ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ ಬಲಿಷ್ಠವಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain news) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka weather forecast) ನೀಡಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯೊಂದಿಗೆ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಈ ಜಿಲ್ಲೆಗಳಲ್ಲಿ ಮಳೆ ಗ್ಯಾರಂಟಿ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದ್ದು, ಸೋಮವಾರವೂ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಗಳಿಗೆಗೊಂದು ವಾತಾವರಣ
ಬೆಂಗಳೂರು ನಗರದಲ್ಲಿ ಬೆಳಗ್ಗೆ ಬಿಸಿಲು ಇದ್ದರೆ, ಮಧ್ಯಾಹ್ನದ ನಂತರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಆದರೆ ಮಳೆ ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Crime News: ವಿದೇಶಿ ಮೂಲದ ಯುವತಿಯರನ್ನು ಬಳಸಿಕೊಂಡು ಡ್ರಗ್ಸ್, ವೇಶ್ಯಾವಾಟಿಕೆ ಪತ್ತೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ 45-55 ಕಿ.ಮೀ ನಿಂದ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ