Site icon Vistara News

karnataka Weather : ರಾಯಚೂರಲ್ಲಿ ತಾಪಮಾನದ ಬಿಸಿ; ಉಳಿದೆಡೆ ಹೇಗೆ?

Weather

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡಿನಲ್ಲಿ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಬಿಸಿಲ ಧಗೆಯು ಹೆಚ್ಚಿರಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ಡಿ.ಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಆಯ್ದ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಒಂದೆರಡು ಕಡೆಗಳಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ ಇರಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ..

ಬಿರುಬೇಸಿಗೆಗೆ ಜನರು ತತ್ತರ

ರಾಜ್ಯಾದ್ಯಂತ ಸೋಮವಾರದಂದು ಶುಷ್ಕ ವಾತಾವರಣ ಇತ್ತು. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 37.8 ಡಿ.ಸೆ ದಾಖಲಾಗಿದ್ದರೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 17.2 ಡಿ.ಸೆ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ವರದಿ ಆಗಿದೆ.

Weather

ಕೋಲಾರ, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ನಿಂದ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version