ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಒಣಹವೆ (Dry Weather) ಇತ್ತು. ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 41.2 ಡಿ.ಸೆ ದಾಖಲಾಗಿದೆ. ರಾಜ್ಯಾದ್ಯಂತ ಏ.1ರಿಂದ 5ರವರೆಗೆ ಶುಷ್ಕ ವಾತಾವರಣ ಇರಲಿದೆ. ನಂತರ ಮಳೆ ಆರ್ಭಟ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್ 6-7ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.
ಏಪ್ರಿಲ್ 6ರಂದು ಕರಾವಳಿಯ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ್, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ರಾಜ್ಯದ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.
ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಜೋರಾಗಿರಲಿದೆ. ಇನ್ನೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಇದನ್ನೂ ಓದಿ: Begging Case : ಕುಡುಕ ಗಂಡನ ಮಾತು ಕೇಳಿ ಮಗು ಜತೆಗೆ ಭಿಕ್ಷಾಟನೆಗಿಳಿದ ತಾಯಿ
ತಾಪಮಾನ ಮುನ್ಸೂಚನೆ
ಮುಂದಿನ 2 ದಿನಗಳಲ್ಲಿ ಬೆಳಗಾವಿ, ಬೀದರ್,ಗದಗ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿ.ಸೆ ನಷ್ಟು ಏರಿಕೆ ಆಗಲಿದೆ. ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮತ್ತು ಮೈಸೂರಿನಲ್ಲಿ 2-3 ಡಿ.ಸೆ ಗರಿಷ್ಠ ತಾಪಮಾನ ಹೆಚ್ಚಳವಾಗಲಿದೆ.
ಶಾಖದ ಅಲೆಗಳ ಎಚ್ಚರಿಕೆ
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರದಲ್ಲಿ ಏಪ್ರಿಲ್ 5ರವರೆಗೆ ಶಾಖದ ಅಲೆಯ ಪರಿಸ್ಥಿತಿ ಇರಲಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ನಗರದಲ್ಲಿ ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಹಾಗೂ ಸಂಜೆ ಹೊತ್ತಿಗೆ ಆಕಾಶ ನಿರ್ಮಲವಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ