Karnataka Weather : ಬೆಂಗಳೂರು ಸೇರಿ ಐದು ಕಡೆ ಮಂಜಿನ ವಾತಾವರಣ; ಉಳಿದೆಡೆ ಹೇಗೆ? - Vistara News

ಮಳೆ

Karnataka Weather : ಬೆಂಗಳೂರು ಸೇರಿ ಐದು ಕಡೆ ಮಂಜಿನ ವಾತಾವರಣ; ಉಳಿದೆಡೆ ಹೇಗೆ?

Karnataka Weather Forecast : ಬೆಂಗಳೂರು ಸೇರಿ ಮಲೆನಾಡು ಭಾಗದಲ್ಲಿ ಮಂಜಿನ ವಾತಾವರಣ ಇದ್ದು, ಕರಾವಳಿ ಹಾಗೂ ಒಳನಾಡಿನಲ್ಲಿ ಒಣಹವೆ (Dry Weather) ಇರಲಿದೆ.

VISTARANEWS.COM


on

Foggy conditions prevail at five places including Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣವು (Dry Weather) ಮುಂದುವರಿಯಲಿದೆ. ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ಉಷ್ಣಾಂಶ ಇಳಿಕೆ ಕಂಡರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಬೆಂಗಳೂರು ಸೇರಿ ಮಲೆನಾಡಿನ ಭಾಗದಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ (Karnataka Weather Forecast) ಇರಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಇದರಿಂದಾಗಿ ಧಗೆ ವಾತಾವರಣ ಇರಲಿದೆ. ಇನ್ನು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮುಂಜಾನೆ ಮಂಜು ಮುಸುಕವ ಸಾಧ್ಯತೆ ಇದೆ. ಉಳಿದಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕೆಲವೊಮ್ಮೆ ಈ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ. ಜತೆಗೆ ಹಗಲಿರುಳು ಚಳಿ ವಾತಾವರಣ ಇರಲಿದೆ.

ಇದನ್ನೂ ಓದಿ: Drone Pratap : ಲೈಸೆನ್ಸ್‌ ಪಡೆಯದೆ ಡ್ರೋನ್‌ ಹಾರಾಟ-ಮಾರಾಟ; ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ದೂರು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 14 ಡಿ.ಸೆ
ಗದಗ: 31 ಡಿ.ಸೆ – 15 ಡಿ.ಸೆ
ಹೊನ್ನಾವರ: 34 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 12 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಬೆಂಗಳೂರು, ಮಂಗಳೂರು, ಚಿತ್ರದುರ್ಗ, ಕಲಬುರಗಿ, ಬೆಳಗಾವಿಯಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಗದಗ, ಹೊನ್ನಾವರ, ಕಾರವಾರದಲ್ಲಿ ಆಕಾಶವು ನಿರ್ಮಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇನ್ನೆರಡು ದಿನ ಬಿಸಿಲು ರಣ ರಣ; ಜನ ಹೈರಾಣ!

Karnataka Weather : ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

VISTARANEWS.COM


on

Heavy sunshine and hot girl
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ (ಗುರುವಾರ ಮತ್ತು ಶುಕ್ರವಾರ) ಒಣ ಹವೆ (Dry Weather) ಇರುವುದಲ್ಲದೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಹೇಳಿದೆ.

ದಕ್ಷಿಣ ಒಳನಾಡಲ್ಲಿ ಬಿಸಿಲು ಹೆಚ್ಚಳ

ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.

ಇಲ್ಲೂ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

ಕರಾವಳಿಯಲ್ಲೂ ಸೆಕೆ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆಯು ತೀವ್ರತೆ ಪಡೆದುಕೊಂಡಿದೆ. ಸಮುದ್ರ ತೀರದಲ್ಲಿದ್ದರೂ ಜನರಿಗೆ ತಂಪು ಸಿಗುತ್ತಿಲ್ಲ. ಬಿಸಿಲು ಮೈಸುಡುತ್ತಿದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ವೇಗವಾಗಿ ಬೀಸಲಿದೆ ಗಾಳಿ

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರು ಈಗ ಸೆಕೆಯ ನಾಡಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಸೇರಿ ಎಲ್ಲೆಲ್ಲೂ ಬಿಸಿಲೋ ಬಿಸಿಲು

Karnataka Weather Forecast : ರಾಜ್ಯಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಬಿಸಿ ವಾತಾವರಣಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.

VISTARANEWS.COM


on

By

Dry weather continues across the state
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಸೂರ್ಯನ ಶಾಖಕ್ಕೆ ಬಿಸಿ ವಾತಾವರಣವು ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಎಚ್ಚರಿಕೆಯನ್ನು ನೀಡಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ತಾಪಮಾನ ಏರಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ವೇಗವಾಗಿ ಬೀಸಲಿದೆ ಗಾಳಿ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಒಟ್ಟೊಟ್ಟಿಗೆ ಏರಿಕೆ

Karnataka Weather Forecast : ಬೆಂಗಳೂರಲ್ಲಿ ಪ್ರಬಲ ಗಾಳಿ ಬೀಸಲಿದ್ದರೆ, ಕರಾವಳಿ ಹಾಗು ಒಳನಾಡಲ್ಲಿ ಕನಿಷ್ಠ ತಾಪಮಾನ ಏರಿಕೆ (Dry weather) ಆಗಲಿದೆ.

VISTARANEWS.COM


on

By

Simultaneous rise in maximum and minimum temperatures
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮುಂಜಾನೆ ಹಾಗೂ ಸಂಜೆ ಸಮಯ ತಂಪು ಗಾಳಿ ಬೀಸಿದ್ದರೆ, ಮಧ್ಯಾಹ್ನದಂದು ಉರಿ ಬಿಸಿಲು ಸುಡಲಿದೆ.

ತಾಪಮಾನದ ಮುನ್ಸೂಚನೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ. ಕರಾವಳಿಯ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ವಿಜಯಪುರದಲ್ಲಿ ಇಳಿಕೆಗೊಂಡ ಕನಿಷ್ಠ ತಾಪಮಾನ

ರಾಜ್ಯಾದ್ಯಂತ ಸೋಮವಾರ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಕನಿಷ್ಠ ಉಷ್ಣಾಂಶ 13.9 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ವಿಜಯಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂಜಾನೆ ಬೆಂಗಳೂರು ಕೂಲ್‌; ಕರಾವಳಿ ಸಿಕ್ಕಾಪಟ್ಟೆ ಹಾಟ್‌!

Dry weather : ರಾಜ್ಯದಲ್ಲಿ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರಲ್ಲಿ ಗಾಳಿ ಜೋರಾಗಿ (Karnataka Weather Forecast) ಬೀಸಲಿದೆ.

VISTARANEWS.COM


on

By

Minimum temperature rise in coastal areas
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ಒಣಹವೆ (Dry Weather) ಇರಲಿದೆ. ಕೆಲವೆಡೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನ (Karnataka Weather Forecast) ಹೆಚ್ಚಳವಾಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಉತ್ತರ ಒಳನಾಡಿನ ಭಾಗಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿ.ಸೆ ನಿಂದ 5.0 ಡಿ.ಸೆ ಕನಿಷ್ಠ ತಾಪಮಾನ ಹೆಚ್ಚಳವಾಗಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3 ಡಿ.ಸೆ ಹೆಚ್ಚು ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕನಿಷ್ಠ ತಾಪಮಾನವು ಹೆಚ್ಚಳವಾಗಲಿದೆ.

ಇದನ್ನೂ ಓದಿ: Fraud Case : ಲೀಸ್‌ಗೆ ಫ್ಲಾಟ್‌ ಪಡೆಯುವ ಮುನ್ನ ಎಚ್ಚರ; ರಾತ್ರೋರಾತ್ರಿ ಬೀದಿಗೆ ಬೀಳ್ತಿರಿ!

ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿ ಇರಲಿದೆ. ಹಾವೇರಿ ಮತ್ತು ರಾಯಚೂರಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ನಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಲಿದೆ.

ಬೆಂಗಳೂರಲ್ಲಿ ಬೀಸಲಿದೆ ಗಾಳಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 35 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 21 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ

ಬೆಂಗಳೂರು ಹಾಗೂ ಮಂಗಳೂರಲ್ಲಿ ಮುಂಜಾನೆ ಸಮಯ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ. ಉಳಿದಂತೆ ಚಿತ್ರದುರ್ಗ, ಗದಗ, ಹೊನ್ನಾವರ ಹಾಗೂ ಕಲಬುರಗಿ, ಬೆಳಗಾವಿ, ಕಾರವಾರದಲ್ಲಿ ಆಕಾಶವು ನಿರ್ಮಲವಾಗಿ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading
Advertisement
Gavyamrita Book
ಉತ್ತರ ಕನ್ನಡ1 min ago

ಗವ್ಯಾಮೃತ ಪುಸ್ತಕ ಲೋಕಾರ್ಪಣೆ; ಗೋವಿನ ಕುರಿತ ಸುವಿಚಾರಗಳನ್ನು ಸಮಾಜಕ್ಕೆ ತಲುಪಿಸಲು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಕರೆ

Indus App Store launched by Walmart-owned PhonePe
ದೇಶ18 mins ago

PhonePay: ಫೋನ್‌ಪೇ ಸ್ವದೇಶಿ ಆ್ಯಪ್‌ಸ್ಟೋರ್ ‘ಇಂಡಸ್’ ಲಾಂಚ್; ಗೂಗಲ್‌ ಪ್ಲೇ ಸ್ಟೋರ್‌ಗೆ ಪಂಚ್!

shishya sweekara Mahotsav in shri swarnavalli maha samsthana matha dharmasabhe
ಉತ್ತರ ಕನ್ನಡ29 mins ago

Sirsi News: ಅಪಕಾರ ಮಾಡಿದವರಿಗೂ ಉಪಕಾರ ಬಯಸುವ ಸದ್ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಿ: ಶ್ರೀವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ

Gurpatwant Singh Pannun
ಕ್ರೀಡೆ35 mins ago

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರನಿಂದ ಬೆದರಿಕೆ; ಸ್ಟೇಡಿಯಂಗೆ ಬಿಗಿ ಭದ್ರತೆ!

Hello-minister-N-chaluvarayaswamy-in-vistara-news-2
ಕರ್ನಾಟಕ49 mins ago

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

bike accident
ಪ್ರಮುಖ ಸುದ್ದಿ2 hours ago

Road Accident: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ; ಬಸ್-ಬೈಕ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

vistara top ten
ಟಾಪ್ 10 ನ್ಯೂಸ್2 hours ago

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

Vamshi Krishna hits six sixes
ಕ್ರೀಡೆ2 hours ago

C K Nayudu Trophy: ಒಂದೇ ಓವರ್​ನಲ್ಲಿ 6 ಸಿಕ್ಸರ್ ಬಾರಿಸಿದ ವಂಶಿ ಕೃಷ್ಣ; ವಿಡಿಯೊ ವೈರಲ್​

IT department has withdrawn 65 crore rupees from the Congress party accounts
ದೇಶ2 hours ago

Congress Party: ಕಾಂಗ್ರೆಸ್‌ ಖಾತೆಗಳಿಂದ 65 ಕೋಟಿ ರೂ. ವಿತ್‌ಡ್ರಾ ಮಾಡಿದ ಐಟಿ ಇಲಾಖೆ!

Minister Madhu Bangarappa inauguration by Beneficiaries convention of guarantee schemes in Soraba
ಶಿವಮೊಗ್ಗ2 hours ago

Shivamogga News: ಸೊರಬದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಚಾಲನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 21 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ2 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ3 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ4 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ4 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ5 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

read your daily horoscope predictions for february 16 2024
ಭವಿಷ್ಯ6 days ago

Dina Bhavishya : ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ ಇಂದು ಈ ರಾಶಿಯವರಿಗೆ ಡಬಲ್‌ ಲಾಭ

Siddaramaiah
ರಾಜಕೀಯ6 days ago

Karnataka Budget Session 2024: ಬಿಜೆಪಿಯವರು ಗೂಂಡಾಗಳು ಎಂದ ಸಿಎಂ; ತೊಡೆ ತಟ್ಟಿದ್ದು ನಾವಾ – ನೀವಾ ಎಂದ ವಿಪಕ್ಷ!

ಟ್ರೆಂಡಿಂಗ್‌