಹಾಕಿದರು.

ಧರೆಗುರುಳಿದ ಬೃಹತ್ ಮರ

ಬೆಂಗಳೂರಿನ ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ಬೃಹತ್ ಮರವೊಂದು ಧರೆಗುರುಳಿದೆ. ಆಲದಮರ ಬಸ್‌ ನಿಲ್ದಾಣದ ಮೇಲೆಯೇ ಬೃಹತ್ ಮರ ಬಿದ್ದಿದ್ದು,ಸ್ವಲ್ಪದರಲ್ಲೇ ಹಲವರು ಪಾರಾಗಿದ್ದಾರೆ. ನಿತ್ಯ ಬಸ್ ನಿಲ್ದಾಣದಲ್ಲಿ ಹತ್ತಾರು ಜನ ಪ್ರಯಾಣಿಕರು ನಿಲುತ್ತಿದ್ದರು. ಮರ ಬೀಳುವ ಶಬ್ಧ ಕೇಳಿ ಜನರು ಓಡಿಹೋದ ಕಾರಣ ಎಲ್ಲರೂ ಬಜಾವ್ ಆಗಿದ್ದಾರೆ. ಅದೃಷ್ಟವಶಾತ್‌ ಮರ ಬೀಳುವ ಸಮಯದಲ್ಲಿ ಯಾವುದೇ ವಾಹನಗಳು ಸಂಚಾರಿಸುತ್ತಿರಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಜತೆಗೆ ಬಿರುಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಬಿರುಗಾಳಿ ಎಚ್ಚರಿಕೆಯನ್ನು (Rain News) ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಗುರುವಾರದಂದು ಹಗುರದಿಂದ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಲಘುವಾಗಿ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ವಿಜಯನಗರ, ಕೊಪ್ಪಳ, ವಿಜಯಪುರ ಮತ್ತು ಬಾಗಲಕೋಟೆಯಲ್ಲೂ ಭರ್ಜರಿ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾಗಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಭಾರಿ ಮಳೆ, ಬಿರುಗಾಳಿಗೆ ನೆಲಕ್ಕುರುಳಿದ ಭತ್ತ

ಭಾರಿ ಮಳೆ, ಬಿರುಗಾಳಿಗೆ ಭತ್ತ ನೆಲಕ್ಕುರುಳಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ಘಟನೆ ನಡೆದಿದೆ. ಮುಂಗಾರು ಮುಗಿಯುವ ವೇಳೆಗೆ ಸುರಿಯುತ್ತಿರುವ ಮಳೆಗೆ ನೂರಾರು ಎಕರೆ ಭತ್ತ ಬೆಳೆಗೆ ಹಾನಿಯಾಗಿದೆ. ರೈತರಿಗೆ ಸಂಕಷ್ಟ ಎದುರಾಗಿದ್ದು, ಸಮೀಕ್ಷೆ ಮಾಡಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲೂ ಹಲವೆಡೆ ಭಾರಿ ಮಳೆಯಾಗಿದೆ. ಮಳೆಗಾಗಿ ಕಾಯುತ್ತಿದ್ದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಶೇಂಗಾ, ಮೆಕ್ಕೆಜೋಳ ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು. ಮಳೆ ಇಲ್ಲದೆ ಬೆಂಕಿ ರೋಗಕ್ಕೆ ಶೇಂಗಾ ಬೆಳೆ ತುತ್ತಾಗಿದ್ದು, ಈಗ ವರುಣ ಆಗಮನದಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಹಾಗೂ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Karnataka Weather Forecast : ಮಳೆ-ಗಾಳಿ (Karnataka Rain) ಜತೆಗೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕೋಡಿ: ಸಿಡಿಲು ಬಡಿದು ರೈತರೊಬ್ಬರು (Karnataka Rain) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮಪ್ಪ ಭಾಳಪ್ಪ ಮಂಗಳೂರ (56) ಮೃತ ದುರ್ದೈವಿ. ದನ ಕಾಯುತ್ತಿದ್ದ ಭೀಮಪ್ಪ ಭಾಳಪ್ಪ ಮನೆಗೆ ತೆರಳುವಾಗ ಸೋಮವಾರ ಸಂಜೆ ಹೊತ್ತಿಗೆ ಮಳೆ- ಗಾಳಿ ಜತೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ. ಹೊಸೂರು ಗ್ರಾಮದ 1008 ಪಾರ್ಶ್ವನಾಥ ಜೈನ ಮಂದಿರಕ್ಕೆ ಹಾನಿಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಅಬ್ಬರವು ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಎರಡು ದಿನಗಳಿಂದ ಹುಕ್ಕೇರಿ ಬಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹುಕ್ಕೇರಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕಗಳ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದ ರಸ್ತೆ ಮೇಲೆ ನೀರು ಹರಿದಿದೆ. ವರುಣನ ಆರ್ಭಟಕ್ಕೆ ಪ್ರಯಾಣಿಕರ ಪರದಾಡಿದರು. ಇತ್ತ ಮಳೆಯಿಂದ ಹಿಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ- ಮಳೆಗೆ ಹಾರಿ ಹೋದ ಕಾರ್ಖಾನೆಯ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಗಾಳಿ- ಮಳೆಗೆ ಕಾರ್ಖಾನೆಯ ಚಾವಣಿ ಹಾರಿಹೋಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯಲ್ಲಿದ್ದ ಮಷಿನ್ ಹಾಗು ಕಟ್ಟಡಕ್ಕೆ ಹಾನಿಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಚಾವಣಿ ಹಾರಿ ಹೋಗಿದೆ.

ರಾಯಚೂರಿನಲ್ಲೂ ಸಿಡಿಲು ಬಡಿದು ವ್ಯಕ್ತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ದುರಗಪ್ಪ (35) ಮೃತ ದುರ್ದೈವಿ. ರಾಯಚೂರಿನ ಲಿಂಗಸ್ಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರೇಡ್ -2 ತಹಶಿಲ್ದಾರ್ ಶಂಶಾಲಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ಅಬ್ಬರಿಸಿದ್ದ ಮಳೆ

ಕಾಫಿನಾಡ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರ ಜೋರಾಗಿತ್ತು. ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿತ್ತು. ಹಸಿರ ಹುಲ್ಲಿನ ರಾಶಿ ಮೇಲೆ ಆಲಿಕಲ್ಲು ಹರಡಿದಂತೆ ಸುರಿದಿದೆ. ಅಕ್ಟೋಬರ್‌ನಲ್ಲಿ ಆಲಿಕಲ್ಲು ಮಳೆ ಕಂಡು ಮಲೆನಾಡಿಗರು ಕಂಗಲಾಗಿದ್ದು, ಕಾಫಿ ಬೆಳೆಗೆ ಹಾನಿಯಾಗುವ ಆತಂಕ ಇದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಜಲಾವೃತಗೊಂಡಿತ್ತು. ಕಳಸ-ಬಾಳೆಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿತ್ತು. ಹೊರನಾಡು ಮಾರ್ಗದಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿತ್ತು. ಸೇತುವೆ ಮೇಲೆ 2 ಅಡಿ ಎತ್ತರದಲ್ಲಿ ನೀರು ಹರಿಯುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು7 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ8 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು10 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು11 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು12 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು12 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌