Site icon Vistara News

Karnataka Weather : ಕರ್ನಾಟಕದಲ್ಲಿ ಹೆಚ್ಚುತ್ತಿದೆ ಹೀಟ್‌ ವೇವ್‌; ಈ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌

Karnataka Weather Forecast Heat wave

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇದರ ನಡುವೆಯೂ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಪ್ರಮುಖವಾಗಿ ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇತ್ತ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Cholera Outbreak: ರಾಜ್ಯದಲ್ಲಿ ಹರಡುತ್ತಿದೆ ಕಾಲರಾ, ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆ; ಎಚ್ಚರಿಕೆಯೇ ಮದ್ದು

ದಕ್ಷಿಣ ಒಳನಾಡಿನ ತುಮಕೂರು ಮತ್ತು ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಇನ್ನು ಕಾದ ಕೆಂಡವಾಗಿರುವ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ ಮತ್ತು ವಿಜಯಪುರದ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು, ಕೊಡಗಿನ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಸಾಧಾರಣ ಮಳೆ ಸುರಿಯಬಹುದು.

ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೀಸುತ್ತೆ ಬಿಸಿ ಗಾಳಿ

ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳ ಕಾಲ ಕೊಪ್ಪಳ, ರಾಯಚೂರು ಮತ್ತು ಕಲಬುರಗಿಯಲ್ಲಿ ಬೆಚ್ಚಗಿನ ರಾತ್ರಿ ಇರಲಿವೆ. ಇನ್ನು ಕಾರವಾರದಲ್ಲಿ ಶಾಖ ತರಂಗ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 4 ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕೆಲವೆಡೆ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಇರಲಿದೆ.

ತಾಪಮಾನ ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version