Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ - Vistara News

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Rain News) ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗವು ಬೀಸಲಿದೆ.

VISTARANEWS.COM


on

karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಇಂದು ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್‌ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Weather: ಇಂದು ಹಾಸನ, ಮೈಸೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

VISTARANEWS.COM


on

Karnataka Weather
Koo

ಬೆಂಗಳೂರು: ಆ. 17ರಂದು ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೃಷ್ಣಾ ಜಲಾನಯನ ಪ್ರದೇಶದದಲ್ಲಿ ಆಗಸ್ಟ್ 21 ರವರೆಗೆ ಹಗುರದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 19 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಆ.24ರವರೆಗೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 23 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಆ. 18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಆ.21ರವರೆಗೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

Continue Reading

ಮಳೆ

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

Bangalore Rain: ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯ ಬಹುಕೇಕ ಕಡೆ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ವಿಜಯನಗರ, ಯಶವಂತಪುರ, ವಸಂತ ನಗರ ಸುತ್ತಮುತ್ತ ಧಾರಾಕಾರ ಮಳೆ (Bangalore Rain) ಸುರಿದಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೃಹತ್ ಮರವೊಂದು ಆಟೋ ಮೇಲೆ‌ ಬಿದ್ದಿದೆ. ಇದರಿಂದ ಚಾಲಕ ಸೇರಿ ಮೂವರಿಗೆ ಗಾಯಗಳಾಗಿವೆ.

ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ‌‌ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಮರ ತೆರವುಗೊಳಿಸುತ್ತಿದ್ದಾರೆ.

ಇನ್ನು ಶುಕ್ರವಾರ ರಾತ್ರಿ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೋರಿಯಲ್ಲಿ ಕಸ ತೆಗೆದ ಪುಟಾಣಿ ಮಕ್ಕಳು

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿದಾಗ ಚರಂಡಿ ಅವ್ಯವಸ್ಥೆಯಿಂದ ರಸ್ತೆಗಳು ಜಲಾವೃತವಾಗುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ಪುಟಾಣಿ ಮಕ್ಕಳು ಮಾಡಿದ್ದಾರೆ. ಸತತ ಮಳೆಯಿಂದ ರಸ್ತೆಯಲ್ಲಿ ಮಳೆ ನೀರು ತುಂಬಿದ್ದರಿಂದ ಜಯನಗರ ಈಸ್ಟ್ ಎಂಡ್ ಬಳಿ ಮೋರಿಯಲ್ಲಿದ್ದ ಕಸವನ್ನು ಪುಟಾಣಿ ಮಕ್ಕಳು ತೆಗೆದು ಕ್ಲೀನ್‌ ಮಾಡಿದ್ದಾರೆ.

ಪ್ರತಿ ಬಾರಿ ಮಳೆಯಾದಾಗ ತಮ್ಮ ಮನೆಗಳ ಮುಂಭಾಗ ಇದೇ ರೀತಿ ನೀರು ನಿಲ್ಲುತ್ತದೆ. ಬಿಬಿಎಂಪಿಗೆ ಹಲವು ಭಾರಿ ಫೋನ್ ಮಾಡಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮೋರಿಯಲ್ಲಿದ್ದ ಕಸವನ್ನು ತೆಗೆದು ರಸ್ತೆಯಲ್ಲಿ ಓಡಾಡಲು ಮಕ್ಕಳು ಅನುಕೂಲ ಮಾಡಿಕೊಟ್ಟಿದ್ದಾರೆ.

ಇದನ್ನು ಓದಿ | Lifestyle Tips: ಆರೋಗ್ಯಕರ ಒತ್ತಡರಹಿತ ಜೀವನಕ್ಕೆ ಸರಳ ಸಪ್ತಸೂತ್ರಗಳು!

ಶನಿವಾರ ಹಾಸನ, ಮೈಸೂರು ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ

ಆ.17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ,
ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದೇ ರೀತಿ ಆ.18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಆ.21ರವರೆಗೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

Continue Reading

ಕರ್ನಾಟಕ

Crop Damage: ಮಳೆಯಿಂದ 81,589 ಹೆಕ್ಟೇರ್‌ನಲ್ಲಿ ಬೆಳೆಹಾನಿ; ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ ಎಂದ ಸಿಎಂ

Crop Damage: ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

VISTARANEWS.COM


on

Crop Damage
Koo

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಿತು. ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್‌ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್‌ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಂತರ್ಜಲ ಮಟ್ಟ, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ಸಿಎಂ ಹೇಳಿದರು.

ಕೆರೆಗಳನ್ನು ತುಂಬಿಸಲು ಸೂಚನೆ

ರಾಜ್ಯದ ಜಲಾಶಯಗಳು ಒಟ್ಟು ಶೇ. 89 ರಷ್ಟು ಭರ್ತಿ ಆಗಿವೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ತುಂಬಿಸುವಂತೆ ಹಾಗೂ ಮಳೆ ಮುನ್ಸೂಚನೆ ಆಧರಿಸಿ, ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಗಳಿಂದ ಹೊರಗೆ ಬಿಡುವ ಮೂಲಕ, ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಬೇಕು. ಈ ಕುರಿತು ಸರ್ಕಾರದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಇದನ್ನೂ ಓದಿ | Teachers Transfer: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ

ಸೇತುವೆಗಳ ಫಿಟ್‌ನೆಸ್‌ಗಳ ಬಗ್ಗೆ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲಾ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು. ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಅತಿವೃಷ್ಟಿಯಿಂದ ರಾಜ್ಯದಲ್ಲಿ 67 ಸಾವು

ಈ ಬಾರಿ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಅಂಗನವಾಡಿ , ಶಾಲೆ ಕಟ್ಟಡಗಳ, ಸೇತುವೆಗಳು, ಕರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸೂಚಿಸಲಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿ ಪಡಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಸಲಾಗಿದೆ. 20 ಸಾವಿರ ರೂ. ಅನುದಾನ ಒದಗಿಸಲಾಗಿದೆ. ಸಾವು ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್‌ ಟಾಸ್ಕ್‌ ಫೋರ್ಸ್‌ ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವಂತಹ ಪ್ರಕರಣಗಳಲ್ಲಿ ಸಾವು ನೋವು ತಪ್ಪಿಸಲು ಸಾಧ್ಯವಿದೆ. ಶಿಥಿಲವಾದ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು ಎಂದು ಸಿಎಂ ತಿಳಿಸಿದರು.

ಒಟ್ಟು 1283 ಮನೆಗಳು ಶೇ. 75 ಕ್ಕಿಂತ ಹೆಚ್ಚು ಹಾನಿಗೊಳಗಾಗಿದೆ. ಅದರಲ್ಲಿ 879 ಪ್ರಕರಣಗಳಲ್ಲಿ ತಲಾ 1.2೦ ಲಕ್ಷ ರೂ. ನಂತೆ 10.54 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ದೇವರಾಜ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು. ಈಗಾಗಲೇ 500 ಮನೆ ಮಂಜೂರು ಮಾಡಲಾಗಿದೆ. 2817 ಕುಟುಂಬಗಳಿಗೆ ಬಟ್ಟೆ ಬರೆ ಹಾನಿಗಾಗಿ 2500 ರೂ. ನಂತೆ ಹಾಗೂ 2811 ಕುಟುಂಬಗಳಿಗೆ ಗೃಹೋಪಯೋಗಿ ಸಾಮಗ್ರಿಗಳ ಹಾನಿಗೆ ತಲಾ 2500 ರಂತೆ ಒಟ್ಟು 1.40 ಕೋಟಿ ರೂ. ಪರಿಹಾರ ವಿತರಿಸಲಾಗಿದೆ.

ರಾಜ್ಯದಲ್ಲಿ ಮನೆ ಕುಸಿದು 29 ಸಾವು ಸಂಭವಿಸಿದ್ದು, ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಪ್ರವಾಹ ಇರುವಾಗ ನೀರಿಗೆ ಇಳಿಯಲು ಬಿಡಬಾರದು, ಪೊಲೀಸರ ಸಹಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ್‌, ಕಂದಾಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರಾಜಕಾಲುವೆಗಳ ಒತ್ತುವರಿ ತೆರವಿಗೆ ಸೂಚನೆ

ಬೆಂಗಳೂರು ನಗರದಲ್ಲಿ ಕಂಟ್ರೋಲ್‌ ರೂಂಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಕೋಡಿಗೆ ಗೇಟ್‌ ಅಳವಡಿಸುವ ಮೂಲಕ, ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಸೂಚಿಸಲಾಯಿತು. ಬೆಂಗಳೂರಿನಲ್ಲಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ. ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರುಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದರು.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್‌ಎಸ್‌ಬಿ, ಬಿಎಂಆರ್‌ಸಿಎಲ್‌, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210ಕೋಟಿ ರೂ. ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಉದ್ಭವವಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಡೆಂಗ್ಯೂ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.

ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು. ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳನ್ನು ಲಭ್ಯಗೊಳಿಸಲು ಸೂಚಿಸಲಾಯಿತು. ಒಟ್ಟಾರೆಯಾಗಿ ಎಲ್ಲ ಇಲಾಖೆಗಳೂ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Employee ID card: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಕಡ್ಡಾಯ

ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 4 ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿರುಗುಪ್ಪ, ದೇವದುರ್ಗ, ಔರಾದ್‌, ಬೀದರ್‌, ಕಮಲಾನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ಮೊದಲಾದ ಒಂಬತ್ತು ತಾಲ್ಲೂಕುಗಳಲ್ಲಿ ಈಗ ಕಡಿಮೆ ಮಳೆ ಇದೆ. ಆದರೆ ಈ ತಾಲ್ಲೂಕುಗಳಲ್ಲಿಯೂ ಉತ್ತಮ ಮಳೆಯಾಗುವುದಾಗಿ ಮುನ್ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

    Continue Reading

    ಮಳೆ

    Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

    Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

    VISTARANEWS.COM


    on

    By

    karnataka weather Forecast
    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

    ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

    ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

    ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

    ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

    ಬೆಂಗಳೂರಿನಲ್ಲಿ ಸಾಧಾರಣ ಮಳೆ

    ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಆರೆಂಜ್‌ ಅಲರ್ಟ್‌

    ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Road Accident
    ದೇಶ5 mins ago

    Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

    Sanju Samson
    ಕ್ರೀಡೆ8 mins ago

    Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

    Physical Abuse
    ಪ್ರಮುಖ ಸುದ್ದಿ18 mins ago

    Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

    Champai Soren
    ರಾಜಕೀಯ30 mins ago

    Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

    CM Siddaramaiah
    ಪ್ರಮುಖ ಸುದ್ದಿ47 mins ago

    CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

    Heart attack
    ಬೆಳಗಾವಿ51 mins ago

    Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

    MS Dhoni
    ಕ್ರೀಡೆ57 mins ago

    MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

    Congress Protest
    ಕರ್ನಾಟಕ57 mins ago

    Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

    Physical Abuse
    ದೇಶ1 hour ago

    Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

    Kannada New Movie vaikuntha samaradhane movie
    ಸ್ಯಾಂಡಲ್ ವುಡ್2 hours ago

    Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

    Sharmitha Gowda in bikini
    ಕಿರುತೆರೆ11 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ1 week ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ1 week ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ1 week ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 weeks ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 weeks ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 weeks ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ2 weeks ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌