Site icon Vistara News

Karnataka Weather: ಕರಾವಳಿ, ಮಲೆನಾಡಲ್ಲಿ ಭಾರಿ ಚಳಿ; ಉತ್ತರ ಒಳನಾಡಲ್ಲೂ ತಾಪಮಾನ ಇಳಿಕೆ

Hot and cold weather in Karnataka

ಬೆಂಗಳೂರು: ರಾಜ್ಯದಲ್ಲಿ ಒಣಹವೆಯ (Dry weather) ಜತೆ ಜತೆಗೆ ಚಳಿಯ ವಾತಾವರಣ ಇರಲಿದೆ. ಇನ್ನೊಂದು ವಾರ ಬಿಸಿಲಿನ ವಾತಾವರಣ ಇರಲಿದೆ. ಆದರೆ, ಸಂಜೆಯಾಗುತ್ತಿದ್ದಂತೆ ಚಳಿಯು ಮೇಲುಗೈ ಸಾಧಿಸಲಿದೆ. ಇನ್ನು ಬೆಳಗಿನ ಜಾವ ಹಾಗೂ ರಾತ್ರಿ ಗಾಳಿಯು ವೇಗ ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆಯನ್ನು ನೀಡಿದೆ. ಈ ಚಳಿಗಾಳಿಯು ಚರ್ಮದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ. ಅದೇ ರೀತಿ ರಾತ್ರಿ ಹಾಗೂ ಬೆಳಗಿನ ಜಾವ ಮೈನಡುಗಿಸುವ ಚಳಿ ಉಂಟಾಗಲಿದೆ.

ಇದನ್ನೂ ಓದಿ: Road Accident : ಯಮನಂತೆ ಬಂದ ಲಾರಿ; ಬಸ್ಸಿಗೆ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು

ಉತ್ತರ ಒಳನಾಡಿನಲ್ಲೂ ಚಳಿ

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಚಳಿಯ ವಾತಾವರಣ ಇರಲಿದೆ. ಬೆಳಗಾವಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕಲಬುರಗಿಯಲ್ಲಿ ಬಿಸಿಲು ಸಹ ಅಷ್ಟೇ ಇರಲಿದೆ. ಅಂದರೆ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಉಳಿದಂತೆ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಹ ಬೆಳಗ್ಗೆ ಒಣ ಹವೆ ಹಾಗೂ ರಾತ್ರಿ ಚಳಿಯ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ. ಕೆಲವು ಕಡೆ ಮಾತ್ರ ಚಳಿಯ ವಾತಾವರಣ ಇರಲಿದ್ದು, ರಾತ್ರಿ ವೇಳೆ ಬೀಸುವ ಗಾಳಿಗೆ ಮೈಯೊಡ್ಡುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಬೆಂಗಳೂರಲ್ಲಿ ಕನಿಷ್ಠ ತಾಪಮಾನ 17 ಡಿ.ಸೆ!

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿನಿಂದ ಕೂಡಿದ್ದರೆ, ಸಂಜೆ ಹಾಗೂ ರಾತ್ರಿ ವೇಳೆ ಚಳಿಯ ವಾತಾವರಣ ಇರಲಿದೆ. ಮಂಗಳವಾರ ಮುಂಜಾನೆ ಕೆಲವು ಕಡೆ ದಟ್ಟ ಮಂಜು ಆವರಿಸಿತ್ತು. ಬುಧವಾರವೂ ಇದೇ ರೀತಿ ಇರಲಿದೆ ಎಂದು ಅಂದಾಜಿಸಲಾಗಿದೆ. ಸಂಜೆ ವೇಳೆಗೆ ಚಳಿ ಹೆಚ್ಚಲಿದೆ. ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 17 ಡಿ.ಸೆ. ಇರಲಿದೆ.

ಇದನ್ನೂ ಓದಿ: Ram Mandir : ‘ಪೂಜಿಸಲೆಂದೆ ಹೂಗಳ ತಂದೆ’ ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 15 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 34 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 20 ಡಿ.ಸೆ

Exit mobile version