Site icon Vistara News

Karnataka Weather: ಬೆಂಗಳೂರಲ್ಲಿ ಮುಂಜಾನೆ ಮಂಜು; ಉತ್ತರ, ದಕ್ಷಿಣ ಒಳನಾಡಲ್ಲಿ ಹೇಗಿದೆ ಮಳೆ ವಾತಾವರಣ?

Karnataka Weather Fog in Bengaluru in the morning

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು (South Inland), ಮಲೆನಾಡು (Malnad Districts) ಹಾಗೂ ಕರಾವಳಿ ಜಿಲ್ಲೆಗಳಲ್ಲಿ (Coastal Karnataka) ಬುಧವಾರ ರಾತ್ರಿ ಹಾಗೂ ಗುರುವಾರ ಸಾಧಾರಣ ಮಳೆಯಾಗಲಿದೆ (rain news) ಮಳೆಯಾಗಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather) ಉಲ್ಲೇಖಿಸಿದೆ.

ಬೆಂಗಳೂರಲ್ಲಿ ಮುಂಜಾನೆ ಮಂಜು!

ಬೆಂಗಳೂರಲ್ಲಿ ಗುರುವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಾಗಾಗಿ ಇಲ್ಲಿ ಮಳೆಯನ್ನು ನಿರೀಕ್ಷೆ ಮಾಡುವಂತೆ ಇಲ್ಲ. ಇನ್ನು ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಹೀಗಾಗಿ ಚಳಿಯ ವಾತಾವರಣ ಉಂಟಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಹೇಗೆ?

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು ಮತ್ತು ಹಾಸನದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: Winter Cape Dress Fashion: ಚಳಿಗಾಲದ ಫ್ಯಾಷನ್‌ಗೆ ಬಂತು ಆಕರ್ಷಕ ಕೇಪ್ ಡ್ರೆಸ್

ಬೆಂಗಳೂರು ಸಹಿತ ಈ ಜಿಲ್ಲೆಗಳಲ್ಲಿ ಒಣಹವೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ರಾತ್ರಿ ವೇಳೆ ಚಳಿಗಾಳಿ ಬೀಸಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಇನ್ನು ಬುಧವಾರದ ವಾತಾವರಣವನ್ನು ಗಮನಿಸಿದರೆ ಕಲಬುರಗಿಯಲ್ಲಿ ಅತಿ ಕಡಿಮೆ ಅಂದರೆ 15 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇದ್ದರೆ, ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 36 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 31 ಡಿ.ಸೆ – 15 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 30 ಡಿ.ಸೆ – 15 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version