Karnataka Weather : ಬೆಂಗಳೂರಲ್ಲಿ ಮಳೆ ಮುನಿಸು; ಕರಾವಳಿ, ಮಲೆನಾಡಲ್ಲಿ ಬಿರುಗಾಳಿ ಎಚ್ಚರಿಕೆ - Vistara News

ಮಳೆ

Karnataka Weather : ಬೆಂಗಳೂರಲ್ಲಿ ಮಳೆ ಮುನಿಸು; ಕರಾವಳಿ, ಮಲೆನಾಡಲ್ಲಿ ಬಿರುಗಾಳಿ ಎಚ್ಚರಿಕೆ

Rain News : ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯ ಸಿಂಚನವಾಗಿದ್ದು, ಬೆಂಗಳೂರಲ್ಲಿ ಮುನಿಸುಕೊಂಡಂತೆ ಕಾಣುತ್ತಿದೆ.

VISTARANEWS.COM


on

Karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶನಿವಾರ ದಾವಣಗೆರೆಯ ಹೆಬ್ಬಾಳು, ಹುಣಸೇಕಟ್ಟೆ, ಹಾಲುವರ್ತಿ ಸೇರಿದಂತೆ ಹಲವೆಡೆ (Rain News) ಮಳೆಯಾಗಿದೆ. ಬಿಸಿಲಿ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪು ಸೂಸಿದ್ದಾನೆ. ರಾಷ್ಟ್ರೀಯ ಹೆದ್ದಾರಿ ಹೆಬ್ಬಾಳ್‌ ಟೋಲ್ ಬಳಿ ಇರುವ ಅಂಗಡಿಗಳಿಗೆ ನೀರು ನುಗ್ಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿದೆ. ಇತ್ತ ಬಿಸಿಲ ನಾಡು ಬಾಗಲಕೋಟೆಯಲ್ಲೂ ಸಂಜೆಯಾಗುತ್ತಿದ್ದಂತೆ ಮಳೆಯು ಅಬ್ಬರಿಸುತ್ತಿದೆ. ಸತತ ಮಳೆಯಿಂದ ಬಿಸಿಲಿನ ತಾಪ ಕುಗ್ಗಿದೆ. ನವನಗರ, ವಿದ್ಯಾಗಿರಿ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು ಮಿಂಚು ಸಹಿತ (Karnataka Weather Forecast) ಮಳೆಯಾಗಿದೆ.

ಸಿಡಿಲು ಬಡಿದು ಕುಸಿದ ದೇವಸ್ಥಾನದ ಗೋಪುರ

ಶನಿವಾರ ಸಂಜೆ ಕೊಪ್ಪಳದಲ್ಲೂ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ದೇವಸ್ಥಾನದ ಗೋಪುರ ಕುಸಿದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿ ತಾಂಡದಲ್ಲಿ ಘಟನೆ ನಡೆದಿದೆ. ದುರ್ಗಾದೇವಿಯ ಗೋಪುರಕ್ಕೆ ಸಿಡಿಲು ಬಡಿದಿದ್ದು, ಗೋಪುರದ ಕುಸಿತದಿಂದ ಭಕ್ತರು ಆತಂಕದಲ್ಲಿದ್ದಾರೆ. ಸಿಡಿಲಿನ ಹೊಡೆತಕ್ಕೆ ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿತಗೊಂಡಿದೆ.

Karnataka Weather

ಇದನ್ನೂ ಓದಿ: Rain News: ಬಿರುಗಾಳಿ ಸಹಿತ ಭಾರಿ ಮಳೆ; ಆಕಾಶದೆತ್ತರಕ್ಕೆ ಹಾರಿತು ಮನೆಗಳ ತಗಡು, ಮಳೆಯಲ್ಲೇ ಬೀಗರ ಊಟ

ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು, ಬಿರುಗಾಳಿ ಜತೆಗೆ ಮಳೆಯು ದಾಳಿ ಮಾಡುತ್ತಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರಿ ವರ್ಷಧಾರೆ ಆಗಲಿದೆ. ಏಪ್ರಿಲ್‌ 14ರಂದು ಕರಾವಳಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು, ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸಲಿದೆ.

ಕರಾವಳಿಯಲ್ಲಿ ಗಂಟೆಗೆ 30-40 ಕಿ.ಮೀ ಮತ್ತು ಒಳನಾಡಿನಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿಯ ವೇಗವು ಪ್ರಬಲ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇದೆ. ಹೀಗಾಗಿ ಹೊರಗೆ ಹೋಗುವಾಗ ಎಚ್ಚರವಹಿಸಿ.

ಬೆಂಗಳೂರಿಗೆ ಇಲ್ವಾ ಮಳೆ ಸೂಚನೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಳೆಯಾಗುವ ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ. ಗರಿಷ್ಠ 35, ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಗುಡುಗು-ಸಿಡಿಲು ಎಚ್ಚರಿಕೆ

ರಾಜ್ಯದ ಒಂದೆರಡು ಕಡೆಗಳಲ್ಲಿ ಸಿಡಿಲು ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಜನರು ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಮುನ್ನೆಚ್ಚರಿಕೆಯನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ. ಹೊರಗೆ ಹೋಗುವಾಗ ಹವಾಮಾನ ಮುನ್ಸೂಚನೆ ಮೆಸೇಜ್‌ಗಳನ್ನು ಚೆಕ್‌ ಮಾಡಿಕೊಳ್ಳಿ. ಮಳೆ ಸಮಯದಲ್ಲಿ ವಿಶೇಷವಾಗಿ ಹೊಲ, ತೋಟದಲ್ಲಿ ಕೆಲಸ ಮಾಡಲು ಮನೆಯಿಂದ ಹೊರಗೆ ಹೋಗಬೇಡಿ.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಪ್ರವಾಹ ಇಳಿದು ಬರದಂತಹ ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯಿರಿ.‌ ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಿ. ವಿದ್ಯುತ್ ಉಪಕರಣ, ವಿದ್ಯುತ್‌ ಲೈನ್‌ಗಳು, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಮರಗಳ ಕೆಳಗೆ ಆಶ್ರಯ ಪಡೆಯಿರಿ. ಲೋಹದ ವಸ್ತುಗಳನ್ನು ಬಳಸಬಾರದು. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ. ಸಿಡಿಲಿನ ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬೇಡಿ. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರಿ. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

ಸಿಡಿಲಿನ ಸಂದರ್ಭದಲ್ಲಿಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್‌ ಹರಿಯುವ ಸಾಧ್ಯತೆ ಇದೆ. ಹೀಗಾಗಿ ಆಗ ಸ್ನಾನ ಮಾಡಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನ ಸಂಚಾರ ಬೇಡ. ಆಟದ ಮೈದಾನ, ಉದ್ಯಾನವನಗಳು, ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Karnataka Weather: ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಇನ್ನು ನಾಲ್ಕೈದು ದಿನ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ತಾಪಮಾನ (Karnataka Weather) ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ ಉತ್ತರ ಕರ್ನಾಟಕ ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗುತ್ತಿದೆ. ರಾಯಚೂರಿನಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 43 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ. ಇನ್ನು ಮಂಗಳವಾರವೂ ಕೂಡ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆ ದಾಖಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sadhguru Jaggi Vasudev
ಬೆಂಗಳೂರು15 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ20 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ37 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ46 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ55 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ1 hour ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ2 hours ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌