Karnataka Weather : ಮಳೆ ಎಚ್ಚರಿಕೆ ನಡುವೆಯೂ ಈ ಜಿಲ್ಲೆಗಳಲ್ಲಿ ಬಿಸಿಲ ಹೊಡೆತ - Vistara News

ಮಳೆ

Karnataka Weather : ಮಳೆ ಎಚ್ಚರಿಕೆ ನಡುವೆಯೂ ಈ ಜಿಲ್ಲೆಗಳಲ್ಲಿ ಬಿಸಿಲ ಹೊಡೆತ

Rain news: ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ (Heat Wave) ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾತ್ರಿ ಸಮಯ ಬೆಚ್ಚನೆಯ ವಾತಾವರಣ ಇರಲಿದೆ.

VISTARANEWS.COM


on

Karnataka Weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರಿನಲ್ಲಿ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಳ್ಳಾರಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಹಾವೇರಿ, ಕೊಪ್ಪಳ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವೆ ಇರಲಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಕನ್ನಡದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Summer Travel Fashion Tips: ಬೇಸಿಗೆ ಪ್ರವಾಸದ ವೇಳೆ ಯುವತಿಯರು ಗಮನಿಸಲೇಬೇಕಾದ 5 ಸಂಗತಿಗಳು

ತಾಪಮಾನ ಏರಿಕೆ

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲ ಕಡೆಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಸಮಯ ಬೆಚ್ಚನೆಯ ವಾತಾವರಣವು ಇರಲಿದೆ.

ಹೀಟ್‌ ವೇವ್‌ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಹಾಗೂ ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಹೀಟ್‌ ವೇವ್‌ ಎಚ್ಚರಿಕೆ ನೀಡಲಾಗಿದೆ.

ಯೆಲ್ಲೋ ಅಲರ್ಟ್‌

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Karnataka Weather: ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka weather
Koo

ಬೆಂಗಳೂರು: ರಾಜ್ಯದಲ್ಲಿ ಏ.30ರಂದು ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Karnataka Weather: ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಇನ್ನು ನಾಲ್ಕೈದು ದಿನ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ತಾಪಮಾನ (Karnataka Weather) ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ ಉತ್ತರ ಕರ್ನಾಟಕ ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗುತ್ತಿದೆ. ರಾಯಚೂರಿನಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 43 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ. ಇನ್ನು ಮಂಗಳವಾರವೂ ಕೂಡ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆ ದಾಖಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Continue Reading
Advertisement
Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ4 mins ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Divorce Celebration
ವೈರಲ್ ನ್ಯೂಸ್10 mins ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ12 mins ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

IPL 2024
ಪ್ರಮುಖ ಸುದ್ದಿ18 mins ago

IPL 2024 : ಬುದ್ಧಿ ಹೇಳಿದರೂ ಕೇಳದ ಕೆಕೆಆರ್​ ಬೌಲರ್​ ರಾಣಾಗೆ ಮತ್ತೆ ದಂಡ ; ಒಂದು ಪಂದ್ಯದಿಂದ ಸಸ್ಪೆಂಡ್​​

Minister Lakshmi hebbalkar spoke in Prajadhwani 02 Lok Sabha election campaign programme at Gokak
ಕರ್ನಾಟಕ22 mins ago

Lok Sabha Election: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Ballari Lok Sabha constituency Congress candidate eTukaram election campaign in Hosapete
ಬಳ್ಳಾರಿ25 mins ago

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Hassan Pen Drive case
ಪ್ರಮುಖ ಸುದ್ದಿ48 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ51 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್1 hour ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ1 hour ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌