ಬೆಂಗಳೂರು: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಇನ್ನೊಂದು ವಾರ ಒಣ ಹವೆ (Dry weather) ಇರಲಿದೆ. ಮಂಗಳವಾರ ಬಹುತೇಕ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗಲಿದೆ. ಇದರಿಂದ ಉರಿ ಉರಿ ಸೆಕೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಜತೆಗೆ ಗರಿಷ್ಠ ಉಷ್ಣಾಂಶ ಕನಿಷ್ಠ ಉಷ್ಣಾಂಶವು ಒಟ್ಟೊಟ್ಟಿಗೆ ಹೆಚ್ಚಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲೂ ತಾಪಮಾನದ ಕೋಪತಾಪ ಮುಂದುವರಿಯಲಿದೆ.
ಇದನ್ನೂ ಓದಿ: Honeybee Attack: ಜೇನುಗೂಡಿಗೆ ಚೆಂಡಿನ ಏಟು; ಜೇನು ದಾಳಿಗೆ ದಿಕ್ಕಾಪಾಲಾದ ಕ್ರಿಕೆಟ್ ಆಟಗಾರರು
ತಾಪಮಾನದ ಎಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ದಟ್ಟ ಮಂಜು
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಬೆಳಗ್ಗೆ ಆಕಾಶ ನಿರ್ಮಲವಾಗಿರಲಿದ್ದು, ಬಿಸಿಲ ತಾಪ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Bandipur National Park: ಕಾಡಾನೆ ಬೆನ್ನಟ್ಟಿದ ಘಟನೆ; ಪ್ರವಾಸಿಗರಿಗೆ ಅಧಿಕಾರಿಯ ಸಲಹೆ ಇದು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 33 ಡಿ.ಸೆ – 17 ಡಿ.ಸೆ
ಹೊನ್ನಾವರ: 33 ಡಿ.ಸೆ- 19 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 32 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ
ಬೆಂಗಳೂರು ನಗರದಲ್ಲಿ ದಟ್ಟವಾಗಿ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಮಂಗಳೂರು, ಚಿತ್ರದುರ್ಗ ಹಾಗೂ ಗದಗ, ಹೊನ್ನಾವರ, ಕಲಬುರಗಿ, ಬೆಳಗಾವಿ, ಕಾರವಾರದಲ್ಲಿ ಸರಾಸರಿ ತಾಪಮಾನಕ್ಕಿಂತ ಹೆಚ್ಚಿರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ