Site icon Vistara News

Karnataka Weather : ದಿನವೆಲ್ಲ ಸುಡುವ ಸೂರ್ಯ; ರಾತ್ರಿಯೆಲ್ಲ ಬೀಸುತ್ತೆ ಬಿಸಿ ಗಾಳಿ

Heat wave swells in the state

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಗಲಿನಲ್ಲಿ ಸೂರ್ಯನ ಬಿಸಿಲ ಶಾಖ ಇದ್ದರೆ ರಾತ್ರಿಯಂದು ಬಿಸಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಿರಲಿದೆ.

ಇದನ್ನೂ ಓದಿ: Food Poisoning: ಬಟರ್‌ ಚಿಕನ್‌ ತಿಂದಿದ್ದಕ್ಕೂ ದಿಢೀರ್‌ ಸಾವಿಗೂ ಏನು ಸಂಬಂಧ? ಇದೊಂದು ವಿಚಿತ್ರ ಕಾಯಿಲೆ!

ಆಗಾಗ ದರ್ಶನ ಕೊಡುವ ಸೂರ್ಯ

ಬೆಂಗಳೂರು ಸುತ್ತಮುತ್ತ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು ಅಂದಾಜಿಸಲಾಗಿದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 20 ಡಿ.ಸೆ
ಮಂಗಳೂರು: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 20 ಡಿ.ಸೆ
ಕಲಬುರಗಿ: 39 ಡಿ.ಸೆ – 25 ಡಿ.ಸೆ
ಬೆಳಗಾವಿ: 36 ಡಿ.ಸೆ – 17 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version