ಬೆಂಗಳೂರು: ಹಿಂಗಾರು ನಿಧಾನವಾಗಿ (Karnataka Weather) ಚುರುಕುಗೊಳ್ಳುತ್ತಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದ್ದರೆ, ಒಳನಾಡಿನ ಒಂದೆರಡು ಕಡೆಗಳಲ್ಲಿ ಜಿಟಿಜಿಟಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ರಾಮನಗರ, ಮಂಡ್ಯ ಹಲವೆಡೆ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಂಭವವಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ದಕ್ಷಿಣ ಒಳನಾಡಿನ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಮೈಸೂರು ಮತ್ತು ಚಾಮರಾಜನಗರ, ಚಿತ್ರದುರ್ಗದಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಚದುರಿದಂತೆ ಮಳೆ ಬರಬಹುದು. ಉತ್ತರ ಒಳನಾಡಿನ ಹಾವೇರಿಯಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ವಿಜಯನಗರ ಮತ್ತು ಗದಗದಲ್ಲಿ ಸಣ್ಣ ಮಳೆ ಸುರಿಯಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.
ಇದನ್ನೂ ಓದಿ: Attibele Fire Accident: ಅತ್ತಿಬೆಲೆ ದುರಂತ; ಪಟಾಕಿ ಸಂಗ್ರಹಕ್ಕೆ ಲೈಸೆನ್ಸೇ ಇರಲಿಲ್ಲ; ಸಾವಿನ ಸಂಖ್ಯೆ 14
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 22 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 25 ಡಿ.ಸೆ
ಕಲಬುರಗಿ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ