ಬೆಂಗಳೂರು: ಮುಂದಿನ 24 ಗಂಟೆ (ಗುರುವಾರ) ರಾಜ್ಯದಲ್ಲಿ ಒಣಹವೆ (Dry Weather) ಜತೆ ಜತೆಗೆ ಕೆಲವು ಕಡೆ ಭಾರಿ ಪ್ರಮಾಣದಲ್ಲಿ ಚಳಿ ಬೀಳಲಿದೆ. ಅದರಲ್ಲೂ ರಾತ್ರಿ ವೇಳೆ ಹಾಗೂ ಬೆಳಗಿನ ಜಾವ ಚಳಿಯು ಜೋರು ಇರಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು, ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಕಾರಣ ಚಳಿಯು ಹೆಚ್ಚಾಗುತ್ತದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ. ಅಲ್ಲದೆ, ಜನವರಿ 26ಕ್ಕೆ ಗಣರಾಜ್ಯೋತ್ಸವ ರಜೆ ಇದೆ. ಹೀಗಾಗಿ ಮಲೆನಾಡಿನ ಪ್ರದೇಶಗಳಿಗೆ ಟ್ರಿಪ್ ಹೋಗುತ್ತೇವೆ ಎಂದು ಪ್ಲಾನ್ ಹಾಕಿಕೊಂಡಿದ್ದರೆ ಸೂಕ್ತ ತಯಾರಿ ಮಾಡಿಕೊಳ್ಳಿ. ಏಕೆಂದರೆ ಅಲ್ಲಿ ತುಂಬಾ ಚಳಿ ಇದೆ!
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಸೆಕೆಯು ಸಹ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಆದರೆ, ಚಳಿಗಾಳಿಯು ತ್ವಚೆಯ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಹೊರಗೆ ಹೊರಡುವಾಗ ಮೈಯನ್ನು ಬೆಚ್ಚನೆ ಇಟ್ಟುಕೊಳ್ಳುವಂತಹ ಉಡುಪುಗಳನ್ನು ಧರಿಸಿ ಹೋಗುವುದು ಉತ್ತಮ.
ಬೆಂಗಳೂರಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್
ಬೆಂಗಳೂರಲ್ಲಿ ಗುರುವಾರ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ತುಂಬಿಕೊಂಡು ಇರಲಿದೆ. ರಾತ್ರಿ ವೇಳೆಯಿಂದಲೇ ಚಳಿ ತನ್ನ ಪ್ರಭಾವವನ್ನು ಬೀರುತ್ತದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Star Fashion: ಬೆಂಗಳೂರಿನ ಚುಮು ಚುಮು ಚಳಿಗೆ ಬದಲಾಯಿತು ನಟ ಶೈನ್ ಶೆಟ್ಟಿ ವಿಂಟರ್ ಫ್ಯಾಷನ್!
ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ಭಯಂಕರ ಚಳಿ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬೆಳಗ್ಗೆ ವೇಳೆ ಬಿಸಿಲಿನ ವಾತಾವರಣ ಇದ್ದರೂ ರಾತ್ರಿ ವೇಳೆ ಭಯಂಕರ ಚಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.
ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 33 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 13 ಡಿ.ಸೆ
ಹೊನ್ನಾವರ: 31 ಡಿ.ಸೆ- 17 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 10 ಡಿ.ಸೆ
ಕಾರವಾರ: 34 ಡಿ.ಸೆ – 17 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ