Site icon Vistara News

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

karnataka weather forecast

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version