ಬೆಂಗಳೂರು: ರಾಜ್ಯದಲ್ಲಿ ಗಳಿಕೆಗೊಂದು ವಾತಾವರಣವು ಜನರನ್ನು (Karnataka weather Forecast) ಹೈರಣಾಗಿಸಿದೆ. ಸದ್ಯ ವಿವಿಧ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಾದರೂ ಮಧ್ಯರಾತ್ರಿಯಂತೆ ಭಾಸವಾಗುತ್ತಿದೆ. ಮುಂಜಾನೆ ದಟ್ಟ ಮಂಜು ಆವರಿಸುತ್ತಿದ್ದು, ಜತೆಗೆ ವಿಪರೀತ ಥಂಡಿ ಗಾಳಿ ಬೀಸುತ್ತಿದೆ. ಬೆಂಗಳೂರು ಸೇರಿದಂತೆ ಬಹುತೇಕ ಭಾಗದ ಜನರು ಮಾರ್ನಿಂಗ್ ವಾಕಿಂಗ್‌ಗೆ ಬ್ರೇಕ್ ಕೊಟ್ಟಿದ್ದಾರೆ.
ರಾಜ್ಯಾದ್ಯಂತ ಶನಿವಾರದಂದು ಒಣ ಹವೆ ಇತ್ತು. ಕಡಿಮೆ ಉಷ್ಣಾಂಶವು 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇನ್ನೂ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರಲ್ಲಿ ವಿಮಾನಗಳ ಹಾರಾಟಕ್ಕೆ ಬ್ರೇಕ್
ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮುಂಜಾನೆ ದಟ್ಟವಾದ ಮಂಜು ಆವರಿಸಿತ್ತು. ಇದರಿಂದಾಗಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಸುಮಾರು 2 ಗಂಟೆಗೂ ಹೆಚ್ಚು ಸಮಯ ಸುಮಾರು 34 ವಿಮಾನಗಳು ಟೆಕ್ ಆಫ್ ಆಗಲಿಲ್ಲ.
ನಿಗಧಿತ ಸಮಯಕ್ಕೆ ಫ್ಲೈಟ್ ಟೇಕ್ ಆಫ್ ಆಗದ ಕಾರಣಕ್ಕೆ ವಿವಿಧ ದೇಶ- ವಿದೇಶಕ್ಕೆ ತೆರಳುವ ಪ್ರಯಾಣಿಕರು ಇದರಿಂದ ತೊಂದರೆಯನ್ನು ಅನುಭವಿಸಬೇಕಾಯಿತು. ಟೆಕ್ ಆಫ್ ಆಗಲು ದಟ್ಟ ಮಂಜು ಆವರಿಸಿದ್ದರಿಂದ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಯಿತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ