Site icon Vistara News

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಕರಾವಳಿಯಲ್ಲಿ ವಿಪರೀತ ಮಳೆ ಎಚ್ಚರಿಕೆ

Karnataka Weather Forecast

ಬೆಂಗಳೂರು: ವಾರಾಂತ್ಯದಲ್ಲಿ ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುವ ಸಾಧ್ಯತೆ ಇದೆ. ಶನಿವಾರ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಲೆನಾಡು ಮತ್ತು ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಪ್ರತ್ಯೇಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮುಖ್ಯವಾಗಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಸುತ್ತಮುತ್ತ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಮಲೆನಾಡಿನ ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ,ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bear Attack : ವಿಜಯನಗರದ ಪಾರ್ಕ್‌, ಸ್ಟೇಡಿಯಂ‌ನಲ್ಲಿ ಸುತ್ತಾಡಿದ ಕರಡಿ; ದಿಕ್ಕಾಪಾಲಾಗಿ ಓಡಿದ ಜನರು

ಬೆಂಗಳೂರಲ್ಲಿ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಅಬ್ಬರಿಸುವ ವರುಣ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿಯಿಂದ ಯೆಲ್ಲೋ ಅಲರ್ಟ್ ಘೋಷಣೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version