ಬೆಂಗಳೂರು: ಬಿಸಿ ಬಿಸಿ ವಾತಾವರಣವು ಜನರಿಗೆ ತಲೆಬಿಸಿಯನ್ನು ತಂದೊಡ್ಡಿದೆ. ಮನೆಯಿಂದ ಹೊರಗೆ ಬಂದರೆ ಸೂರ್ಯನ ಶಾಖದ ಹೊಡೆತಕ್ಕೆ ಜನರು ಸುಸ್ತಾಗುತ್ತಿದ್ದಾರೆ. ಈ ನಡುವೆ ರಾಜ್ಯಾದ್ಯಂತ ಶುಷ್ಕ ವಾತಾವರಣದೊಂದಿಗೆ (Dry Weather) ತಾಪಮಾನದ ಎಚ್ಚರಿಕೆಯನ್ನು (Karnataka Weather Forecast) ತಜ್ಞರು ನೀಡಿದ್ದಾರೆ.
ತಾಪಮಾನದ ಮುನ್ಸೂಚನೆ
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿ.ಸೆ ಗಡಿದಾಟಲಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಬಿಸಿಲ ಧಗೆ ಹೆಚ್ಚಾಗಲಿದೆ.
ಇದನ್ನೂ ಓದಿ: Heat stroke: ಹೀಟ್‌ಸ್ಟ್ರೋಕ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ!
ಬೆಂಗಳೂರಲ್ಲಿ ಮರೆಯಾಗುವನೇ ಸೂರ್ಯ
ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು ಎಂದು ಅಂದಾಜಿಸಲಾಗಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 35 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 38 ಡಿ.ಸೆ – 27 ಡಿ.ಸೆ
ಬೆಳಗಾವಿ: 37 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ