ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಲಿದೆ.
ಇದನ್ನೂ ಓದಿ: Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಏರಿಕೆ ಆಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವು ನಿರ್ಮಲವಾಗಿರಲಿದೆ. ಬೆಳಗಿನ ಜಾವವು ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 18 ಡಿ.ಸೆ ಇರಲಿದೆ.
ಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 33 ಡಿ.ಸೆ – 18 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ