Site icon Vistara News

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

karnataka weather Forecast

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version