ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇದರ ನಡುವೆಯೂ ಮಲೆನಾಡಿನ ಕೆಲವೆಡೆ ಮಳೆಯಾಗುವ (Rain News) ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ಇರಲಿದೆ.
ತಾಪಮಾನದ ಮುನ್ಸೂಚನೆ
ರಾಜ್ಯದ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗಿರುವ ಸಾಧ್ಯತೆ ಇದೆ. ಬಿಸಿಲ ಧಗೆಯೂ ಹೆಚ್ಚಾಗಿರಲಿದೆ.
ಇದನ್ನೂ ಓದಿ: RTE Application 2024 : ಆರ್‌ಟಿಇ ಪ್ರವೇಶಕ್ಕೆ ಆಹ್ವಾನ; ಅರ್ಜಿ ಸಲ್ಲಿಕೆಗೆ ಏ.22 ಕೊನೆ ದಿನ
ತಾಪಮಾನದ ಬಿಸಿ ನಡುವೆಯೂ ಮಳೆಯ ಸಿಂಚನ
ಭಾನುವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಬಾಗಲಕೋಟೆಯ ಕೂಡಲಸಂಗಮದಲ್ಲಿ 2 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶವು 39.9 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿತ್ತು. ಕನಿಷ್ಠ ಉಷ್ಣಾಂಶವು ಚಾಮರಾಜನಗರದಲ್ಲಿ 17 ಡಿ.ಸೆ ದಾಖಲಾಗಿದೆ. ಕೋಲಾರದಲ್ಲಿ ಕನಿಷ್ಠ ಉಷ್ಣಾಂಶ 16.5 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ 40.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ಹಾಸನ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆಲ್ಸಿಯಸ್‌ನಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಇನ್ನೂ ರಾಯಚೂರು, ಬೀದರ್, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಕಲಬುರಗಿ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ನಿಂದ 41.8 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ