ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ (Dry weather) ಇರಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆ ಸೂಚನೆ ಇಲ್ಲ. ಇಲ್ಲೆಲ್ಲ ಶುಷ್ಕ ವಾತಾವರಣ ಇರಲಿದೆ.
ಚಾಮರಾಜನಗರದಲ್ಲಿ ಸಣ್ಣ ಮಳೆ!
ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಪ್ರತ್ಯೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿದಂತೆ ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.
ಮಳೆ ಮುನ್ಸೂಚನೆ ಇಲ್ಲ
ಸಾಮಾನ್ಯವಾಗಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಚಿಕ್ಕನಹಳ್ಳಿಯಲ್ಲಿ ಕಡಿಮೆ ಉಷ್ಣಾಂಶ 16.6 ಡಿ.ಸೆ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.